ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಅನುದಾನ ದುರ್ಬಳಕೆ

KannadaprabhaNewsNetwork |  
Published : Apr 14, 2026, 03:00 AM IST
ಅಥಣಿ ಹಾಗೂ ರಬಕವಿ-ಬನಹಟ್ಟಿ ತಾಲೂಕಿಗೆ ಮಹತ್ತರ ಸಂಪರ್ಕ ಹೊಂದುವ ಮಹಿಷವಾಡಗಿ ಸೇತುವೆ ಕಾಮಗಾರಿ ಚುರುಕಿನಿಂದ ನಡೆಯುತ್ತಿರುವದು. | Kannada Prabha

ಸಾರಾಂಶ

ಡಾ.ಬಾಬಾಸಾಹೇಬ ಅಂಬೇಡ್ಕರ್‌ ಅವರು ಸಂವಿಧಾನದ ವಿಧಿ 46ರಲ್ಲಿ ದಲಿತ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಮತ್ತು ದಲಿತ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಆರ್ಥಿಕ ಉತ್ತೇಜನ ನೀಡಿ ಶೋಷಣೆಯಿಂದ ರಕ್ಷಿಸಬೇಕು ಎಂದು ಉಲ್ಲೇಖಿಸಿದ್ದಾರೆ. ಇದನ್ನು ಪಾಲಿಸಿ ದಲಿತರಿಗೆ ನ್ಯಾಯ ಒದಗಿಸಬೇಕಾದ ಕಾರ್ಯಾಂಗದಿಂದಲೇ ಅಂಬೇಡ್ಕರ್ ನೀಡಿದ ಸಂವಿಧಾನದ ದುರುಪಯೋಗವಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯ ಅನುಷ್ಠಾನದ ವಿಷಯದಲ್ಲಿ ದಲಿತ ಸಮುದಾಯಕ್ಕೆ ಆಗುತ್ತಿರುವ ಶೋಷಣೆಯನ್ನು ಗಮನಿಸಿದರೆ ಸಂವಿಧಾನದ 46ನೇ ವಿಧಿ ಇಂದಿಗೂ ಜಾರಿಯಲ್ಲಿದೆಯೇ ಎಂಬ ಸಂಶಯ ಮೂಡುತ್ತಿದೆ.

ವಿಶೇಷ ವರದಿ

ಕನ್ನಡಪ್ರಭ ವಾರ್ತೆ ಖಾನಾಪುರ

ಡಾ.ಬಾಬಾಸಾಹೇಬ ಅಂಬೇಡ್ಕರ್‌ ಅವರು ಸಂವಿಧಾನದ ವಿಧಿ 46ರಲ್ಲಿ ದಲಿತ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಬೇಕು ಮತ್ತು ದಲಿತ ಸಮುದಾಯಕ್ಕೆ ಶೈಕ್ಷಣಿಕ ಮತ್ತು ಆರ್ಥಿಕ ಉತ್ತೇಜನ ನೀಡಿ ಶೋಷಣೆಯಿಂದ ರಕ್ಷಿಸಬೇಕು ಎಂದು ಉಲ್ಲೇಖಿಸಿದ್ದಾರೆ. ಇದನ್ನು ಪಾಲಿಸಿ ದಲಿತರಿಗೆ ನ್ಯಾಯ ಒದಗಿಸಬೇಕಾದ ಕಾರ್ಯಾಂಗದಿಂದಲೇ ಅಂಬೇಡ್ಕರ್ ನೀಡಿದ ಸಂವಿಧಾನದ ದುರುಪಯೋಗವಾಗುತ್ತಿದೆ. ಬೆಳಗಾವಿ ಜಿಲ್ಲೆಯಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಕಾಯ್ದೆಯ ಅನುಷ್ಠಾನದ ವಿಷಯದಲ್ಲಿ ದಲಿತ ಸಮುದಾಯಕ್ಕೆ ಆಗುತ್ತಿರುವ ಶೋಷಣೆಯನ್ನು ಗಮನಿಸಿದರೆ ಸಂವಿಧಾನದ 46ನೇ ವಿಧಿ ಇಂದಿಗೂ ಜಾರಿಯಲ್ಲಿದೆಯೇ ಎಂಬ ಸಂಶಯ ಮೂಡುತ್ತಿದೆ.

