ಸಚಿವ ಸ್ಥಾನ ಪಕ್ಷದ ತೀರ್ಮಾನ: ಎ.ಎಸ್. ಪೊನ್ನಣ್ಣ

KannadaprabhaNewsNetwork |  
Published : Jul 07, 2026, 03:15 AM IST
ಎಎಸ್ ಪೊನ್ನಣ್ಣ | Kannada Prabha

ಸಾರಾಂಶ

ಸಚಿವ ಸಂಪುಟ ವಿಸ್ತರಣೆ ಸಂದರ್ಭ ಯಾವ ರೀತಿ ಪ್ರಾತಿನಿಧ್ಯ ಕೊಡಬೇಕು, ಯಾರಿಗೆಲ್ಲಾ ಸಚಿವ ಸ್ಥಾನ ಕೊಡಬೇಕು ಎಂದು ಪಕ್ಷ ತೀರ್ಮಾನಿಸುತ್ತದೆ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ಮಡಿಕೇರಿ: ಸಚಿವ ಸಂಪುಟ ವಿಸ್ತರಣೆ ಸಂದರ್ಭ ಯಾವ ರೀತಿ ಪ್ರಾತಿನಿಧ್ಯ ಕೊಡಬೇಕು, ಯಾರಿಗೆಲ್ಲಾ ಸಚಿವ ಸ್ಥಾನ ಕೊಡಬೇಕು ಎಂದು ಪಕ್ಷ ತೀರ್ಮಾನಿಸುತ್ತದೆ ಎಂದು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಹೇಳಿದ್ದಾರೆ.

ಮಡಿಕೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಸಚಿವ ಸಂಪುಟ ವಿಸ್ತರಣೆಗೆ ಎಲ್ಲರೂ ಕಾಯುತ್ತಿದ್ದಾರೆ. ವಿಸ್ತರಣೆ ಬೇಗ ಆಗಬೇಕು ಎಂದು ಚರ್ಚೆ ಆಗುತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ, ಮಾಜಿ ಮುಖ್ಯಮಂತ್ರಿ ಹಾಗೂ ಹೈಕಮಾಂಡ್ ಸೇರಿ ತೀರ್ಮಾನಿಸುತ್ತಾರೆ ಎಂದರು.

ಕೊಡಗಿಗೆ ಸಚಿವ ಸ್ಥಾನ ಕೊಡಬೇಕೆಂದು ಬೇಡಿಕೆ ಇದೆ. ಜಿಲ್ಲೆಯಿಂದ ಎಲ್ಲರೂ ಬೇಡಿಕೆ ಇಟ್ಟಿದ್ದಾರೆ. ಸಿಎಂ ಮತ್ತು ಮಾಜಿ ಸಿಎಂ ಅವರನ್ನು ಭೇಟಿಯಾಗಿ ಬೇಡಿಕೆ ಸಲ್ಲಿಸಿದ್ದಾರೆ. ಇದನ್ನು ನಾನೂ ನೋಡಿದ್ದೇನೆ ಅಷ್ಟೆ ಎಂದರು.

ಬಿಜೆಪಿಗೆ ತಿರುಗೇಟು: ಅಕ್ರಮ ಬಾಂಗ್ಲಾದೇಶಿಗರಿಗೆ ಪೌರತ್ವ ಕೊಡಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ. ಬೀದಿ ಬೀದಿಗಳಲ್ಲಿ ಎನ್ಯುಮೇರೇಷನ್ ಅರ್ಜಿ ವಿತರಿಸಲಾಗುತ್ತಿದೆ ಎನ್ನುವ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದ ಪೊನ್ನಣ್ಣ ಎಸ್‌ಐಆರ್ ಮಾಡುತ್ತಿರುವುದು ಯಾರು ? ಕಾಂಗ್ರೆಸ್ ಎಸ್‌ಐಆರ್ ಮಾಡುತ್ತಿದೆಯೇ ಎಂದು ಪ್ರಶ್ನಿಸಿದರು. ಚುನಾವಣಾ ಆಯೋಗ ಎಸ್‌ಐಆರ್ ಮಾಡುತ್ತಿದೆ. ಚುನಾವಣಾ ಆಯೋಗ ಯಾರ ಕೈಯಲ್ಲಿ ಇದೆ ? ನಾವು ಹೇಳಿದಂತೆ ಚುನಾವಣಾ ಆಯೋಗ ಕೇಳುತ್ತದೆಯೇ ? ಎಂದು ಪ್ರಶ್ನಿಸಿದ ಪೊನ್ನಣ್ಣ, ಪಶ್ಚಿಮ ಬಂಗಾಳ, ತಮಿಳುನಾಡು ಕೇರಳದಲ್ಲಿ ಎಸ್‌ಐಆರ್ ಆಗುವಾಗ ನಾವು ವಿರೋಧಿಸಿದೆವು. ಆಗ ಇವರು ನಮ್ಮನ್ನು ಲೇವಡಿ ಮಾಡಿದರು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆಲಮಟ್ಟಿಗೆ ಒಳಹರಿವು ಆರಂಭ; ಅವಳಿ ಜಿಲ್ಲೆಯ ಜನತೆಯಲ್ಲಿ ಸಂಭ್ರಮ
ಪ್ಯಾಸೆಂಜರ್‌ ರೈಲು ಆರಂಭಿಸಲು ಸಂಸದ ಗದ್ದಿಗೌಡರ ಸ್ಪಂದನೆ