- ದಕ್ಷಿಣ ಕ್ಷೇತ್ರ ಮತಸಮರ: ಎಸ್ಸೆಸ್ಸೆಂ-ಜಬ್ಬಾರ್ ಪರ ಗುಂಪುಗಳಿಂದ ಪರ-ವಿರೋಧದ ಘೋಷಣೆಗಳು
- ಜಮೀರ್ ಅಹ್ಮದ್, ಲಕ್ಷ್ಮೀ ಹೆಬ್ಬಾಳ್ಕರ್, ಸಂತೋಷ್ ಲಾಡ್ ಮತ್ತಿತರರು ಸಭೆಗೆ ಗೈರು
- - -ಕನ್ನಡಪ್ರಭ ವಾರ್ತೆ ದಾವಣಗೆರೆ
ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಚುನಾವಣಾ ಉಸ್ತುವಾರಿ ಸಮಿತಿ ಸಭೆ ಎಂಎಲ್ಸಿ ಮಂಜುನಾಥ ಭಂಡಾರಿ ನೇತೃತ್ವದಲ್ಲಿ ನಡೆಯುತ್ತಿತ್ತು. ಸಭೆಯಲ್ಲಿ ಆಕಾಂಕ್ಷಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲಾಗುತ್ತಿತ್ತು. ಈ ವೇಳೆ ಎಸ್.ಎಸ್. ಮಲ್ಲಿಕಾರ್ಜುನ ಹಾಗೂ ಅಬ್ದುಲ್ ಜಬ್ಬಾರ್ ಬೆಂಬಲಿಗರ ಮಧ್ಯೆ ತೀವ್ರ ವಾಗ್ವಾದ ಶುರುವಾಯಿತು.
ಘೋಷಣೆಗಳು ಹೆಚ್ಚಾಗುತ್ತಿದ್ದಂತೆಯೇ ಸಭೆಗೆ ನುಗ್ಗಿದ ನೂರಾರು ಕಾರ್ಯಕರ್ತರು ತೀವ್ರ ಅಸಮಾಧಾನಗೊಂಡು, ಸಭೆಯಲ್ಲಿ ಗದ್ದಲದ ವಾತಾವರಣಕ್ಕೆ ಕಾರಣರಾದರು. ಟಿಕೆಟ್ ಆಕಾಂಕ್ಷಿಗಳು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಲು ಮಂಜುನಾಥ ಭಂಡಾರಿ, ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಎಚ್.ಆಂಜನೇಯ ಇತರರು ಬಂದಿದ್ದರು. ಆದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬಾರದೇ ಇದ್ದುದನ್ನು ಕಂಡ ರೇವಣ್ಣ ಸಹ ಒಂದು ಕ್ಷಣ ತಾಳ್ಮೆ ಕಳೆದುಕೊಂಡು ಜೋರು ಮಾಡಿದರು. ಆದರೆ, ಪರಿಸ್ಥಿತಿ ನಿಯಂತ್ರಣಕ್ಕೆ ಬರಲೇ ಇಲ್ಲ. ಟಿಕೆಟ್ ವಿಚಾರವಂತೂ ನೀ ಕೊಡೆ, ನಾ ಬಿಡೆ ಎಂಬಂತಾಗಿತ್ತು.
