ಮಿಸ್ಟಿ ಹಿಲ್ಸ್ ವತಿಯಿಂದ ಪೋಲಿಯೋ ಲಸಿಕೆ ನೀಡಿಕೆ ಅಭಿಯಾನಕ್ಕೆ ಚಾಲನೆ

KannadaprabhaNewsNetwork | Published : Mar 4, 2024 1:15 AM

ಸಾರಾಂಶ

ಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 5 ವರ್ಷದೊಳಗಿನ ಪುಟಾಣಿಗಳಿಗೆ ಲಸಿಕೆ ಹಾಕಲಾಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿಪಲ್ಸ್ ಪೋಲಿಯೋ ಅಭಿಯಾನದ ಅಂಗವಾಗಿ ಮಡಿಕೇರಿ ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ 5 ವರ್ಷದೊಳಗಿನ ಪುಟಾಣಿಗಳಿಗೆ ಲಸಿಕೆ ಹಾಕಲಾಯಿತು.

ಮಡಿಕೇರಿಯ ಅಶೋಕ ಪುರದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಆಯೋಜಿತ ಕಾರ್ಯಕ್ರಮದಲ್ಲಿ ಪೋಲಿಯೋ ಲಸಿಕೆಯನ್ನು ಆ ವ್ಯಾಪ್ತಿಯ 5 ವರ್ಷದೊಳಗಿನ ಮಕ್ಕಳಿಗೆ ಹಾಕಲಾಯಿತು.ಈ ಸಂದರ್ಭ ಮಾತನಾಡಿದ ರೋಟರಿ ವಲಯ 6 ರ ಸಹಾಯಕ ಗವರ್ನರ್ ದೇವಣಿರ ತಿಲಕ್, ಅಂತಾರಾಷ್ಟ್ರೀಯ ಮಟ್ಟದಲ್ಲಿ ಪೊಲಿಯೋ ನಿವಾರಣೆಗಾಗಿ ರೋಟರಿ ಸಂಸ್ಥೆಯು ಬೃಹತ್ ಆಂದೋಲನ ಕೈಗೊಂಡಿದೆ. ಇದರ ಪರಿಣಾಮವಾಗಿಯೇ ಇಂದು ಬಹುತೇಕ ದೇಶಗಳಲ್ಲಿ ಪೊಲಿಯೋ ಕಣ್ಮರೆಯಾಗಿದೆ ಎಂದು ತಿಳಿಸಿದರು.ರೋಟರಿ ಮಿಸ್ಟಿ ಹಿಲ್ಸ್ ನ ಪಲ್ಸ್ ಪೋಲಿಯೋ ಯೋಜನೆಯ ನಿರ್ದೇಶಕ ಡಾ. ಚೇತನ್ ಶೆಟ್ಟಿ ಮಾತನಾಡಿ, ಪೋಲಿಯೋ ನಿರೋಧಕ ಲಸಿಕೆಯಲ್ಲಿ ಬಹಳಷ್ಟು ಆರೋಗ್ಯಕಾರಿ ಅಂಶಗಳಿದೆ. ಲಸಿಕೆ ಹಾಕುವ ಮಗುವಿನಲ್ಲಿ ರೋಗ ನಿರೋಧಕ ಶಕ್ತಿಯು ಪ್ರಬಲವಾಗಿ ರೂಪುಗೊಳ್ಳುತ್ತದೆ. ಹೀಗಾಗಿ 5 ವರ್ಷದೊಳಗಿನ ಪ್ರತೀ ಮಗುವೂ ಪೋಲಿಯೋ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಸಲಹೆ ಮಾಡಿದರು.ಮಿಸ್ಟಿ ಹಿಲ್ಸ್ ನಿರ್ದೇಶಕ ಅನಿಲ್ ಎಚ್.ಟಿ. ಮಾತನಾಡಿ, ಪಾಕಿಸ್ತಾನ್, ಅಪ್ಘಾನಿಸ್ತಾನ್, ಆಫ್ರಿಕಾ ದೇಶಗಳಲ್ಲಿನ ಕೆಲವು ಪ್ರಕರಣ ಹೊರತು ಪಡಿಸಿದಂತೆ ವಿಶ್ವದ ಬಹುತೇಕ ದೇಶಗಳಲ್ಲಿ ಕೆಲವು ವರ್ಷಗಳಿಂದ ಪೋಲಿಯೋ ಪ್ರಕರಣಗಳು ವರದಿಯಾಗಿಲ್ಲ. ಈಗಾಗಲೇ ಭಾರತ ಪೋಲಿಯೋ ಮುಕ್ತ ದೇಶವಾಗಿದೆ. ಪೋಲಿಯೋ ನಿವಾರಣೆಯಲ್ಲಿ ರೋಟರಿ ಸಂಸ್ಥೆಯು ಜಾಗತಿಕ ಮಟ್ಟದಲ್ಲಿಯೇ ಪ್ರಮುಖ ಪಾತ್ರ ವಹಿಸಿದೆ ಎಂದು ಮಾಹಿತಿ ನೀಡಿದರು.ರೋಟರಿ ಮಿಸ್ಟಿ ಹಿಲ್ಸ್ ಅಧ್ಯಕ್ಷ ಪ್ರಮೋದ್ ಕುಮಾರ್ ರೈ, ಕಾರ್ಯದರ್ಶಿ ರತ್ನಾಕರ್ ರೈ, ನಿರ್ದೇಶಕರಾದ ಅಂಬೆಕಲ್ ವಿನೋದ್, ಪ್ರಸಾದ್ ಗೌಡ, ಜಗದೀಶ್ ಪ್ರಶಾಂತ್, ಪೊನ್ನಚ್ಚನ ಮಧುಸೂದನ್ , ಅಂಗನವಾಡಿ ಕೇಂದ್ರದ ಶಿಕ್ಷಕಿ ಮೀರಾ ಎಸ್. ಅರೆವೈದ್ಯಕೀಯ ವಿದ್ಯಾರ್ಥಿನಿಯರಾದ ಶೃತಿ, ಶಿಪಾನ್ ಹಾಜರಿದ್ದರು.

Share this article