ಕಾಂಗ್ರೆಸ್‌ ಸೇರುವಂತೆ ಎನ್‌ಡಿಎ ಕಾರ್ಯಕರ್ತರಿಗೆ ಚನ್ನಪಟ್ಟಣದಲ್ಲಿ ಶಾಸಕ ಬಾಲಕೃಷ್ಣ ಆಹ್ವಾನ

KannadaprabhaNewsNetwork |  
Published : Sep 03, 2024, 01:31 AM IST
ಪೊಟೋ೨ಸಿಪಿಟಿ೩: ತಾಲೂಕಿನ ಮಳೂರು ಜಿಪಂ ವ್ಯಾಪ್ತಿಯಲ್ಲಿ ಮಾಗಡಿ ಶಾಸಕ ಬಾಲಕೃಷ್ಣ ಹಾಗೂ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪ್ರಮೋದ್ ಅವರನ್ನು ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಚನ್ನಪಟ್ಟಣ ಉಪಚುನಾವಣೆಗೆ ಚನ್ನಪಟ್ಟಣ ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ಉಸ್ತುವಾರಿ ಹೊತ್ತ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜಿಪಂ ವ್ಯಾಪ್ತಿಯಲ್ಲಿ ಸೋಮವಾರ ಪ್ರವಾಸ ನಡೆಸಿ ವಿಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ನಡೆಸಿದರು.

ಮಳೂರು ಜಿಪಂ ವ್ಯಾಪ್ತಿಯಲ್ಲಿ ಬಾಲಕೃಷ್ಣ ಪ್ರವಾಸ | ವಿಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯಲು ಯತ್ನ

ಕನ್ನಡಪ್ರಭ ವಾರ್ತೆ ಚನ್ನಪಟ್ಟಣ

ಚನ್ನಪಟ್ಟಣ ಉಪಚುನಾವಣೆಗೆ ತಾಲೂಕಿನ ಮಳೂರು ಜಿಲ್ಲಾ ಪಂಚಾಯಿತಿ ಉಸ್ತುವಾರಿ ಹೊತ್ತ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಜಿಪಂ ವ್ಯಾಪ್ತಿಯಲ್ಲಿ ಸೋಮವಾರ ಪ್ರವಾಸ ನಡೆಸಿ ವಿಪಕ್ಷದ ಮುಖಂಡರನ್ನು ಕಾಂಗ್ರೆಸ್‌ಗೆ ಸೆಳೆಯುವ ಪ್ರಯತ್ನ ನಡೆಸಿದರು.ತಾಲೂಕಿನ ಮಳೂರು ಜಿಪಂ ವ್ಯಾಪ್ತಿಯ ಕೂಡ್ಲೂರು, ಹೊಟ್ಟಗನಹೊಸಹಳ್ಳಿ, ವಾಲೇತೋಪು, ಚಕ್ಕೆರೆ ಗ್ರಾಮಗಳಿಗೆ ಭೇಟಿ ನೀಡಿದ ಅವರು, ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವಂತೆ ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ಮುಕ್ತ ಆಹ್ವಾನ ನೀಡಿದರು.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದು, ಪಕ್ಷದವರೇ ಕ್ಷೇತ್ರ ಶಾಸಕಾದಲ್ಲಿ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಲಿದೆ. ಈ ಹಿನ್ನೆಲೆಯಲ್ಲಿ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದರೆ, ಅನುಕೂಲವಾಗುತ್ತದೆ. ತಾಲೂಕಿನ ಅಭಿವೃದ್ಧಿ ದೃಷ್ಟಿಯಿಂದ ಕಾಂಗ್ರೆಸ್‌ಗೆ ಸೇರ್ಪಡೆಗೊಳ್ಳುವಂತೆ ಮನವಿ ಮಾಡಿದರು.ಈಗಾಗಲೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಜನಸ್ಪಂದನಾ ಕಾರ್ಯಕ್ರಮ ನಡೆಸಿದ್ದು, ಜನರ ಸಮಸ್ಯೆ ಆಲಿಸಲಾಗಿದೆ. ನಿವೇಶನ ರಹಿತರಿಗೆ ನಿವೇಶನ ನೀಡಲು ಕ್ರಮ ಕೈಗೊಳ್ಳಲಾಗಿದ್ದು, ಇದರ ಜತೆಗೆ ವಸತಿ ಯೋಜನೆಯಲ್ಲಿ ೫ಸಾವಿರ ಮನೆ ಸಹ ಮಂಜೂರಾಗಿದೆ. ತಾಲೂಕಿನ ಅಭಿವೃದ್ಧಿಗೆ ೧೫೦ ಕೋಟಿ ವಿಶೇಷ ಅನುದಾನ ನೀಡಲು ಕ್ರಮಕೈಗೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ಗೆ ಸೇರ್ಪಡೆಗೊಂಡು ಕ್ಷೇತ್ರದ ಅಭಿವೃದ್ಧಿಗೆ ಕೈಜೋಡಿಸುವಂತೆ ಮನವಿ ಮಾಡಿದರು.ಇದೇ ವೇಳೆ ಅವರು ಚುನಾವಣೆ ಯಾವ ಸಮಯದಲ್ಲಿ ಬೇಕಾದರೂ ಘೋಷಣೆಯಾಗಬಹುದಾಗಿದ್ದು, ಕಾಂಗ್ರೆಸ್ ಸರ್ಕಾರ ನೀಡಿರುವ ೫ಗ್ಯಾರೆಂಟಿಗಳ ಜತೆಗೆ ಕ್ಷೇತ್ರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳ ಕುರಿತು ಜನರಿಗೆ ಅರಿವು ಮೂಡಿಸುವಂತೆ ಕಾಂಗ್ರೆಸ್ ಕಾರ್ಯಕರ್ತರಿಗೆ ಕರೆ ನೀಡಿದರು.ಈ ಸಂದರ್ಭದಲ್ಲಿ ಚನ್ನಪಟ್ಟಣ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಎಸ್. ಆರ್. ಪ್ರಮೋದ್, ಪ್ರಸನ್ನ, ವೆಂಕಟರಾಜು, ಆನಂದ ಮುಂತಾದವರು ಇದ್ದರು.

PREV

Recommended Stories

2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...