ಕಡೆಗೆ ಎಚ್.ಎಂ.ರೇವಣ್ಣ ಮಾತನಾಡಿ, ಅಭ್ಯರ್ಥಿಗಳ ಬೇಡಿಕೆಗಳು ಬೇರೆ ಬೇರೆ ರೀತಿ ಇರುತ್ತವೆ. ಎಲ್ಲರಿಗೂ ಟಿಕೆಟ್ ಕೇಳುವ ಹಕ್ಕು ಇರುತ್ತದೆ, ಕೇಳುತ್ತಿದ್ದಾರೆ. ನಮಗೆ ಚುನಾವಣೆಯಲ್ಲಿ ಗೆಲ್ಲುವುದು ಮುಖ್ಯ. ಹಾಗಾಗಿಯೇ ಚರ್ಚೆ ಮಾಡುತ್ತೇವೆ. ಯಾರಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾರೆ ಎಂಬುದನ್ನು ನೋಡಿ, ಟಿಕೆಟ್ ಕೊಡುತ್ತೇವೆ. ಇಷ್ಟು ಬೇಗ ಚುನಾವಣೆ ಬರುತ್ತದೆಂದು ನಾವ್ಯಾರೂ ನಿರೀಕ್ಷೆ ಮಾಡಿರಲಿಲ್ಲ. ಮಾ.23ರೊಳಗೆ ಅಭ್ಯರ್ಥಿ ಘೋಷಣೆ ಮಾಡಲೇಬೇಕು, ಮಾಡುತ್ತೇವೆ. ಕಾಂಗ್ರೆಸ್‌ನಲ್ಲಿ ಎಲ್ಲ ವರ್ಗದವರೂ ಟಿಕೆಟ್ ಆಕಾಂಕ್ಷಿಗಳಿರುತ್ತಾರೆ. ನಮ್ಮ ಪಕ್ಷ ಯಾವುದೇ ಒಂದು ಜಾತಿ, ವರ್ಗಕ್ಕೆ ಸೀಮಿತವಲ್ಲ. ಅಲ್ಪಸಂಖ್ಯಾತ ಸಮುದಾಯ ಟಿಕೆಟ್ ಕೇಳುವುದರಲ್ಲಿ ತಪ್ಪೇನೂ ಇಲ್ಲ ಎಂದು ಸಮಾಧಾನಿಸಿದರು.
ಸಮಿತಿಯಲ್ಲಿದ್ದ ಸಚಿವರಾದ ಜಮೀರ್ ಅಹ್ಮದ್, ಲಕ್ಷ್ಮೀ ಹೆಬ್ಬಾಳ್ಕರ್, ಸಂತೋಷ್ ಲಾಡ್ ಸೇರಿ 16 ಜನರ ಪೈಕಿ ಬಹುತೇಕರು ದಾವಣಗೆರೆಗೆ ಸಭೆಗೆ ಗೈರಾಗಿದ್ದರು.
(ಕೋಟ್ಸ್)
- ಮಂಜುನಾಥ ಭಂಡಾರಿ, ಕಾಂಗ್ರೆಸ್ ಎಂಎಲ್ಸಿ.
- - - * 21ರಂದು ಅಭ್ಯರ್ಥಿ ಆಯ್ಕೆ ದಕ್ಷಿಣ ಟಿಕೆಟ್ ನೀಡುವಂತೆ ಅಲ್ಪಸಂಖ್ಯಾತ ಸಮುದಾಯ ಕೇಳುವುದರಲ್ಲಿ ತಪ್ಪೇನಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ನಾವೆಲ್ಲರೂ ಒಂದೇ ತಾಯಿ ಮಕ್ಕಳ ತರಹ. ಚುನಾವಣೆ ವೇಳೆ ಇಂತಹ ವಾತಾವರಣ ಸಹಜ. ಟಿಕೆಟ್ ನೀಡಿದ ಅಭ್ಯರ್ಥಿಗೆ ಗೆಲ್ಲಿಸಿ ತರುವುದು ಸಂಪ್ರದಾಯ. ಎಲ್ಲರ ಅಭಿಪ್ರಾಯ ಸಂಗ್ರಹಿಸಿ, ಕೆಪಿಸಿಸಿ ಅಧ್ಯಕ್ಷರಿಗೆ ವರದಿ ನೀಡುತ್ತೇವೆ. ಈಗಾಗಲೇ ಹೈಕಮಾಂಡ್ ಆಂತರಿಕ ಸರ್ವೇ ಮಾಡಿರುತ್ತದೆ. ಎಲ್ಲವನ್ನೂ ನೋಡಿಯೇ ಪಕ್ಷ ತೀರ್ಮಾನಿಸುತ್ತದೆ. ಆಗ್ರೆಸ್ಸಿವ್ ಆಗಿ ತಮ್ಮ ಹಕ್ಕು ಮಂಡಿಸುವುದು ಸಹಜ. ನಾಳೆ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಅಂತಿಮ ವರದಿ ನೀಡುತ್ತೇವೆ. ಮಾ.21ರಂದು ಅಭ್ಯರ್ಥಿ ಆಯ್ಕೆಯಾಗಲಿದೆ.- ಎಚ್.ಆಂಜನೇಯ, ಮಾಜಿ ಸಚಿವ.
- - -(-ಫೋಟೋಗಳಿವೆ.)