ಡಾ. ರಶ್ಮಾ ಎಂ. ಶೆಟ್ಟಿಗೆ ಮಿಸೆಸ್ ಇಂಡಿಯಾ -2025 ಕಿರೀಟ

KannadaprabhaNewsNetwork |  
Published : Dec 29, 2025, 03:15 AM IST
ಮಿಸೆಸ್ ಇಂಡಿಯಾ | Kannada Prabha

ಸಾರಾಂಶ

ಮೂಲ್ಕಿ: ಮುಂಬ್ಯೆಯ ಮುಲುಂಡ್‌ನ ಪ್ರಕೃತಿ ಚಿಕಿತ್ಸಾ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18ರಿಂದ 21ರವರೆಗೆ ಜೈಪುರದ ಜೈಬಾಗ್ ಪ್ಯಾಲೇಸ್‌ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಆಯೋಜನೆಯಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ–ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮೂಲ್ಕಿ: ಮುಂಬ್ಯೆಯ ಮುಲುಂಡ್‌ನ ಪ್ರಕೃತಿ ಚಿಕಿತ್ಸಾ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18ರಿಂದ 21ರವರೆಗೆ ಜೈಪುರದ ಜೈಬಾಗ್ ಪ್ಯಾಲೇಸ್‌ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಆಯೋಜನೆಯಲ್ಲಿ ನಡೆದ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ–ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ.

ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘ ಕಾಲದಿಂದ ನಡೆದ ಸೌಂದರ್ಯ ಸ್ಪರ್ಧೆಗಳಲ್ಲಿ ಒಂದಾಗಿದ್ದು, ದೇಶದ ವಿವಿಧ ಭಾಗಗಳಿಂದ ಆಯ್ಕೆಯಾದ 40 ಅಂತಿಮ ಸ್ಪರ್ಧಿಗಳು ಭಾಗವಹಿಸಿದ್ದ ಈ ನಾಲ್ಕು ದಿನಗಳ ಸ್ಪರ್ಧೆಯಲ್ಲಿ ಪ್ರತಿಭಾ ಸುತ್ತು, ಪ್ರೇರಣಾದಾಯಕ ಜೀವನ ಕಥೆ, ವೈಯಕ್ತಿಕ ಸಂದರ್ಶನ, ರ‍್ಯಾಂಪ್ ವಾಕ್, ರಾಷ್ಟ್ರೀಯ ವೇಷಭೂಷಣ, ಸಾಂಪ್ರದಾಯಿಕ ಸುತ್ತು ಹಾಗೂ ಈವಿನಿಂಗ್ ಗೌನ್ ಸುತ್ತುಗಳ ಮೂಲಕ ಸ್ಪರ್ಧಿಗಳನ್ನು ಮೌಲ್ಯಮಾಪನ ಮಾಡಲಾಯಿತು. ರಾಷ್ಟ್ರಮಟ್ಟದ ವೇದಿಕೆಯಲ್ಲಿ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ತೋರಿದ ಆತ್ಮವಿಶ್ವಾಸ, ಸಮರ್ಪಣೆ ಮತ್ತು ಸರ್ವತೋಮುಖ ಶ್ರೇಷ್ಠತೆ ಈ ಗೌರವಕ್ಕೆ ಕಾರಣವಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.ಮಿಸೆಸ್ ಇಂಡಿಯಾ ಕರ್ನಾಟಕ-2024 ಸ್ಪರ್ಧೆಯಲ್ಲಿ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಗಳಿಸಿದ್ದಾರೆ. ಈ ಸ್ಪರ್ಧೆಯಲ್ಲಿ ಟ್ಯಾಲೆಂಟ್‌ ರೌಂಡ್ ನಲ್ಲಿ ಉತ್ತಮ ಪ್ರದರ್ಶನ ಬಹುಮಾನ, ರ‍್ಯಾಂಪ್ ವಾಕ್ ಸ್ಪರ್ಧೆಯಲ್ಲಿ ಅತ್ಯುತ್ತಮ ನಡೆ ಬಹುಮಾನ, ಉತ್ತಮ ಟಾಸ್ಕ್ (ಶಾರ್ಟ್ ಫಿಲ್ಮ್) ವಿಭಾಗದ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಲಭಿಸಿದೆ. ಮೇ 19 ರಂದು ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ನಡೆದ ಮಿಸೆಸ್ ಇಂಡಿಯಾ ಕರ್ನಾಟಕ ಮಂಗಳೂರು ಸ್ಪರ್ಧೆಯಲ್ಲಿ ಪ್ರಥಮ ರನ್ನರ್ ಅಪ್ ಪ್ರಶಸ್ತಿ ಹಾಗೂ ಬಂಟರ ಸಂಘ ಮುಂಬಯಿ ಯುವ ವಿಭಾಗ ಆಯೋಜಿಸಿದ ಆಕಾಂಕ್ಷ ಮಿಸೆಸ್ ಬಂಟ್ಸ್ 2023 ಸ್ಪರ್ಧೆಯಲ್ಲಿ ಪ್ರಥಮ ರನ್ನರ್ ಅಪ್ ಪ್ರಶಸ್ತಿಯನ್ನು ಗಳಿಸಿದ್ದಾರೆ. ನಾರ್ಯಗುತ್ತು ರಘುನಾಥ ಶೆಟ್ಟಿ ಮತ್ತು ಅಮ್ಟೂರು ಬಾಳಿಕೆ ಕಸ್ತೂರಿ ಶೆಟ್ಟಿ ದಂಪತಿ ಪುತ್ರಿಯಾದ ಡಾ. ರಶ್ಮಾ ಎಂ. ಶೆಟ್ಟಿ ಅವರು ಮೋಹಿತ್ ಶೆಟ್ಟಿಯವರ ಪತ್ನಿ. ಇವರಿಗೆ 7 ವರ್ಷದ ಮಗಳು ನೇಸರ ಇದ್ದು, ಕಟಪಾಡಿ ಮೂಡುಬೆಟ್ಟು ಹೊಸಮನೆ ಮನೋಹರ್ ಶೆಟ್ಟಿ (ಐನಾಕ್ ಅಪ್ಟಿಕ್ಸ್) ಮತ್ತು ಮುಚ್ಚೂರು ಬರ್ಕೆ ದಿ. ಮಮತಾ ಶೆಟ್ಟಿ (ಮಾಜಿ ಅಧ್ಯಕ್ಷೆ ಮುಲುಂಡ್ ಬಂಟ್ಸ್ ಮಹಿಳಾ ವಿಭಾಗ) ಅವರ ಸೊಸೆ.

