ಕನ್ನಡಪ್ರಭ ವಾರ್ತೆ ಮಡಿಕೇರಿ
ಸಿದ್ದಾಪುರದ 2400 ಎಕರೆ ಕಾಫಿ ತೋಟಗಳು, ಸೇರಿದಂತೆ ಕೊಡಗು ಜಿಲ್ಲೆಯ ವಿವಿಧೆಡೆ ನಡೆಯುತ್ತಿರುವ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಸ್ಥಗಿತಗೊಳಿಸಬೇಕೆಂದು ಒತ್ತಾಯಿಸಿ ಸಿಎನ್‌ಸಿ ವತಿಯಿಂದ ಕಕ್ಕಬ್ಬೆ ಜಂಕ್ಷನ್‌ನಲ್ಲಿ ನಡೆದ ಜನಜಾಗೃತಿ ಮಾನವ ಸರಪಳಿ ಕಾರ್ಯಕ್ರಮದ ನೇತೃತ್ವ ವಹಿಸಿ ಅವರು ಮಾತನಾಡಿದರು.
ವಿಶ್ವದಾದ್ಯಂತ ಇರುವ ಆರ್ಥಿಕ ಅಪರಾಧಿಗಳು, ಕಾಳಸಂತೆಕೋರರು ಹಾಗೂ ರಾಜಕೀಯ ನಂಟು ಹೊಂದಿರುವ ಭೂಮಾಫಿಯಾಗಳು ಕಪ್ಪು ಹಣವನ್ನು ಬಿಳಿ ಮಾಡಲು ಕೊಡವ ಲ್ಯಾಂಡ್ ನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಕೊಡಗಿನಲ್ಲಿ ರೆಸಾರ್ಟ್ ವ್ಯವಹಾರ ದೊಡ್ಡ ಮಟ್ಟದಲ್ಲಿ ನಡೆಯದಿದ್ದರೂ ಕಾಫಿ ತೋಟಗಳ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿ ಮಾಡಲಾಗುತ್ತಿದೆ. ನಷ್ಟ ತೋರಿಸುವುದಕ್ಕಾಗಿ ರೆಸಾರ್ಟ್‌ಗಳನ್ನು ನಿರ್ಮಿಸುತ್ತಿದ್ದು, ಕಪ್ಪು ಹಣ ಚಲಾವಣೆ ಮಾಡಲಾಗುತ್ತಿದೆ ಎಂದು ಆರೋಪಿಸಿದರು.ಅಕ್ರಮ ದಂಧೆಕೋರ ಬಂಡವಾಳಶಾಹಿ ಕಂಪೆನಿಗಳು ಕಾನೂನು ದುರುಪಯೋಗ ಪಡಿಸಿಕೊಂಡು ರಾತೋರಾತ್ರಿ ಪ್ರಭಾವ ಬೀರಿ ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಗಾಗಿ ನೋಂದಣಿ ಮಾಡಿಸಿಕೊಳ್ಳುತ್ತಿದ್ದಾರೆ. ಸರ್ಕಾರವೇ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ದಂಧೆಕೋರರಿಗೆ ಮಾರ್ಗ ತೋರಿಸುತ್ತಿದೆ. ಜಮೀನನ್ನು ಒಟ್ಟಾಗಿ ಖರೀದಿಸದೆ ಬಿಡಿ ಬಿಡಿಯಾಗಿ ಬೇನಾಮಿ ಹೆಸರಿನಲ್ಲಿ ಖರೀದಿಸಿ ನಂತರ ಭೂಪರಿವರ್ತನೆ ಮಾಡಿಸಿಕೊಳ್ಳುತ್ತಿದ್ದಾರೆ ಎಂದು ದೂರಿದರು.
ನಮ್ಮ ಅನುವಂಶಿಕ ಭೂಮಿ ಉಳಿಸಿಕೊಳ್ಳಲು, ಮಾತೃಭೂಮಿ, ಶಾಶ್ವತವಾದ ದೀರ್ಘಕಾಲಿಕ ಜಲಸಂಪನ್ಮೂಲಗಳು, ನಯನ ಮನೋಹರ ಪರಿಸರ, ಭೂಗೋಳವನ್ನು ನೈಸರ್ಗಿಕವಾಗಿ ವಿಹಂಗಮ ಪರ್ವತಗಳು, ಬೆಟ್ಟಗಳು, ನಿತ್ಯಹರಿದ್ವರ್ಣದ ಸಸ್ಯ ಮತ್ತು ಪ್ರಾಣಿ ಸಂಕುಲಗಳು ಜೈವಿಕ ವೈವಿಧ್ಯತೆ, ಕೊಡವ ಬುಡಕಟ್ಟು ಜನಾಂಗದ ಶ್ರೀಮಂತ ಜಾನಪದ ಪರಂಪರೆ ಮತ್ತು ಭೂಮಿಯೊಂದಿಗೆ ಬೆಸೆದುಕೊಂಡಿರುವ ಕೊಡವರ ಯೋಧರ ಪರಂಪರೆಯನ್ನು ಉಳಿಸಿಕೊಳ್ಳಬೇಕಾಗಿದೆ. ಇದಕ್ಕಾಗಿ ವ್ಯಾಪಕ ಜನಜಾಗೃತಿ ಅಗತ್ಯವಾಗಿದ್ದು, ಜಿಲ್ಲೆಯಾದ್ಯಂತ ಶಾಂತಿಯುತ ಮಾನವ ಸರಪಳಿ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಬೃಹತ್ ಭೂಪರಿವರ್ತನೆ ಮತ್ತು ಭೂವಿಲೇವಾರಿಯ ಹಾಗೂ ಕೊಡವ ಲ್ಯಾಂಡ್ ಪರ ಪ್ರತಿಜ್ಞಾ ವಿಧಿ ಸ್ವೀಕರಿಸಿದರು.