ದೊಡ್ಡಬಳ್ಳಾಪುರಕ್ಕೆ ಮಿರ್ಜಾ ಕೊಡುಗೆ ಅನನ್ಯ

KannadaprabhaNewsNetwork |  
Published : Oct 29, 2024, 01:11 AM ISTUpdated : Oct 29, 2024, 01:12 AM IST
ದೊಡ್ಡಬಳ್ಳಾಪುರ ತಾ.ಕಸಾಪ ನೇತೃತ್ವದಲ್ಲಿ ಸರ್.ಮಿರ್ಜಾ ಇಸ್ಮಾಯಿಲ್‌ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು. | Kannada Prabha

ಸಾರಾಂಶ

ದೊಡ್ಡಬಳ್ಳಾಪುರ: ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು.

ದೊಡ್ಡಬಳ್ಳಾಪುರ: ಮೈಸೂರಿನ ದಿವಾನರಾಗಿದ್ದ ಸರ್ ಮಿರ್ಜಾ ಇಸ್ಮಾಯಿಲ್ ಅವರು ದೊಡ್ಡಬಳ್ಳಾಪುರದ ಸಮಗ್ರ ಅಭಿವೃದ್ದಿಗೆ ನೀಡಿದ ಕೊಡುಗೆ ಅಪಾರವಾಗಿದೆ ಎಂದು ಜವಾಹರ ನವೋದಯ ವಿದ್ಯಾಲಯ ನಿವೃತ್ತ ಅಧ್ಯಾಪಕ ವಿ.ಎಸ್.ಹೆಗಡೆ ತಿಳಿಸಿದರು. ಅವರು ದೊಡ್ಡಬಳ್ಳಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ವತಿಯಿಂದ ಶ್ರೀಲಕ್ಷ್ಮಿ ಲಲಿತ ನಾಟ್ಯ ಕಲಾ ಕೇಂದ್ರದಲ್ಲಿ ನಡೆದ ಸರ್ ಮಿರ್ಜಾ ಇಸ್ಮಾಯಿಲ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ದೊಡ್ಡಬಳ್ಳಾಪುರದ ಲೋಕಸೇವಾನಿರತ ಡಿ.ಕೊಂಗಾಡಿಯಪ್ಪ ಅವರು ಮಿರ್ಜಾ ಇಸ್ಮಾಯಿಲ್ ಅವರಿಗೆ ಬಹಳ ಪ್ರೀತಿಪಾತ್ರರಾಗಿದ್ದರು. ಮಿರ್ಜಾ ದಿವಾನರಾಗಿದ್ದ ಅವಧಿಯಲ್ಲಿ ವಿದ್ಯುತ್, ಕುಡಿಯುವ ನೀರಿನ ಸೌಲಭ್ಯ,ಮುನಿಪಲ್ ಹೈಸ್ಕೂಲ್, ಹೆರಿಗೆ ಆಸ್ಪತ್ರೆ, ಪಶುವೈದ್ಯ ಆಸ್ಪತ್ರೆ ಮುಂತಾದ ಮೂಲಭೂತ ಸೌಲಭ್ಯಗಳನ್ನು ಮತ್ತು ಅಭಿವೃದ್ಧಿ ಯೋಜನೆಗಳನ್ನು ತಾಲೂಕಿನಲ್ಲಿ ಸಾಕಾರಗೊಳಿಸಿದರು ಎಂದರು.

ದೂರದೃಷ್ಟಿಯ ಆಡಳಿತಗಾರರಾಗಿದ್ದ ಅವರು, ಅಧಿಕಾರದ ಅವಧಿಯಲ್ಲಿ ಕೈಗಾರಿಕೆ, ನೀರಾವರಿ, ಶಿಕ್ಷಣ, ವಸತಿ ನಿಲಯಗಳು, ಹಳ್ಳಿಗಳಿಗೆ ವಿದ್ಯುತ್ ಸೌಲಭ್ಯ ರಸ್ತೆಗಳ ನಿರ್ಮಾಣ ಸೇರಿದಂತೆ ರಾಜ್ಯದ ಅಭಿವೃದ್ಧಿಗೆ ಕೊಡುಗೆ ನೀಡಿದರು. ಕೃಷ್ಣರಾಜಸಾಗರದಲ್ಲಿ ಉದ್ಯಾನವನವನ್ನು ನಿರ್ಮಿಸಿ ವಿಶ್ವಖ್ಯಾತಿಗೊಳಿಸಿದರು ಎಂದರು.

