ಶಾಸಕರಿಂದ ಸರ್ಕಾರಿ ಕಾರ್ಯಕ್ರಮಗಳ ದುರುಪಯೋಗ

KannadaprabhaNewsNetwork |  
Published : Jan 29, 2026, 01:15 AM IST
ಸರ್ಕಾರಿ ಕಾರ್ಯಕ್ರಮಗಳನ್ನು ರಾಜಕೀಯ ವೇದಿಕೆಯಾಗಿಸುತ್ತಿರುವ ಶಾಸಕ ಶಿವಲಿಂಗೇಗೌಡ: ಬಿಜೆಪಿ ನಾಯಕ ಶಿವರಾಜ್ ಕಿಡಿ | Kannada Prabha

ಸಾರಾಂಶ

ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡು, ಪ್ರತಿಪಕ್ಷದ ನಾಯಕರು ಹಾಗೂ ರಾಜಕೀಯ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಸಂವಿಧಾನಾತ್ಮಕ ಹುದ್ದೆಗೆ ಶೋಭೆಯಲ್ಲ ಎಂದು ತಾಲೂಕು ಬಿಜೆಪಿ ಗ್ರಾಮೀಣ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಶಿವರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಶಾಸಕರ ಸೂಚನೆಯಂತೆ ಮಾತ್ರ ಕಾರ್ಯನಿರ್ವಹಿಸುವ ಮನೋಭಾವವನ್ನು ಅಧಿಕಾರಿಗಳು ತ್ಯಜಿಸಬೇಕು. ಅವರು ಯಾವುದೇ ರಾಜಕೀಯ ಪಕ್ಷದ ಸೇವಕರಲ್ಲ, ಸರ್ಕಾರದ ನೌಕರರು ಎಂಬುದನ್ನು ಮನಗಾಣಬೇಕು ಎಂದರು.

ಕನ್ನಡಪ್ರಭ ವಾರ್ತೆ ಅರಸೀಕೆರೆ

ಸರ್ಕಾರಿ ಕಾರ್ಯಕ್ರಮಗಳನ್ನು ತಮ್ಮ ವೈಯಕ್ತಿಕ ರಾಜಕೀಯ ಲಾಭಕ್ಕಾಗಿ ದುರುಪಯೋಗಪಡಿಸಿಕೊಂಡು, ಪ್ರತಿಪಕ್ಷದ ನಾಯಕರು ಹಾಗೂ ರಾಜಕೀಯ ಸಂಘಟನೆಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ನೀಡುತ್ತಿರುವುದು ಸಂವಿಧಾನಾತ್ಮಕ ಹುದ್ದೆಗೆ ಶೋಭೆಯಲ್ಲ ಎಂದು ತಾಲೂಕು ಬಿಜೆಪಿ ಗ್ರಾಮೀಣ ಮಂಡಲದ ಮಾಜಿ ಪ್ರಧಾನ ಕಾರ್ಯದರ್ಶಿ ಶಿವರಾಜ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ನಗರದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಗರ ವ್ಯಾಪ್ತಿಯಲ್ಲಿ ನಡೆದ ವಿದ್ಯುತ್ ಕೇಬಲ್ ಅಳವಡಿಕೆ ಕಾಮಗಾರಿಗೆ ಚಾಲನೆ ನೀಡುವ ಸರ್ಕಾರಿ ಕಾರ್ಯಕ್ರಮದಲ್ಲಿ ರಾಜ್ಯ ಗೃಹ ನಿರ್ಮಾಣ ಮಂಡಳಿಯ ಅಧ್ಯಕ್ಷರು ಹಾಗೂ ಶಾಸಕ ಕೆ.ಎಂ. ಶಿವಲಿಂಗೇಗೌಡರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮಾಜಿ ಪ್ರಧಾನಮಂತ್ರಿ ಎಚ್.ಡಿ. ದೇವೇಗೌಡರ ಕುರಿತು ಏಕವಚನದಲ್ಲಿ ಮಾತನಾಡಿರುವುದು ಅತೀವ ಖಂಡನೀಯವಾಗಿದೆ ಎಂದು ಹೇಳಿದರು. ಇದು ಕೇವಲ ರಾಜಕೀಯ ವಿರೋಧವಲ್ಲ, ಕ್ಷೇತ್ರದ ಮತದಾರರಿಗೆ ಮಾಡಿದ ಅವಮಾನವಾಗಿದ್ದು, ಶಾಸಕರ ರಾಜಕೀಯ ಹತಾಶ ಮನಸ್ಥಿತಿಯನ್ನು ಸ್ಪಷ್ಟಪಡಿಸುತ್ತದೆ ಎಂದು ಟೀಕಿಸಿದರು.ಶಾಸಕರ ಸೂಚನೆಯಂತೆ ಮಾತ್ರ ಕಾರ್ಯನಿರ್ವಹಿಸುವ ಮನೋಭಾವವನ್ನು ಅಧಿಕಾರಿಗಳು ತ್ಯಜಿಸಬೇಕು. ಅವರು ಯಾವುದೇ ರಾಜಕೀಯ ಪಕ್ಷದ ಸೇವಕರಲ್ಲ, ಸರ್ಕಾರದ ನೌಕರರು ಎಂಬುದನ್ನು ಮನಗಾಣಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ನಡೆಯುವ ತಪ್ಪುಗಳಿಗೆ ಅಮಾನತು ಸೇರಿದಂತೆ ಕಠಿಣ ಕ್ರಮಗಳನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.ಚುನಾವಣೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದ್ದರೂ ಸೋಲಿನ ಭೀತಿಯಿಂದ ಬಳಲುತ್ತಿರುವ ಶಾಸಕರು, “ನನ್ನ ಎದುರು ತಾಕತ್ತು ಇದ್ದವರು ಬಂದು ಸ್ಪರ್ಧಿಸಲಿ” ಎಂಬ ಉಗ್ರ ಭಾಷೆ ಬಳಸುತ್ತಿರುವುದು ಅವರ ಅಸ್ಥಿರ ಮನಸ್ಥಿತಿಗೆ ಸಾಕ್ಷಿಯಾಗಿದೆ ಎಂದು ಶಿವರಾಜ್ ಲೇವಡಿ ಮಾಡಿದರು.

ಈ ಸುದ್ದಿಗೋಷ್ಠಿಯಲ್ಲಿ ನಗರ ಬಿಜೆಪಿ ಮಂಡಲದ ಪ್ರಧಾನ ಕಾರ್ಯದರ್ಶಿ ಎ.ಎಸ್. ಚಂದ್ರಶೇಖರ್, ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್, ನಗರ ಘಟಕ ಎಸ್‌ಸಿ ಮೋರ್ಚಾ ಸದಸ್ಯ ಮೋಹನ್ ಕುಮಾರ್, ಆರ್. ಚಂದ್ರಶೇಖರ್ ಹಾಗೂ ಶಾನೆಗೆರೆ ತಿಮ್ಮೇಗೌಡರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರವಿ ಹಂಜ್‌ ವಿರುದ್ಧ ಮುಂದುವರಿದ ಆಕ್ರೋಶ
ಆಶಾ ಸೋದರಿಯರೇ, ಹೋರಾಟ ಬಿಡಿ : ಸಿಎಂ