ಮದ್ದೂರಿನಲ್ಲಿ ಕರ್ನಾಟಕ ಬಂದ್‌ಗೆ ಮಿಶ್ರ ಪ್ರತಿಕ್ರಿಯೆ

KannadaprabhaNewsNetwork |  
Published : Mar 23, 2025, 01:35 AM IST
22ಕೆಎಂಎನ್ ಡಿ11,12 | Kannada Prabha

ಸಾರಾಂಶ

ಬೆಂಗಳೂರು- ಮೈಸೂರು ನಡುವೆ ಹಾಗೂ ಗ್ರಾಮೀಣ ಭಾಗದಲ್ಲಿ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಸಂಚಾರ ನಡೆಸಿದ ವಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಕನ್ನಡ ಪರ ಸಂಘಟನೆಗಳ ಮುಖಂಡರು ಮದ್ದೂರು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕರ್ನಾಟಕದ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಮರಾಠಿಗರ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸಿದರು.

ಕನ್ನಡಪ್ರಭ ವಾರ್ತೆ ಮದ್ದೂರು

ಎಂಇಎಸ್ ಪುಂಡಾಟಿಕೆ ಖಂಡಿಸಿ ಕನ್ನಡ ಒಕ್ಕೂಟ ಕರೆ ನೀಡಿದ್ದ ಕರ್ನಾಟಕ ಬಂದ್‌ಗೆ ಮದ್ದೂರಿನಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಯಿತು. ತಾಲೂಕಿನ ಪ್ರಗತಿಪರ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡುವಂತೆ ವರ್ತಕರಲ್ಲಿ ಮನವಿ ಮಾಡಿದ್ದರು. ಪೇಟೆ ಬೀದಿ ಹೊರತುಪಡಿಸಿ ಮಿಕ್ಕೆಲ್ಲ ಬಡಾವಣೆಗಳಲ್ಲಿ ವರ್ತಕರು, ಹೋಟೆಲ್ ಮಾಲೀಕರು ಎಂದಿನಂತೆ ವ್ಯಾಪಾರ ನಡೆಸಿದರು.

ಎಪಿಎಂಸಿ ಎಳನೀರು ಮಾರುಕಟ್ಟೆಯಲ್ಲಿ ವಹಿವಾಟು ಎಂದಿನಂತೆ ಇತ್ತು. ವಿವಿಧ ಸಂಘಟನೆಗಳ ಮುಖಂಡರು ಬೆಳಗ್ಗೆ ಬೈಕ್ ರ್‍ಯಾಲಿ ಮೂಲಕ ಮೆರವಣಿಗೆ ನಡೆಸಿ ವ್ಯಾಪಾರ ವಹಿವಾಟು ಸ್ಥಗಿತಗೊಳಿಸಿ ಬಂದ್‌ಗೆ ಬೆಂಬಲ ನೀಡುವಂತೆ ಮನವಿ ಮಾಡಿದರು. ಇದಕ್ಕೆ ಸೊಪ್ಪು ಹಾಕದ ಕೆಲ ವರ್ತಕರುಗಳು ಅಂಗಡಿ, ಬೇಕರಿ ಮತ್ತು ಹೋಟೆಲ್ ಮಾಲೀಕರುಗಳು ಎಂದಿನಂತೆ ತೆರೆದು ವ್ಯಾಪಾರ ನಡೆಸಿದರು.

ಬೆಂಗಳೂರು- ಮೈಸೂರು ನಡುವೆ ಹಾಗೂ ಗ್ರಾಮೀಣ ಭಾಗದಲ್ಲಿ ಸಾರಿಗೆ ಬಸ್‌ಗಳ ಸಂಚಾರ ಎಂದಿನಂತೆ ಸಂಚಾರ ನಡೆಸಿದ ವಾದರೂ ಪ್ರಯಾಣಿಕರ ಸಂಖ್ಯೆ ವಿರಳವಾಗಿತ್ತು. ಕನ್ನಡ ಪರ ಸಂಘಟನೆಗಳ ಮುಖಂಡರುಗಳು ಪಟ್ಟಣದಲ್ಲಿ ಮೆರವಣಿಗೆ ನಡೆಸಿ ಕರ್ನಾಟಕದ ಗಡಿ ಭಾಗದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ನಡೆಸಿದ ಮರಾಠಿಗರ ಪುಂಡಾಟಿಕೆಯನ್ನು ತೀವ್ರವಾಗಿ ಖಂಡಿಸಿದರು. ನಂತರ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಕೆಲಕಾಲ ಧರಣಿ ನಡೆಸಿದ ಪ್ರಗತಿಪರ ಸಂಘಟನೆಗಳ ಮುಖಂಡರುಗಳು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ರಾಜ್ಯ ಸರ್ಕಾರ ಕನ್ನಡಿಗರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು, ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮುಖಂಡರು ಆಗ್ರಪಡಿಸಿದರು.