ಕಳೆದ 2025ರ ಜು.11ರಂದು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಎಡಿಜಿಪಿ ಕಚೇರಿಯಿಂದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಬೆಳಗಾವಿ ಜಿಲ್ಲೆಯ 12 ತಾಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳು 15ನೇ ಹಣಕಾಸು ಯೋಜನೆಯ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನದ ₹1 ಕೋಟಿ 50 ಲಕ್ಷ ಹಣವನ್ನು ಅನ್ಯ ಉದ್ದೇಶಗಳಿಗೆ ವಿನಿಯೋಗಿಸಿ ದಲಿತರಿಗೆ ಅನ್ಯಾಯವೆಸಗಿರುವ ಬಗ್ಗೆ ದಾಖಲೆಗಳ ಸಮೇತ ದೂರು ಸಲ್ಲಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪತ್ರ ಬರೆಯಲಾಗಿದೆ. ಆದರೆ, ಇದುವರೆಗೂ 15 ತಾಪಂ ಇಒಗಳ ಮೇಲೆ ಕ್ರಮ ಆಗಿಲ್ಲ ಎಂದು ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆಯ ಜಿಲ್ಲಾಧ್ಯಕ್ಷ ಸಂತೋಷ ತಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.ಇದೇ ಮಾದರಿಯಲ್ಲಿ ಬೆಳಗಾವಿ ತಾಲೂಕಿನ 32 ಗ್ರಾಪಂಗಳಲ್ಲಿ 2021-22ರ 15ನೇ ಹಣಕಾಸು ಯೋಜನೆಯಡಿ ಮಂಜೂರಾದ ಕ್ರಿಯಾ ಯೋಜನೆಯಡಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಅನುದಾನವನ್ನು ಅನ್ಯ ಕಾರ್ಯಗಳಿಗೆ ವಿನಿಯೋಗಿಸಿದ ಬಗ್ಗೆ ತನಿಖೆ ನಡೆಸಿದ ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಪೊಲೀಸ್ ಅಧೀಕ್ಷಕರು ಈ ಅಕ್ರಮದ ಬಗ್ಗೆ ದೊರೆತ ಎಲ್ಲ ದಾಖಲೆಗಳು ಮತ್ತು ವಿಚಾರಣಾ ವರದಿಯೊಂದಿಗೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರ ಬರೆದು ಎಂಟು ತಿಂಗಳು ಗತಿಸಿದರೂ ಇದುವರೆಗೂ ಯಾವೊಬ್ಬ ಅಧಿಕಾರಿಯ ವಿರುದ್ಧವೂ ಕ್ರಮ ಜರುಗಿಲ್ಲ ಎಂದು ಅವರು ದೂರಿದ್ದಾರೆ.ಬೆಳಗಾವಿ ಜಿಲ್ಲೆಯ ಜಿಪಂ, ವಿವಿಧ ತಾಲೂಕು ಪಂಚಾಯತಿಗಳು ಮತ್ತು ಗ್ರಾಮ ಪಂಚಾಯತಿಗಳಲ್ಲಿ ಎಸ್‌ಸಿಎಸ್‌ಪಿ, ಟಿಎಸ್‌ಪಿ ಯೋಜನೆಯಡಿ ಮಂಜೂರಾದ ಲಕ್ಷಾಂತರ ಮೌಲ್ಯದ ಅನುದಾನವನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಅಧಿಕಾರಿಗಳು ದುರ್ಬಳಕೆ ಮಾಡಿಕೊಂಡಿದ್ದಾರೆ. ದಲಿತರ ಅಭ್ಯುದಯಕ್ಕೆ ಮೀಸಲಿಟ್ಟ ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಸಿರುವುದನ್ನು ದಾಖಲೆಗಳು ಬಹಿರಂಗಪಡಿಸಿವೆ. ಈ ದಾಖಲೆಗಳ ಸಮೇತ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಸಕ್ಷಮ ಪ್ರಾಧಿಕಾರಕ್ಕೆ ದೂರು ಸಲ್ಲಿಸಲಾಗಿದೆ. ಸಕ್ಷಮ ಪ್ರಾಧಿಕಾರ ತನಿಖೆ ನಡೆಸಿ ವರದಿ ಸಲ್ಲಿಸಿದೆ. ವರದಿಯಲ್ಲಿ ಅಧಿಕಾರಿಗಳು ತಪ್ಪು ಮಾಡಿರುವುದು ಸಾಬೀತಾಗಿದ್ದು, ಇವರ ವಿರುದ್ಧ ಕ್ರಮ ಕ್ರಮ ಜರುಗಿಸಿ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಮೇಲಧಿಕಾರಿಗಳಿಗೆ ಪತ್ರ ಬರೆದು ತಿಂಗಳುಗಳೇ ಕಳೆದಿವೆ. ಆದರೂ ಇದುವರೆಗೂ ದಲಿತರಿಗಾಗಿ ಮೀಸಲಿಟ್ಟ ಅನುದಾನ ದುರುಪಯೋಗ ಪಡಿಸಿಕೊಂಡ ಅಧಿಕಾರಿಗಳು ರಾಜಾರೋಷವಾಗಿ ತಮ್ಮ ಹುದ್ದೆಗಳಲ್ಲಿ ಮುಂದುವರೆದಿದ್ದಾರೆ.

-ಸಂತೋಷ ತಳವಾರ,

ಜಿಲ್ಲಾಧ್ಯಕ್ಷ, ಅಂಬೇಡ್ಕರ್ ಸೇವಾ ಸಮಿತಿ ಕರ್ನಾಟಕ ಸಂಘಟನೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

2028ಕ್ಕೆ ಎನ್‌ಡಿಎಗೆ ಅಧಿಕಾರ ನಿಶ್ಚಿತ : ಅಶೋಕ್
ಗ್ಯಾರಂಟಿಗಳಿಂದ ಸಾಮಾಜಿಕ, ಆರ್ಥಿಕ ಶಕ್ತಿ: ಸಿದ್ದು