ಸರ್ಕಾರಿ ಶಾಲೆಗೆ ಶಾಸಕ ಎಆರ್‌ಕೆ ದಿಢೀರ್‌ ಭೇಟಿ: ಗುಣಮಟ್ಟ ಪರೀಕ್ಷೆ

KannadaprabhaNewsNetwork |  
Published : Aug 12, 2026, 02:00 AM IST
ಶಂಕರ್ ಬೆಳ್ಳೂರು | Kannada Prabha

ಸಾರಾಂಶ

ಪಟ್ಟಣದ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ದಿಢೀರ್‌ ಭೇಟಿ ನೀಡಿದ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶಾಲೆಯ ಶೈಕ್ಷಣಿಕ ಹಾಗೂ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಕೊಡುವ ಮಧ್ಯಾಹ್ನದ ಬಿಸಿಯೂಟವನ್ನು ಸವಿದು, ಆಹಾರದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಧ್ಯಾಹ್ನದ ಬಿಸಿಯೂಟ ಸೇವಿಸಿ ಭಾರಿ ಮೆಚ್ಚುಗೆ

ಕನ್ನಡಪ್ರಭ ವಾರ್ತೆ ಕೊಳ್ಳೇಗಾಲ

ಪಟ್ಟಣದ ಸರ್ಕಾರಿ ನ್ಯಾಷನಲ್ ಹಿರಿಯ ಪ್ರಾಥಮಿಕ ಶಾಲೆಗೆ ಮಂಗಳವಾರ ದಿಢೀರ್‌ ಭೇಟಿ ನೀಡಿದ ಶಾಸಕ ಎ.ಆರ್‌. ಕೃಷ್ಣಮೂರ್ತಿ ಅವರು ಶಾಲೆಯ ಶೈಕ್ಷಣಿಕ ಹಾಗೂ ಮೂಲಭೂತ ವ್ಯವಸ್ಥೆಗಳನ್ನು ಪರಿಶೀಲಿಸಿದರಲ್ಲದೆ ವಿದ್ಯಾರ್ಥಿಗಳಿಗೆ ಕೊಡುವ ಮಧ್ಯಾಹ್ನದ ಬಿಸಿಯೂಟವನ್ನು ಸವಿದು, ಆಹಾರದ ಗುಣಮಟ್ಟದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಬಳಿಕ ಮಾತನಾಡಿದ ಅವರು ಮಕ್ಕಳಿಗೆ ನೀಡುವ ಆಹಾರದಲ್ಲಿ ಶುಚಿತ್ವ, ಗುಣಮಟ್ಟ ಹಾಗೂ ಪೌಷ್ಟಿಕಾಂಶಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ವಿದ್ಯಾರ್ಥಿಗಳ ಆರೋಗ್ಯ ಮತ್ತು ಬೆಳವಣಿಗೆಯ ದೃಷ್ಟಿಯಿಂದ ಪ್ರತಿದಿನವೂ ಉತ್ತಮ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರವನ್ನು ನೀಡುವಲ್ಲಿ ಮುಂದಾಗಬೇಕು ಎಂದು ಸೂಚಿಸಿದರು.ಬಿಸಿಯೂಟದ ಬಳಿಕ ಶಾಸಕರು ಮಜ್ಜಿಗೆಯನ್ನೂ ಸೇವಿಸಿ, ಶಾಲೆಯ ಆಹಾರ ವ್ಯವಸ್ಥೆಯ ಬಗ್ಗೆ ಪ್ರಶಂಸೆ ವ್ಯಕ್ತಪಡಿಸಿದರು. ಮಕ್ಕಳಿಗೆ ನೀಡಲಾಗುತ್ತಿರುವ ಆಹಾರದ ಗುಣಮಟ್ಟವನ್ನು ನಿರಂತರವಾಗಿ ಕಾಪಾಡಿಕೊಳ್ಳುಬೇಕು. ಯಾವುದೆ ದೂರು ಬರದಂತೆ ಜಾಗ್ರತೆ ವಹಿಸಬೇಕು ಎಂದರು.

ಈ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಮಂಜುಳಾ, ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಮಹದೇವ ಕುಮಾರ್‌, ನ್ಯಾಷನಲ್ ಶಾಲೆಯ ಮುಖ್ಯ ಶಿಕ್ಷಕಿ ಸುನೀತಾ, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್‌, ಸಹಶಿಕ್ಷಕರಾದ ಶ್ರೀಧರ್‌, ಪುಟ್ಟರಾಜು, ಪರಶಿವಮೂರ್ತಿ, ಬಸವರಾಜು, ಬಸ್ತಿಪುರ ಪ್ರಕಾಶ್, ರವಿ, ರಮೇಶ್ ಇದ್ದರು.-

11ಕೆಜಿಎಲ್ 79

ನ್ಯಾಷನಲ್ ಶಾಲೆಯಲ್ಲಿ ಶಾಸಕ ಎ.ಆರ್‌. ಕೃಷ್ಣಮೂರ್ತಿ ಬಿಸಿಯೂಟ ಸೇವಿಸಿ ಗುಣಮಟ್ಟ ಪರಿಶೀಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುತ್ತಿಗೆದಾರರಿಗೆ ಶೇ.10 ಭದ್ರತಾ ಠೇವಣಿ ಪತ್ರ ವಿತರಣೆ
ಇಂದಿರಾ ಕ್ಯಾಂಟೀನ್‌ ಮೇಲೆ ಆಹಾರ ಇಲಾಖೆ ದಾಳಿ