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ಪ್ರೊ.ಕೆ.ಆರ್.ರವಿಕಿರಣ್ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತಿನ ಸಮಗ್ರ ಅಭಿವೃದ್ಧಿಗೆ ಮಿರ್ಜಾ ಇಸ್ಮಾಯಿಲ್‍ರವರ ಕೊಡುಗೆ ಅಪಾರವಾಗಿದೆ. ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ವಿಶ್ವೇಶ್ವರಯ್ಯ ನವರಿಂದ ಸ್ಥಾಪಿಸಲ್ಪಟ್ಟಂತಹ ಕನ್ನಡ ಸಾಹಿತ್ಯ ಪರಿಷತ್ತು ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯಾಗಿದೆ. ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಕಟ್ಟಡದ ನಿವೇಶನವನ್ನು ನೀಡಿ ಬೃಹತ್ ಮಂದಿರವನ್ನು ನಿರ್ಮಾಣ ಮಾಡಲು ಮಿರ್ಜಾ ಸಂಪೂರ್ಣ ಸಹಕಾರ ನೀಡಿ ಕನ್ನಡಾಭಿಮಾನ ಮೆರೆದಿದ್ದರು ಎಂದರು.

ತಾಲೂಕು ಕಸಾಪ ಅಧ್ಯಕ್ಷ ಪಿ.ಗೋವಿಂದರಾಜು ಅಧ್ಯಕ್ಷತೆ ವಹಿಸಿದ್ದರು. ಕಸಬಾ ಹೋಬಳಿ ಘಟಕದ ಕೋಶಾಧ್ಯಕ್ಷ ಜಿ.ಸುರೇಶ್, ಪ್ರತಿನಿಧಿ ಸಫೀರ್, ದೇವಾಂಗ ಮಂಡಳಿ ನಿರ್ದೇಶಕ ಕೆ.ಎಸ್.ಮಂಜುನಾಥ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ ಸಹಾಯಕ್ತ ಆಯುಕ್ತ ವೆಂಕಟರಾಜು, ಶ್ರೀ ಲಕ್ಷ್ಮೀ ಲಲಿತ ನಾಟ್ಯ ಕಲಾ ಸಂಘದ ಅಧ್ಯಕ್ಷ ಗುರುಪ್ರಸಾದ್, ಕಾರ್ಯದರ್ಶಿ ಕವಿತಾ, ನೃತ್ಯಪಟು ತೇಜಸ್ವಿನಿ, ಪತ್ರಕರ್ತ ಕೃಷ್ಣಪ್ರಸಾದ್, ಲಕ್ಷ್ಮೀನಾರಾಯಣ ಮತ್ತು ಸಾಂಸ್ಕೃತಿಕ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಫೋಟೋ-

28ಕೆಡಿಬಿಪಿ1- ದೊಡ್ಡಬಳ್ಳಾಪುರ ತಾ.ಕಸಾಪ ನೇತೃತ್ವದಲ್ಲಿ ಸರ್.ಮಿರ್ಜಾ ಇಸ್ಮಾಯಿಲ್‌ ಅವರ ಜನ್ಮದಿನಾಚರಣೆ ಕಾರ್ಯಕ್ರಮ ನಡೆಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

500 ನಾಯಿಗಳಿಗೆ ಚಿಕನ್‌ ರೈಸ್ ನೀಡಲು ವರ್ಷಕ್ಕೆ 1.83 ಕೋಟಿ
ಯಲಹಂಕದಲ್ಲಿ ‘ಚೀನಾದ ಹ್ಯಾಂಗ್‌ಝೌ’ ಮಾದರಿ ರೈಲು ನಿಲ್ದಾಣ