ಪ್ರತಿಭಟನೆಯಲ್ಲಿ ತೆಂಗು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಲಕ್ಷ್ಮಣ್ ಚನ್ನಸಂದ್ರ, ಮಾ.ನ.ಪ್ರಸನ್ನ ಕುಮಾರ್, ನ.ಲಿ.ಕೃಷ್ಣ, ಜಯಂತಿಲಾಲ್ ಪಟೇಲ್, ನಳಿನ, ರಜನಿ ರಾಜ್, ಗೊರವನಹಳ್ಳಿ ಪ್ರಸನ್ನ, ದೇಶಹಳ್ಳಿ ಸಿದ್ದರಾಜು, ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಕಲಾಪದಿಂದ ಹೊರಗುಳಿದು ವಕೀಲರ ಪ್ರತಿಭಟನೆ

ಮದ್ದೂರು:

ಮರಾಠಿಗರ ಕನ್ನಡ ವಿರೋಧಿ ನೀತಿ ಖಂಡಿಸಿ ಕನ್ನಡಪರ ಸಂಘಟನೆಗಳು ಕರೆ ಹಿಡಿದ ಕರ್ನಾಟಕ ಬಂದ್ ಗೆ ಬೆಂಬಲಿಸಿ ವಕೀಲರು ಶನಿವಾರ ನ್ಯಾಯಾಲಯದ ಕಲಾಪದಿಂದ ಹೊರಗುಳಿದು ಪ್ರತಿಭಟಿಸಿದರು.

ವಕೀಲರ ಸಂಘದ ಅಧ್ಯಕ್ಷ ಎಂ.ಎನ್.ಶಿವಣ್ಣ ನೇತೃತ್ವದಲ್ಲಿ ಸಭೆ ನಡೆಸಿದ ವಕೀಲರು ಕನ್ನಡಿಗರ ಮೇಲೆ ಎಂಇಎಸ್ ಮರಾಠಿಗರು ನಡೆಸುತ್ತಿರುವ ದಬ್ಬಾಳಿಕೆಯನ್ನು ತೀವ್ರವಾಗಿ ಖಂಡಿಸಿದರು. ರಾಜ್ಯದಲ್ಲಿ ಎಂ.ಇ.ಎಸ್. ಸಂಘಟನೆ ನಿಷೇಧ ಮಾಡಬೇಕು ಎಂದು ಆಗ್ರಹಿಸಿದರು.

ನಂತರ ಕನ್ನಡಪರ ಸಂಘಟನೆ ಕರೆ ನೀಡಿರುವ ಕರ್ನಾಟಕ ಬಂದ್‌ಗೆ ಬೆಂಬಲಿಸಿ ನ್ಯಾಯಾಲಯದ ಕಲಾಪದಿಂದ ಹೊರಗುಳಿಯಲು ನಿರ್ಣಯ ಕೈಗೊಂಡರು. ಈ ವೇಳೆ ವಕೀಲರ ಸಂಘದ ಉಪಾಧ್ಯಕ್ಷ ಪುಟ್ಟರಾಜು, ಪ್ರಧಾನ ಕಾರ್ಯದರ್ಶಿ ಎಂ.ಜೆ.ಸುಮಂತ್, ಹಿರಿಯವಕೀಲ ಅಪ್ಪಾಜಿಗೌಡ, ಯ.ಶಿವಣ್ಣ, ಯೋಗಾನಂದ, ಚೆಲುವರಾಜು, ವಿ. ಟಿ.ರವಿಕುಮಾರ, ಕೆ.ಶಿವಣ್ಣ, ಶಿವಕುಮಾರ, ದೇಶಹಳ್ಳಿ ಸ್ವಾಮಿ ಸೇರಿದಂತೆ ಹಲವು ವಕೀಲರು ಭಾಗವಹಿಸಿದ್ದರು.

PREV

Recommended Stories

ಮಾನಸಿಕ ದೈಹಿಕ ಸದೃಢತೆಗೆ ಕ್ರೀಡೆ ಸಹಕಾರಿ
ಸಭೆಯಲ್ಲಿ ಪುರಸಭೆ ಮಳಿಗೆಗಳ ಹರಾಜಿನ ಗದ್ದಲ