। ಕೂಲಿ ಹಣದ ವಿಚಾರ ಮಾಲೀಕ-ಕಾರ್ಮಿಕನ ಗಲಾಟೆ । ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಘಟನೆ
ಕೂಲಿ ಹಣದ ವಿಚಾರವಾಗಿ ತೋಟದ ಮಾಲೀಕ ಮತ್ತು ಕಾರ್ಮಿಕರ ನಡುವೆ ನಡೆದ ಗಲಾಟೆಯಲ್ಲಿ ತೋಟದ ಮಾಲೀಕನ ಸಹೋದರ ನಡೆಸಿದ ಫೈರಿಂಗ್‌ನಿಂದ ಆಸ್ಸಾಂ ಮೂಲದ ಕಾರ್ಮಿಕನ ಮಗು ತಲೆಗೆ ಗುಂಡು ತಗುಲಿ ಗಂಭೀರ ಗಾಯಗೊಂಡಿರುವ ಘಟನೆ ಮೂಡಿಗೆರೆ ತಾಲೂಕಿನ ಬಾಳೆಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಸದ್ಯ ಮಗುವಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿಗೆ ಕಳುಹಿಸಲಾಗಿದೆ.ಕಳೆದ ಆರು ದಿನಗಳ ಹಿಂದೆಯಷ್ಟೇ ಜಗದೀಶ್ ಗೌಡ ತೋಟಕ್ಕೆ ಕೂಲಿ ಕೆಲಸಕ್ಕೆ ಆಗಮಿಸಿದ್ದ ಅಸ್ಸಾಂ ಮೂಲದ ಕಾರ್ಮಿಕರನ್ನು ತೋಟದ ಮಾಲೀಕರ ಸಹೋದರ ಪ್ರಭಾಕರ್ ಗೌಡ ಅವರ ಕೂಲಿ ಲೈನ್‌ನಲ್ಲಿ ನೆಲೆಸಲು ವ್ಯವಸ್ಥೆ ಮಾಡಲಾಗಿತ್ತು.
ಈ ವೇಳೆ ತೋಟದ ಮಾಲೀಕ ₹350 ಮಾತ್ರ ಕೂಲಿ ನೀಡಿ, ಬಾಕಿ ₹50 ಆ ಮೇಲೆ ಕೊಡುತ್ತೇನೆ ಎಂದು ಹೇಳಿದ್ದಾರೆ. ಇದಕ್ಕೆ ಒಪ್ಪದ ಕಾರ್ಮಿಕರು ಈಗಲೇ ಒಟ್ಟು ₹400 ಕೊಟ್ಟರೆ ಮಾತ್ರ ಕೆಲಸ ಮಾಡುತ್ತೇವೆ. ಇಲ್ಲವಾದಲ್ಲಿ ಕೆಲಸ ಮಾಡು ವುದಿಲ್ಲ ಎಂದು ಅಲ್ಲಿಂದ ಹೊರಡಲು ಅನುವಾಗಿದ್ದಾರೆ. ಈ ವೇಳೆ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದಿದೆ. ಕೊನೆಗೆ ಕಾರ್ಮಿಕರು ತೋಟದ ಮಾಲೀಕರ ಮನೆಯಿಂದ ಸುಮಾರು 300 ಮೀಟರ್ ದೂರ ತೆರಳಿದ್ದಾರೆ.
ಮಗು ಆಸ್ಪತ್ರೆಗೆ ದಾಖಲು
ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.
ತೋಟದ ಮಾಲೀಕ ಮತ್ತು ಸಹೋದರ ಪರಾರಿ
ಪೋಟೊ 2: ಗಾಯಗೊಂಡ ಮಗುವಿಗೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