ರಾಜ್‌ಕುಮಾರ್ ರಸ್ತೆಗೆ ಶಾಸಕ ಬಾಲಕೃಷ್ಣ ಗುದ್ದಲಿ ಪೂಜೆ

KannadaprabhaNewsNetwork |  
Published : Jan 28, 2025, 12:47 AM IST
27ಎಚ್ಎಸ್ಎನ್14 : ಚನ್ನರಾಯಪಟ್ಟಣದ ಹೊಸ ಬಸ್ ನಿಲ್ದಾಣದ ಹತ್ತಿರ ಇರುವ ಡಾ.ರಾಜ್‌ಕುಮಾರ್ ರಸ್ತೆಯ ಡಾಂಬರೀಕರಣಕ್ಕೆ ಶಾಸಕ ಸಿ. ಎನ್. ಬಾಲಕೃಷ್ಣ ಗುದ್ದಲಿಪೂಜೆ ನೆರವೇರಿಸಿದರು. | Kannada Prabha

ಸಾರಾಂಶ

ಲೋಕೋಪಯೋಗಿ ಇಲಾಖೆಯ ಒನ್ ಟೈಮ್ ಇಂಪ್ರ್ಯೂಮೆಂಟ್ ಕಾರ್ಯಕ್ರಮದ ಅಡಿ ೨ ಕೋಟಿ ರು. ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ, ಡ್ರೈನೇಜ್ ದುರಸ್ತಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು. ತಾಲೂಕು ಪಂಚಾಯಿತಿ ಸಮೀಪದ ವಾಣಿಜ್ಯ ಸಂಕೀರ್ಣವನ್ನು ನೂತನವಾಗಿ ನಿರ್ಮಾಣ ಮಾಡಲು ಟೆಂಡರ್‌ ಆಹ್ವಾನ ಮಾಡಲಾಗುವುದು. ಪುರಸಭೆಯ ಪುರಭವನದ ಕಾಮಗಾರಿ ಮೊದಲನೇ ಅಂತಸ್ತು ಪೂರ್ಣಗೊಂಡಿದ್ದು, ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ

ಲೋಕೋಪಯೋಗಿ ಇಲಾಖೆಯ ಒನ್ ಟೈಮ್ ಇಂಪ್ರ್ಯೂಮೆಂಟ್ ಕಾರ್ಯಕ್ರಮದ ಅಡಿ ೨ ಕೋಟಿ ರು. ವೆಚ್ಚದಲ್ಲಿ ರಸ್ತೆ ಮರು ಡಾಂಬರೀಕರಣ, ಡ್ರೈನೇಜ್ ದುರಸ್ತಿ ಕಾರ್ಯವನ್ನು ಮಾಡಲಾಗುತ್ತಿದೆ ಎಂದು ಶಾಸಕ ಸಿ. ಎನ್. ಬಾಲಕೃಷ್ಣ ಹೇಳಿದರು.

ಅವರು ಪಟ್ಟಣದ ಡಾ.ರಾಜ್‌ಕುಮಾರ್ ರಸ್ತೆಗೆ ಡಾಂಬರೀಕರಣಕ್ಕೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿ, ದಿನೇ ದಿನೆ ಪಟ್ಟಣ ಅಭಿವೃದ್ಧಿ ಹೊಂದುತ್ತಿದ್ದು, ಹೊಸ ಬಸ್ ನಿಲ್ದಾಣದ ಹತ್ತಿರ ಇರುವ ರಾಜ್‌ಕುಮಾರ್ ರಸ್ತೆಗೆ ಪುರಸಭೆ ವತಿಯಿಂದ ಬೀದಿದೀಪ ಹಾಗೂ ಡ್ರೈನೇಜ್ ಅಳವಡಿಸಿ ರೈಲ್ವೆ ನಿಲ್ದಾಣಕ್ಕೆ ಸುಗಮವಾಗಿ ಜನರು ಸಂಚರಿಸಲು ಅನುಕೂಲ ಮಾಡಿಕೊಡಲಾಗುತ್ತದೆ. ವಾರ್ಡ್‌ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ, ಡ್ರೈನೇಜ್ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ತಾಲೂಕು ಪಂಚಾಯಿತಿ ಸಮೀಪದ ವಾಣಿಜ್ಯ ಸಂಕೀರ್ಣವನ್ನು ನೂತನವಾಗಿ ನಿರ್ಮಾಣ ಮಾಡಲು ಟೆಂಡರ್‌ ಆಹ್ವಾನ ಮಾಡಲಾಗುವುದು. ಪುರಸಭೆಯ ಪುರಭವನದ ಕಾಮಗಾರಿ ಮೊದಲನೇ ಅಂತಸ್ತು ಪೂರ್ಣಗೊಂಡಿದ್ದು, ಹೆಚ್ಚಿನ ಅನುದಾನವನ್ನು ನೀಡಲಾಗುವುದು ಎಂದು ತಿಳಿಸಿದರು.

ಪುರಸಭೆ ಅಧ್ಯಕ್ಷೆ ಬನಶಂಕರಿ ರಘು, ಉಪಾಧ್ಯಕ್ಷೆ ರಾಣಿಕೃಷ್ಣ, ಸ್ಥಾಯಿ ಸಮಿತಿ ಅಧ್ಯಕ್ಷ ಸುರೇಶ್, ಪುರಸಭೆ ಮುಖ್ಯ ಅಧಿಕಾರಿ ಯತೀಶ್ ಕುಮಾರ್, ಎಂಜಿನಿಯರ್‌ ನಂಜುಂಡ, ಬಸವರಾಜ್ ಮುಂತಾದವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದೇವರ ಆಸ್ತಿ, ಹಣ ಪೋಲಾಗದಂತೆ ರಕ್ಷಿಸಿ: ಟಿ.ಶ್ರೀಕಂಠಯ್ಯ
ನನ್ನ ವಿರುದ್ಧ ದರ್ಪದ ಮಾತು ಸಲ್ಲ: ರೇಣುಕಾಚಾರ್ಯ