ಮಿಥುನ ಕೊಡೆತ್ತೂರ್‌ಗೆ ‘ಬ್ರ‍್ಯಾಂಡ್ ಮಂಗಳೂರು’ ಪ್ರಶಸ್ತಿ

KannadaprabhaNewsNetwork |  
Published : Jun 26, 2024, 12:38 AM IST
ಮಿಥುನ್‌ ಕೊಡೆತ್ತೂರ್‌ | Kannada Prabha

ಸಾರಾಂಶ

ಪ್ರಶಸ್ತಿ ಪ್ರದಾನ ಸಮಾರಂಭ ಜೂ.27ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿದ್ದು, ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಪ್ರಶಸ್ತಿ ಪ್ರದಾನ ಮಾಡುವರು.

ಕನ್ನಡಪ್ರಭ ವಾರ್ತೆ ಮಂಗಳೂರು

ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದತೆ ಬಿಂಬಿಸುವ ವರದಿಗೆ ನೀಡಲಾಗುವ ‘ಬ್ರ‍್ಯಾಂಡ್ ಮಂಗಳೂರು’ ಪ್ರಶಸ್ತಿಗೆ ಹೊಸದಿಗಂತ ದಿನಪತ್ರಿಕೆಯ ಮೂಲ್ಕಿ ವರದಿಗಾರ ಮಿಥುನ ಕೊಡೆತ್ತೂರ್‌ ಆಯ್ಕೆಯಾಗಿದ್ದಾರೆ.

ಹೊಸದಿಗಂತ ಪತ್ರಿಕೆಯಲ್ಲಿ 2023ರ ನ.7ರಂದು ಪ್ರಕಟವಾದ ಮಿಥುನ್‌ ಅವರ ‘ಬಾರಾಡಿಯಲ್ಲಿ ಬೆಳೆದಿದೆ 840 ತಳಿ ಭತ್ತ’ ಎಂಬ ವರದಿಗೆ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 5,001 ರು., ಪ್ರಶಸ್ತಿ ಪತ್ರ ಮತ್ತು ಸ್ಮರಣಿಕೆ ಒಳಗೊಂಡಿದೆ. ಡೆಕ್ಕನ್‌ ಹೆರಾಲ್ಡ್‌ ಪತ್ರಿಕೆಯ ಮಂಗಳೂರು ಸುದ್ದಿ ವಿಭಾಗ ಮುಖ್ಯಸ್ಥ ಹರ್ಷ ಮತ್ತು ಆಳ್ವಾಸ್‌ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ್‌ ಶೆಟ್ಟಿ ನೇತೃತ್ವದ ಸಮಿತಿಯು ಈ ವರದಿಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇಶ್ವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಹೊಸದಿಗಂತ ದೈನಿಕದಲ್ಲಿ ಬಿಡಿ ಸುದ್ದಿ ಸಂಗ್ರಹಕಾರರಾಗಿ, ಹಾಯ್ ಬೆಂಗಳೂರ್ ಪತ್ರಿಕೆಯಲ್ಲಿ ವರದಿಗಾರರಾಗಿ, ಅನಂತ ಪ್ರಕಾಶ ಮಾಸಪತ್ರಿಕೆಯಲ್ಲಿ ಉಪಸಂಪಾದಕರಾಗಿ ಕಾರ್ಯ ನಿರ್ವಹಿಸುವ ಮಿಥುನ್‌, 2022ರ ಪಗೋ ಪ್ರಶಸ್ತಿ ಪುರಸ್ಕೃತರು, ಕನ್ನಡ ಸಾಹಿತ್ಯ ಪರಿಷತ್ತು ಮೂಲ್ಕಿ ತಾಲೂಕು ಘಟಕದ ಅಧ್ಯಕ್ಷರು.

ಪ್ರಶಸ್ತಿ ಪ್ರದಾನ ಸಮಾರಂಭ ಜೂ.27ರಂದು ಬೆಳಗ್ಗೆ 11 ಗಂಟೆಗೆ ಪತ್ರಿಕಾಭವನದಲ್ಲಿ ನಡೆಯಲಿದ್ದು, ಮಂಗಳೂರು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ಪ್ರಶಸ್ತಿ ಪ್ರದಾನ ಮಾಡುವರು. ಮೇಯರ್‌ ಸುಧೀರ್ ಶೆಟ್ಟಿ ಕಣ್ಣೂರು, ಕ್ರೆಡೈ ಅಧ್ಯಕ್ಷ ವಿನೋದ್ ಪಿಂಟೊ, ಜಿಲ್ಲಾ ಆಯುಷ್‌ ಅಧಿಕಾರಿ ಇಕ್ಬಾಲ್‌ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದಲ್ಲಿ ಮದ್ಯ ಮಾರಾಟ ನಿಷೇಧವಾಗುತ್ತಾ ?
ಯಾವ ದೇವ್ರಿಗೆ ಪೂಜೆ ಮಾಡಿಸಿದ್ದೀರಿ? : ಮಧುಗೆ ರವಿ!