ಕುಂದಾಪುರ: ಎಂಐಟಿಕೆಯಲ್ಲಿ ಸಂಚಾರ ಜಾಗೃತಿ ಕಾರ್ಯಕ್ರಮ

KannadaprabhaNewsNetwork |  
Published : Oct 30, 2026, 03:00 AM IST
29ಎಂಐಟಿಕೆ | Kannada Prabha

ಸಾರಾಂಶ

ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ)ಯ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋಟರಿ ಕ್ಲಬ್ ಕಲ್ಯಾಣಪುರದ ಸಹಯೋಗದೊಂದಿಗೆ ‘ಸೇಫ್‌ ಸ್ಟ್ರೀಟ್ಸ್, ಸ್ಮಾರ್ಟ್ ಯೂತ್ಸ್‌’ ಶೀರ್ಷಿಕೆಯಡಿ ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.

ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿಕೆ)ಯ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ರೋಟರಿ ಕ್ಲಬ್ ಕಲ್ಯಾಣಪುರದ ಸಹಯೋಗದೊಂದಿಗೆ ‘ಸೇಫ್‌ ಸ್ಟ್ರೀಟ್ಸ್, ಸ್ಮಾರ್ಟ್ ಯೂತ್ಸ್‌’ ಶೀರ್ಷಿಕೆಯಡಿ ರಸ್ತೆ ಸುರಕ್ಷಾ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಯಿತು.ಮುಖ್ಯ ಅತಿಥಿ ಕುಂದಾಪುರ ಸಂಚಾರ ಪೊಲೀಸ್ ಠಾಣೆಯ ಉಪನಿರೀಕ್ಷಕ ಅನೂಪ್ ನಾಯಕ್ ಅವರು ವಿದ್ಯಾರ್ಥಿಗಳಿಗೆ ಸಂಚಾರ ನಿಯಮಗಳು, ರಸ್ತೆ ಸುರಕ್ಷತೆ ಹಾಗೂ ಜವಾಬ್ದಾರಿಯುತ ವಾಹನ ಚಾಲನೆಯ ಮಹತ್ವದ ಕುರಿತು ಮಾಹಿತಿ ನೀಡಿದರು.

ರೋಟರಿ ಕ್ಲಬ್ ಕಲ್ಯಾಣಪುರದ ಅಧ್ಯಕ್ಷ ಗಿರೀಶ್ಚಂದ್ರ ಆರ್. ಅವರು ಉಪಸ್ಥಿತರಿದ್ದರು. ರೋಟರಿ ಜಿಲ್ಲಾ ಗವರ್ನರ್ ನಾಮನಿರ್ದೇಶಿತ ಅಲೆನ್ ವಿನಯ್ ಲೂಯಿಸ್ ಅವರು ಸಂಚಾರ ಜಾಗೃತಿ ಪ್ರತಿಜ್ಞೆಯನ್ನು ಬೋಧಿಸಿದರು. ದ್ವಿತೀಯ ವರ್ಷದ ಮಾಹಿತಿ ವಿಜ್ಞಾನ ಮತ್ತು ತಂತ್ರಜ್ಞಾನ ವಿಭಾಗದ ವಿದ್ಯಾರ್ಥಿನಿ ಚೇತನಾ ಅವರು ಏಕಪಾತ್ರಾಭಿನಯ ಪ್ರದರ್ಶಿಸಿದರು.

ಐಎಂಜೆ ಸಂಸ್ಥೆಗಳ ಶೈಕ್ಷಣಿಕ ನಿರ್ದೇಶಕ ಡಾ. ಎಸ್. ಎನ್. ಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಪ್ರಾಂಶುಪಾಲರಾದ ಡಾ. ರಾಮಕೃಷ್ಣ ಹೆಗ್ಡೆ ವೇದಿಕೆಯಲ್ಲಿದ್ದರು.

ಎನ್‌ಎಸ್‌ಎಸ್‌ ಸಂಯೋಜಕಿ ಪ್ರೊ. ನಿರುಪಮಾ ಜಿ. ಎನ್. ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಮಾಹಿತಿ ವಿಜ್ಞಾನ - ತಂತ್ರಜ್ಞಾನ ವಿಭಾಗದ ಮುಖ್ಯಸ್ಥೆ ಪ್ರೊ. ಲಕ್ಷ್ಮಿ ಜಿ. ಅತಿಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಸಂಯೋಜಕಿ ಪ್ರೊ. ದೃಶ್ಯಾ ಶೆಟ್ಟಿ ಅವರು ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತರ ನಷ್ಟ ತಡೆಗೆ ಹಾಲಿನ ದರ 8 ರು. ಏರಿಕೆ - ಯಾವ ಪ್ಯಾಕೆಟ್‌ ಹಾಲಿಗೆ ಎಷ್ಟು?
ರೇ* ಮಾಡಿದ್ದಕ್ಕಾಗಿ ಅಪಹರಣ ಮೂಲಕ ಪ್ರತೀಕಾರ