ರಾಮನಗರ: ಮಂಚನಾಯ್ಕನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಿವಿಧ ಗ್ರಾಮಗಳಲ್ಲಿ ಸುಮಾರು 19 ಕೋಟಿ ರು. ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಗಡಿ ಕ್ಷೇತ್ರದ ಶಾಸಕ ಎಚ್.ಸಿ. ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು.
7 ಕೋಟಿ ರು. ವೆಚ್ಚದಲ್ಲಿ ಬಿ.ಎಂ.ರಸ್ತೆಯಿಂದ ಶ್ಯಾನುಮಂಗಲ ಮಾರ್ಗವಾಗಿ ಕನಕಪುರ ಗಡಿ ಸೇರುವ 4 ಕಿ.ಮೀ ರಸ್ತೆ ಅಭಿವೃದ್ಧಿ, 2 ಕೋಟಿ ರು. ವೆಚ್ಚದಲ್ಲಿ ಚಿಕ್ಕಕುಂಟನಹಳ್ಳಿ ಕ್ರಾಸ್‌ನಿಂದ ಪರಸನಪಾಳ್ಯ-ಬೈಚೋಹಳ್ಳಿ ಮುಖಾಂತರ ಬೆಂಗಳೂರು ದಕ್ಷಿಣ ತಾಲೂಕಿನ ಗಡಿ ಸೇರುವ ರಸ್ತೆಯ ಸರಪಳಿ 0.4 ಕಿ.ಮೀ.ಗೆ ಅಡ್ಡಲಾಗಿ ಸೇತುವೆ ನಿರ್ಮಾಣ ಕಾಮಗಾರಿಗೆ ಗುದ್ದಲಿ ಪೂಜೆ, 10 ಕೋಟಿ ವೆಚ್ಚದಲ್ಲಿ ಕನಕಪುರ ಎಲ್ಲೆ ಸೇರುವ ರಸ್ತೆ ಸರಪಳಿ 4 ಕಿ.ಮೀ.ನಿಂದ 10 ಕಿ.ಮೀ.ವರೆಗೆ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.ಈ ವೇಳೆ ಗ್ರಾಮಸ್ಥರು ತಮ್ಮ ಸಮಸ್ಯೆಗಳ ಮನವಿ ಶಾಸಕರಿಗೆ ಸಲ್ಲಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿದ್ದ ಅಧಿಕಾರಿಗಳ ಮೂಲಕ ಬಗೆಹರಿಸುವ ಪ್ರಯತ್ನ ಮಾಡಿದರಲ್ಲದೆ, ನಾನು ಖುದ್ದಾಗಿ ಸಮಸ್ಯೆಗಳನ್ನು ಆಲಿಸಿ ಸಾರ್ವಜನಿಕರ ಕೆಲಸ ಮಾಡುತ್ತೇನೆ, ಯಾರು ಧೃತಿಗೆಡಬೇಡಿ ಎಂದು ಸಾರ್ವಜನಿಕರಿಗೆ ಶಾಸಕ ಎಚ್.ಸಿ.ಬಾಲಕೃಷ್ಣ ತಿಳಿಸಿದರು.
ಈ ವೇಳೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು, ಪುರಸಭೆ ಸದಸ್ಯ ಸಿ.ಉಮೇಶ್, ಕೆಪಿಸಿಸಿ ಸದಸ್ಯ ಬ್ಯಾಟಪ್ಪ, ಮಂಚನಾಯ್ಕನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ತಾಯಮ್ಮರಂಗಸ್ವಾಮಿ, ಸದಸ್ಯರಾದ ವೇಣುಗೋಪಾಲ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ಯು.ನರಸಿಂಹಯ್ಯ, ತಾಪಂ ಮಾಜಿ ಅಧ್ಯಕ್ಷ ಜಯಚಂದ್ರ, ಮುಖಂಡರಾದ, ಸಂಪತ್ತುಕುಮಾರ್, ನರಸಿಂಹಯ್ಯ, ಶಿವಣ್ಣ ಹಾಜರಿದ್ದರು.8ಕೆಆರ್ ಎಂಎನ್ 3.ಜೆಪಿಜಿ
ಮಂಚನಾಯ್ಕನಹಳ್ಳಿ ಗ್ರಾಪಂ ವ್ಯಾಪ್ತಿಯ ಗ್ರಾಮಗಳಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಮಾಗಡಿ ಕ್ಷೇತ್ರದ ಶಾಸಕ ಬಾಲಕೃಷ್ಣ ಭೂಮಿಪೂಜೆ ನೆರವೇರಿಸಿದರು. ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಗಾಣಕಲ್ ನಟರಾಜು, ಪುರಸಭೆ ಸದಸ್ಯ ಉಮೇಶ್, ಕೆಪಿಸಿಸಿ ಸದಸ್ಯ ಬ್ಯಾಟಪ್ಪ, ಮಂಚನಾಯ್ಕನಹಳ್ಳಿ ಗ್ರಾಪಂ ಉಪಾಧ್ಯಕ್ಷೆ ತಾಯಮ್ಮಇತರರಿದ್ದರು.