ಹೊಸಪೇಟೆ: ಜಿಲ್ಲಾಡಳಿತ, ಜಿಪಂ ವತಿಯಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮೂಲಕ ಜನಸ್ಪಂದನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಶನಿವಾರ ಚಾಲನೆ ನೀಡಿದರು.
ಸಕ್ಕರೆ ಕಾರ್ಖಾನೆಗೆ ಆಗ್ರಹ: ರೈತ ಸಂಘದ ಅಧ್ಯಕ್ಷ ಟಿ. ನಾಗರಾಜ ಸಕ್ಕರೆ ಕಾರ್ಖಾನೆ ಸ್ಥಾಪನೆಗೆ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಸಚಿವ ಜಮೀರ್ ಅವರು ಮುಖ್ಯಮಂತ್ರಿ ಜತೆಗೆ ಚರ್ಚಿಸಲಾಗುವುದು ಎಂದರು.
ಕಾರಿಗನೂರುನ 23ನೇ ವಾರ್ಡ್‌ನಲ್ಲಿ ಮೂಲಸೌಕರ್ಯ ಕಲ್ಪಿಸಲು ಹಾಗೂ ಮನೆಗಳ ನೋಂದಣಿಗೆ ಅರ್ಜಿ ಸಲ್ಲಿಸಲಾಯಿತು. ನಿವೇಶನ, ಮನೆಗಳ ಅರ್ಜಿಗಳು ಕೂಡ ಸಲ್ಲಿಕೆಯಾದವು.ಪಿಯುಸಿ ಟಾಪರ್‌ಗಳಿಗೆ ತಲಾ ಐದು ಲಕ್ಷ ರು., ಸ್ಕೂಟಿ ಕಾಣಿಕೆ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಸಾಧನೆ ಮಾಡಿದ ಸಂಜನಾಬಾಯಿ, ಕೆ. ನಿರ್ಮಲಾ ಅವರನು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸನ್ಮಾನಿಸಿದರು. ಜತೆಗೆ ತಲಾ ₹5 ಲಕ್ಷ ಮತ್ತು ಒಂದೊಂದು ಸ್ಕೂಟಿ ಗಿಫ್ಟ್ ನೀಡಿದರು. ಲೈಸೆನ್ಸ್ ಆಗುವವರೆಗೆ ಸ್ಕೂಟಿ ತಂದೆ, ತಾಯಿಗಳಿಗೆ ನೀಡಲು ತಿಳಿಸಿದರು.
ಇನ್ನು ಎಸ್‌ಎಸ್‌ಎಲ್‌ಸಿಯಲ್ಲಿ 625ಕ್ಕೆ 624 ಅಂಕ ಗಳಿಸಿರುವ ಯಶವಂತ್ ಮತ್ತು 625ಕ್ಕೆ 622 ಅಂಕ ಗಳಿಸಿರುವ ಹರಪನಹಳ್ಳಿ ಬಾಲಕ ನಿಹಾರ್ ಅವರಿಗೆ ತಲಾ ₹1 ಲಕ್ಷ ಮತ್ತು ಸ್ಕೂಟಿ ನೀಡುವುದಾಗಿ ಘೋಷಿಸಿದರು.
ಕೂಡ್ಲಿಗಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್, ಹುಡಾ ಅಧ್ಯಕ್ಷ ಎಚ್.ಎನ್.ಎಫ್. ಇಮಾಮ್ ನಿಯಾಜಿ, ಮಾಜಿ ಶಾಸಕ ಸಿರಾಜ್ ಶೇಕ್, ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ, ಜಿಪಂ ಸಿಇಒ ಅಕ್ರಂ ಷಾ, ಎಸ್ಪಿ ಬಿ.ಎಲ್. ಶ್ರೀಹರಿಬಾಬು, ಎಎಸ್ಪಿ ಸಲೀಂ ಪಾಷಾ, ಸಹಾಯಕ ಆಯುಕ್ತ ವಿವೇಕಾನಂದ, ತಹಸೀಲ್ದಾರ್ ಶ್ರುತಿ ಎಂ. ಮತ್ತಿತರರಿದ್ದರು.ಜನಸ್ಪಂದನದಿಂದ ಶಾಸಕ ಗವಿಯಪ್ಪ ದೂರ: ಜನ್ಮದಿನಕ್ಕೆ ಸನ್ಮಾನ