ಕನ್ನಡಪ್ರಭ ವಾರ್ತೆ ಮದ್ದೂರು
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಹಿಂದೆ ನಗರದಲ್ಲಿ ನಡೆದ ಗಣೇಶಮೂರ್ತಿ ವಿಸರ್ಜನೆ ಮೆರವಣಿಗೆ ವೇಳೆ ಕೆಲ ಕಿಡಿಗೇಡಿಗಳು ಕಲ್ಲು ತೂರಾಟದಿಂದ ಸಾಕಷ್ಟು ಅನಾಹುತ ಸಂಭವಿಸಿತು. ಈ ಘಟನೆಯಿಂದಾಗಿ ಈ ಹಿಂದೆ ಇದ್ದ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ನಿಮ್ಮನ್ನು ನಿಯೋಜಿಸಲಾಗಿದೆ. ಹೀಗಾಗಿ ಮುಂದೆ ಯಾವುದೇ ಕಾರಣಕ್ಕೂ ಇಂತಹ ಘಟನೆಗಳು ಸಂಭವಿಸಬಾರದು ಎಂದು ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಈಗಾಗಲೇ ನಾಲ್ಕೈದು ಬಾರಿ ಕೆಡಿಪಿ ಸಭೆ ನಡೆಸಿ ಸಾರ್ವಜನಿಕ ಕೆಲಸ ಕಾರ್ಯಗಳನ್ನು ಸರಿಯಾದ ಸಮಯಕ್ಕೆ ಮಾಡಿಕೊಡುವಂತೆ ಅಧಿಕಾರಿಗಳಿಗೆ ಸಾಕಷ್ಟು ಸೂಚನೆ ನೀಡಿದ್ದರೂ ಅಧಿಕಾರಿಗಳು ತಮ್ಮ ಛಾಳಿ ಮುಂದುವರೆಸಿಕೊಂಡು ಹೋಗುತ್ತಿದ್ದಿರಿ. ಹೀಗೆ ಮುಂದುವರೆದರೆ ಕ್ರಮ ಜರುಗಿಸಬೇಕಾಗುತ್ತದೆ ಎಚ್ಚರಿಕೆ ನೀಡಿದರು.ಕೆಲ ಇಲಾಖೆಗಳಿಂದ ನಡೆಯುತ್ತಿರುವ ಕಾಮಗಾರಿಗಳು ಗುಣಮಟ್ಟದಿಂದ ಕೂಡಿಲ್ಲ ಎಂಬ ದೂರುಗಳು ಸಾರ್ವಜನಿಕರಿಂದ ಕೇಳಿ ಬರುತ್ತಿವೆ. ಸಂಬಂಧ ಪಟ್ಟ ಅಧಿಕಾರಿಗಳು ಆಗಾಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಗುತ್ತಿಗೆದಾರರು ಕಳಪೆ ಕಾಮಗಾರಿ ನಡೆಸಿದ ಮುಲಾಜಿಲ್ಲದೆ ಕಪ್ಪು ಪಟ್ಟಿಗೆ ಸೇರಿಸಲಾಗುವುದು ಎಂದು ಎಚ್ಚರಿದರು.
ವಲಯ ಅರಣ್ಯಾಧಿಕಾರಿ ಗವಿಯಪ್ಪ ಮಾತನಾಡಿ, ತಾಲೂಕಿನಲ್ಲಿ 10ಕ್ಕೂ ಚಿರತೆಗಳಿದ್ದು, ಈಗಾಗಲೇ 4 ಚಿರತೆಗಳನ್ನು ಸೆರೆ ಹಿಡಿಯಲಾಗಿದೆ. ಇನ್ನುಳಿದ ಚಿರತೆ ಸೆರಗೆ 9 ಕಡೆ ಬೋನುಗಳನ್ನು ಇಟ್ಟಿದ್ದು, ಅವುಗಳು ಸಿಗದಿದ್ದ ಪರಿಣಾಮ ಅರವಳಿಕೆ ಮದ್ದು ನೀಡಿ ಸೆರೆ ಹಿಡಿಯಬೇಕಾದ ಅನಿವಾರ್ಯತೆ ಎದುರಾಗುತ್ತದೆ ಎಂದರು.
ವಿವೇಕಾನಂದರಿಂದ ಅಧಿಕಾರಿಗಳ ತರಾಟೆ:
ಇಇ ನಂಜುಂಡೇಗೌಡ ಮಾತನಾಡಿ, ನಾಲೆಗಳ ಆಧುನಿಕರಣ ಕಾಮಗಾರಿಯಿಂದಾಗಿ ನೀರು ಸರಾಗವಾಗಿ ಹರಿಯಲು ತೊಂದರೆಯಾಗಿದೆ. ಇನ್ನು ಮುಂದೆ ಇಂತಹ ತೊಂದರೆ ಆಗದಂತೆ ಕ್ರಮ ವಹಿಸುವುದಾಗಿ ಭರವಸೆ ನೀಡಿದರು.
ಅವ್ವೇರಹಳ್ಳಿಯ ವಸತಿ ಶಾಲೆ ಕಟ್ಟಡ ನಿರ್ಮಾಣ ಕಳೆದ ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿದೆ. ಹೀಗಾಗಿ ವ್ಯಾಸಂಗ ಮಾಡುತ್ತಿರುವ 52 ವಿದ್ಯಾರ್ಥಿಗಳಿಗೆ ಯಾವುದೇ ಮೂಲ ಸೌಲಭ್ಯಗಳಿಲ್ಲದೆ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಈ ಬಗ್ಗೆ ತಾವು ವಿಧಾನ ಪರಿಷತ್ ಸಭೆಯಲ್ಲಿ ಚರ್ಚೆ ನಡೆಸಿದರು ಸಹ ಯಾವುದೇ ಪ್ರಯೋಜನವಾಗಿಲ್ಲ ಹರಿಹಾಯ್ದರು.
ಮಂಡ್ಯದಲ್ಲಿ ಈ ಹಿಂದೆ ನಡೆದ ಕೆಡಿಪಿ ಸಭೆಯಲ್ಲಿ ಸಚಿವ ಎನ್.ಚಲುವರಾಯಸ್ವಾಮಿ ಸಮ್ಮುಖದಲ್ಲಿ ಚರ್ಚೆನಡೆಸಿದ್ದೆ. ಇದಕ್ಕೆ ಸಚಿವರು ಸೋಮನಹಳ್ಳಿ ಬಳಿ ನೂತನ ಕಟ್ಟಡ ನಿರ್ಮಾಣವಾಗುತ್ತಿದೆ ಎಂದು ಸಬೂಬು ಹೇಳಿದ್ದರು ಹೊರತು ಸಮಸ್ಯೆ ಬಗ್ಗೆ ಹರಿದಿಲ್ಲ. ಆನಂತರ ಸಮಾಜ ಕಲ್ಯಾಣ ಇಲಾಖೆ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.