ಐದು ತಿಂಗಳ ಗರ್ಭಿಣಿಯಾದ ವಸತಿ ಶಾಲೆಯ ಅಪ್ರಾಪ್ತ ವಿದ್ಯಾರ್ಥಿನಿ

KannadaprabhaNewsNetwork |  
Published : Feb 07, 2026, 01:30 AM ISTUpdated : Feb 07, 2026, 03:13 PM IST
Pregnancy

ಸಾರಾಂಶ

ದಸರಾ ರಜೆಗೆ ಊರಿಗೆ ಹೋಗಿ ವಸತಿ ಶಾಲೆಗೆ ಹಿಂತಿರುಗಿದ ವಿದ್ಯಾರ್ಥಿನಿಯ ದೈಹಿಕ ಬದಲಾವಣೆಗಳ ಏರುಪೇರಿನಿಂದ ಸಂಶಯಗೊಂಡ ವಸತಿ ಶಾಲೆಯ ನಿಯಮ ಪಾಲಕಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಈ ಅಂಶ ಖಚಿತಗೊಂಡಿದೆ.

ಚಿಂತಾಮಣಿ: ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು 5 ತಿಂಗಳ ಗರ್ಭಿಣಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ರಾಣಿ ಚೆನ್ನಮ್ಮ ವಸತಿ ಶಾಲೆಯ ವಿದ್ಯಾರ್ಥಿನಿ

ತಾಲೂಕಿನ ಕೆ.ರಾಗುಟ್ಟಹಳ್ಳಿಯ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 10ನೇ ತರಗತಿಯ ವಿದ್ಯಾರ್ಥಿನಿ ಗರ್ಭಿಣಿಯಾಗಿದ್ದು, ದಸರಾ ರಜೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿ ಊರಿಗೆ ಹೋಗಿದ್ದ ಸಂದರ್ಭದಲ್ಲಿ ತನ್ನ ಸೋದರ ಮಾವನಿಂದಲೇ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿ 5 ತಿಂಗಳ ಗರ್ಭಿಣಿ ಎಂಬುದು ತಿಳಿದು ಬಂದಿದೆ.

ಆಸ್ಪತ್ರೆಗೆ ದಾಖಲಿಸಿದಾಗ ಈ ಅಂಶ ಖಚಿತ

ದಸರಾ ರಜೆಗೆ ಊರಿಗೆ ಹೋಗಿ ವಸತಿ ಶಾಲೆಗೆ ಹಿಂತಿರುಗಿದ ವಿದ್ಯಾರ್ಥಿನಿಯ ದೈಹಿಕ ಬದಲಾವಣೆಗಳ ಏರುಪೇರಿನಿಂದ ಸಂಶಯಗೊಂಡ ವಸತಿ ಶಾಲೆಯ ನಿಯಮ ಪಾಲಕಿ ವಿದ್ಯಾರ್ಥಿನಿಯನ್ನು ಆಸ್ಪತ್ರೆಗೆ ದಾಖಲಿಸಿದಾಗ ಈ ಅಂಶ ಖಚಿತಗೊಂಡಿದೆ.

ಕೆಂಚರ‍್ಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲು ಮಾಡಿಕೊಂಡಿದ್ದು, ಕೃತ್ಯವನ್ನು ಎಸಗಿದ ಸೋದರ ಮಾವನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಸ್ಥಳಕ್ಕೆ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಬಾಲಕಿಗೆ ನ್ಯಾಯ ಒದಗಿಸುವ ಭರವಸೆ ನೀಡಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಗ್ಯಾಸ್‌ ಸಿಗದಿರುವುದಕ್ಕೆ ಸರ್ಕಾರದವಿರುದ್ಧ ಆಟೋ ಚಾಲಕರ ಆಕ್ರೋಶ
ಏಕ ಬಳಕೆ ಪ್ಲಾಸ್ಟಿಕ್ ಬಳಸಿದರೆ 5 ಲಕ್ಷ ದಂಡ : ಜಿಬಿಎ ಎಚ್ಚರಿಕೆ