ಶ್ರೀಆಂಜನೇಯ ದೇವಸ್ಥಾನದ ಮುಂದೆ ಮಾಂಸ ಎಸೆದ ಕಿಡಿಗೇಡಿಗಳು!

KannadaprabhaNewsNetwork |  
Published : Nov 16, 2026, 01:30 AM IST
ಗುಂಡ್ಲುಪೇಟೆ  | Kannada Prabha

ಸಾರಾಂಶ

ದೇವಸ್ಥಾನದ ಮುಂಭಾಗದಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಲು ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು. ದೇವಸ್ಥಾನದ ಸುತ್ತಮುತ್ತ ಹಾಗೂ ಕಾರ್ಖಾನೆ ಬೀದಿಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಗೋಹತ್ಯೆ ಮತ್ತು ಗೋಮಾಂಸ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಗುಂಡ್ಲುಪೇಟೆ: ಪಟ್ಟಣದ ಶ್ರೀಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ ಕಿಡಿಗೇಡಿಗಳು ದನದ ಮಾಂಸದ ತ್ಯಾಜ್ಯವನ್ನು ಎಸೆದು ಹೋಗಿರುವ ಘಟನೆ ನಡೆದಿದೆ.

ಆಂಜನೇಯ ದೇವಸ್ಥಾನದ ಮುಂದೆ ಮಾಂಸದ ತ್ಯಾಜ್ಯದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಇದು ಭಕ್ತರಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದ್ದು, ಹಿಂದೂ ಜಾಗರಣಾ ವೇದಿಕೆಯವರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ಉಂಟುಮಾಡುವುದರ ಜೊತೆಗೆ ಭಕ್ತರ ಧಾರ್ಮಿಕ ಭಾವನೆಗಳಿಗೆ ನೋವುಂಟು ಮಾಡುವ ಈ ಕೃತ್ಯದ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕೃತ್ಯವನ್ನು ಖಂಡಿಸಿರುವ ಹಿಂದೂ ಜಾಗರಣ ವೇದಿಕೆಯ ಪದಾಧಿಕಾರಿಗಳು ಮಾಂಸ ಬೀಸಾಕಿದ ಆರೋಪಿಗಳನ್ನು ಕೂಡಲೇ ಪತ್ತೆಹಚ್ಚಿ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಜಿಲ್ಲಾ ಸಂಯೋಜಕರು ಹಾಗೂ ವಕೀಲ ನಂದೀಶ್ ನೇತೃತ್ವದ ನಿಯೋಗ ಶನಿವಾರ ಗುಂಡ್ಲುಪೇಟೆ ಪೊಲೀಸ್ ಠಾಣೆಗೆ ತೆರಳಿ ಪೊಲೀಸ್ ಉಪ ನಿರೀಕ್ಷಕರಿಗೆ ದೂರು ಸಲ್ಲಿಸಿ ಆರೋಪಿಗಳ ಬಂಧನಕ್ಕೆ ಆಗ್ರಹಿಸಿದ್ದಾರೆ.

ದೇವಸ್ಥಾನದ ಮುಂಭಾಗದಲ್ಲಿ ತ್ಯಾಜ್ಯ ಎಸೆದವರನ್ನು ಪತ್ತೆ ಹಚ್ಚಲು ಸುತ್ತ ಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಬೇಕು. ದೇವಸ್ಥಾನದ ಸುತ್ತಮುತ್ತ ಹಾಗೂ ಕಾರ್ಖಾನೆ ಬೀದಿಯಲ್ಲಿ ನಡೆಯುತ್ತಿದೆ ಎನ್ನಲಾದ ಅಕ್ರಮ ಗೋಹತ್ಯೆ ಮತ್ತು ಗೋಮಾಂಸ ಮಾರಾಟದ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.

ಕರ್ನಾಟಕ ಗೋಹತ್ಯೆ ಪ್ರತಿಬಂಧಕ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಮತ್ತು ಇಂಥ ಘಟನೆ ಮರುಕಳಿಸದಂತೆ ದೇವಸ್ಥಾನದ ಬಳಿ ಪೊಲೀಸ್ ಬಂದೋಬಸ್ತ್ ಕಲ್ಪಿಸಬೇಕು ಎಂದು ಮನವಿ ಮಾಡಿದ್ದಾರೆ.

ನಿಯೋಗದಲ್ಲಿ ಮುಖಂಡರಾದ ಪ್ರಣಯ್‌, ಡಾ.ನವೀನ್‌ ಮೌರ್ಯ, ಕಿರಣ್‌ ಗೌಡ, ಗರಗನಹಳ್ಳಿ ಮಹೇಂದ್ರ, ಶಿವಕುಮಾರ್‌, ಗೋವಿಂದನಾಯಕ, ಸುಬ್ಬು, ಸಾಗರ್‌, ಮಂಜು ಶಿವಪುರ ಸೇರಿದಂತೆ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕದಳೀಪ್ರಿಯ ದೇವರಿಗೆ ಕದಳೀಮೇಳ ಆಮಂತ್ರಣ ಸಮರ್ಪಣೆ
ರಂಗ ಚಟುವಟಿಕೆಗಳ ಮೂಲಕ ಉತ್ತಮ ಸಮಾಜ ನಿರ್ಮಾಣ: ಜೀವನ್‌ರಾಮ್ ಸುಳ್ಯ