ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದಲ್ಲಿ ಜನ ಸಂದಣಿ ಕಡಿಮೆಯಿತ್ತು ಅಂಗಡಿ ಮುಗ್ಗಟ್ಟುಗಳು ಮುಚ್ಚಿದ್ದವಾದರೂ ಅಲ್ಲಲ್ಲಿ ಕೆಲವರು ತೆಗೆದುಕೊಂಡು ವ್ಯಾಪಾರ ಮಾಡುತ್ತಿದ್ದು ಕಂಡು ಬಂತು, ಸರ್ಕಾರಿ ಕಚೇರಿಗಳು ಶಾಲಾ ಕಾಲೇಜುಗಳು ಎಂದಿನಂತೆ ನಡೆದವು. ಬಸ್ ಸಂಚಾರ ಆಟೋ ಸಂಚಾರಗಳು ಎಂದಿನಂತೆ ನಡೆದವು.
ರೈತ ಮುಖಂಡರು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಭದ್ರಾ ಯೋಜನೆಯನ್ನು ಶೀಘ್ರಗತಿಯಲ್ಲಿ ಮುಗಿಸಿ ರೈತರ ಜಮೀನುಗಳಿಗೆ ಕೆರೆ ಕಟ್ಟೆಗಳಿಗೆ ನೀರು ಕೊಡಬೇಕು ಎಂದು ಆಗ್ರಹಿಸಿದರು.ದೇಶಕ್ಕೆ ಅನ್ನ ನೀಡುವ ರೈತರ ಪರವಾಗಿ ಯಾವ ಸರ್ಕಾರಗಳು ಕೆಲಸ ಮಾಡುತ್ತಿಲ್ಲ ಕೇವಲ ರೈತರ ಕಣ್ಣೊರೆಸುವ ಕೆಲಸವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮಾಡುತ್ತಿವೆ ಇದೆ ಪ್ರವೃತ್ತಿ ಮುಂದುವರೆದರೆ ವಿಧಾನಸೌಧ ಮುತ್ತಿಗೆ ಹಾಕಬೇಕಾಗುತ್ತದೆ ಎಂದು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ರೈತ ಸಂಘದ ತಾಲೂಕ ಅಧ್ಯಕ್ಷ ಚಿತ್ತಪ್ಪ, ಕಾರ್ಯದರ್ಶಿ ನಿರಂಜನ್ ಮೂರ್ತಿ, ಗೌರವಾಧ್ಯಕ್ಷ ಬೋರೇಶ್, ಜಿಲ್ಲಾ ಕಾರ್ಯದರ್ಶಿ ಮಹೇಶ್ವರಪ್ಪ, ತೀರ್ಥಪ್ಪ, ಸೋಮೇನಹಳ್ಳಿ ಸ್ವಾಮಿ, ಕರಿಸಿದ್ದಯ್ಯ ಸೇರಿದಂತೆ ಎಲ್ಲ ಗ್ರಾಮ ಘಟಕದ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.