ಇವರು ಪ್ರಸ್ತುತ ಮುಂಬೈನಲ್ಲಿ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು, ವೈದ್ಯಕೀಯ ಸೇವೆಯೊಂದಿಗೆ, ಗೃಹಿಣಿಯಾಗಿ ಜತೆಗೆ ಸಮಾಜ ಸೇವೆಯಲ್ಲಿ ಸಕ್ರಿಯರಾಗಿದ್ದಾರೆ. ಮುಲುಂಡ್ ಹಿಲ್ಸ್ ಇನ್ನರ್ ವೀಲ್ ಕ್ಲಬ್‌ನ ಸಮಿತಿ ಕಾರ್‍ಯದರ್ಶಿಯಾಗಿ ಮಹಿಳೆಯರ ಆರೋಗ್ಯ ಮತ್ತು ಜೀವನಶೈಲಿಯ ಅಸ್ವಸ್ಥತೆಗಳ ಕುರಿತು ಅನೇಕ ಲೈವ್ ಸೆಮಿನಾರ್‌ಗಳನ್ನು ನಡೆಸಿದ್ದಾರೆ. ನವಿ ಮುಂಬಯಿಯ ಡಾ. ಡಿ.ವೈ. ಪಾಟೀಲ್ ಪ್ರಕೃತಿ ಚಿಕಿತ್ಸೆ ಕಾಲೇಜಿನಲ್ಲಿ ಅತಿಥಿ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪುಸ್ತಕ ಸಂಸ್ಕೃತಿ ಸಂವೇದನೆಗೆ ಸಂಬಂಧಿಸಿದ್ದು: ಬರಗೂರು
ಜಿಬಿಎ ಚುನಾವಣೆಗೆ ಕಾಂಗ್ರೆಸ್‌ ಅರ್ಜಿಗೆ ₹50 ಸಾವಿರ!