ಕನ್ನಡಪ್ರಭ ವಾರ್ತೆ ಮದ್ದೂರು
ಶುಕ್ರವಾರ ಸಂಜೆ ಸುಮಾರು 45 ನಿಮಿಷಗಳ ಕಾಲ ಸುರಿದ ಪರಿಣಾಮ ಭೂಮಿಗೆ ತಂಪೆರೆದಿದ್ದು, ಜಮೀನುಗಳಲ್ಲಿ ಬೆಳೆದು ನಿಂತ ಬೆಳೆಗಳಿಗೆ ಜೀವ ಉಳಿಸಿದಂತಾಗಿದೆ.
ತಾಲೂಕಿನ ಕೊಪ್ಪ, ಕೆಸ್ತೂರು, ಬೆಸಗರಹಳ್ಳಿ, ಕೆ.ಹೊನ್ನಲಗೆರೆ ಸೇರಿದಂತೆ ಸುತ್ತಮುತ್ತಲಿನ ಗ್ರಾಮ ವ್ಯಾಪ್ತಿ ಮಳೆ ಸುರಿದ ಬಗ್ಗೆ ವರದಿಯಾಗಿದೆ. ತಾಲೂಕಿನ ತೈಲೂರು-ಮಾದನಾಯಕನಹಳ್ಳಿ ಮಾರ್ಗದ ರಸ್ತೆ ಹಾಗೂ ಆಲೂರು-ಕೆ.ಹೊನ್ನಲಗೆರೆ ಸಂಪರ್ಕ ಕಲ್ಪಿಸುವ ರಸ್ತೆ ಮಾರ್ಗಗಳಲ್ಲಿ ತೆಂಗಿನ ಮರಗಳು ಮತ್ತು ವಿದ್ಯುತ್ ಕಂಬಗಳು ಬಿರುಗಾಳಿ ಸಹಿತ ಮಳೆಗೆ ಧರೆಗುರುಳಿವೆ. ಕೆಲ ಗ್ರಾಮಗಳಲ್ಲಿ ವಿದ್ಯುತ್ ಇಲ್ಲದೆ ಕತ್ತಲೆ ಆವರಿಸಿದೆ.ರೈತರು ತಮ್ಮ ಜಮೀನುಗಳಲ್ಲಿ ಬೆಳೆದಿದ್ದ ಬಾಳೆ, ತೆಂಗು, ಅಡಿಕೆ, ಕಬ್ಬು, ರಾಗಿ ಇನ್ನಿತರ ಬೆಳೆಗಳು ನೆಲಕಚ್ಚಿದ್ದು ಲಕ್ಷಾಂತರ ರು. ವೆಚ್ಚದ ಮಾವಿನ ಫಸಲು ಸಂಪೂರ್ಣವಾಗಿ ನಷ್ಟವಾಗಿದೆ. ತೋಟಗಾರಿಕೆ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಸ್ಥಳಕ್ಕಾಗಮಿಸಿ ಮಾಹಿತಿ ಸಂಗ್ರಹಿಸಿದ್ದಾರೆ.
ಬಿರುಗಾಳಿ ಸಹಿತ ಮಳೆ, ಬಾಳೆ ಬೆಳೆ ನಾಶ
ಮನೆ ಮೇಲೆ ಬಿದ್ದ ತೆಂಗಿನ ಮರಶ್ರೀರಂಗಪಟ್ಟಣ: ತಾಲೂಕಿನ ಕೆ.ಆರ್.ಸಾಗರ ಗ್ರಾಮದಲ್ಲಿ ಬಿರುಗಾಳಿ ಮಳೆಗೆ ಮನೆ ಮೇಲೆ ತೆಂಗಿನ ಮರ ಬಿದ್ದು ಅಪಾರ ನಷ್ಟವಾಗಿದೆ. ಗ್ರಾಮದ ಇಂದಿರಾ ಕಾಲೋನಿಯ ಸಂತೆಮಾಳದ ಗೋಪಮ್ಮ ರಾಚಯ್ಯ ರ ಮನೆ ಮೇಲೆ ತೆಂಗಿನ ಮರ ಬಿರುಗಾಳಿ ಮಳೆಗೆ ಬಿದ್ದಿದ್ದು, ಅದೃಷ್ಟವಶತ್ ಮನೆಯಲ್ಲಿ ಮಲಗಿದ್ದ ಯಾರಿಗೂ ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ, ಮನೆ ಮೇಲೆ ಮರ ಬಿದ್ದ ಕಾರಣ ಅಪಾರ ನಷ್ಟ ಸಂಭವಿಸಿದೆ ಎಂದು ತಿಳಿದು ಬಂದಿದೆ. ಪರಿಹಾರ ನೀಡುವಂತೆ ಗ್ರಾಪಂಗೆ ಮನವಿ ಮಾಡಿ ಒತ್ತಾಯಿಸಿದ್ದಾರೆ.