ಕನ್ನಡಪ್ರಭವಾರ್ತೆ ಬಾಗೂರು
ಹೋಬಳಿಯ ನವಿಲೇ ಗ್ರಾಮದಲ್ಲಿ ಕೆಎಂಎಫ್ ಉತ್ಪನ್ನಗಳ ಮಾರಾಟ ಕೇಂದ್ರವನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಡೇರಿಯ ಸಂಸ್ಕರಣಾ ಸಾಮರ್ಥ್ಯವನ್ನು 15 ಲಕ್ಷ ಲೀಟರ್‌ಗೆ ವಿಸ್ತರಿಸಲಾಗುವುದು. ಪ್ರತಿದಿನ 60 ಮೆಟ್ರಿಕ್ ಟನ್ ಹಾಲಿನ ಪುಡಿ ಉತ್ಪಾದಿಸುವ ಘಟಕವೂ ಆರಂಭವಾಗಲಿದೆ. 93 ಬಗೆಯ ಐಸ್‌ಕ್ರೀಂ, ನಂದಿನಿ ತುಪ್ಪ ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರಿಸಲಾಗುವುದು ಎಂದರು. ಹಾಸನ ಸೇರಿದಂತೆ ನಾಲ್ಕು ಜಿಲ್ಲೆಗಳ ಹಾಲು ಉತ್ಪಾದಕ ರೈತರಿಗೆ ಹೆಚ್ಚಿನ ಪ್ರಮಾಣದಲ್ಲಿ ಹಾಲು ಮಾರಾಟ ಮಾಡಲು ಮಾರುಕಟ್ಟೆ ಅವಕಾಶ ಕಲ್ಪಿಸಲಾಗುವುದು. ನಾಗೇಶ್ವರ ಸ್ವಾಮಿ ಕ್ಷೇತ್ರಕ್ಕೆ ಆಗಮಿಸುವ ಭಕ್ತರಿಗೆ ನಂದಿನಿ ಹಾಲಿನ ಉತ್ಪನ್ನಗಳು ಕಡಿಮೆ ದರದಲ್ಲಿ ದೊರೆಯುವ ವ್ಯವಸ್ಥೆ ಮಾಡಲಾಗಿದೆ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ನವಿಲೇ ಪರಮೇಶ್ ಮಾತನಾಡಿ, ನಾಗೇಶ್ವರ ಸ್ವಾಮಿ ಕ್ಷೇತ್ರದ ಕಲ್ಯಾಣ ಮಂಟಪದ ಕಾಮಗಾರಿ ಪೂರ್ಣಗೊಳಿಸುವ ಜತೆಗೆ ಶುದ್ಧ ಕುಡಿಯುವ ನೀರಿನ ಘಟಕ, ವಿಶ್ರಾಂತಿ ಕೊಠಡಿಗಳು, ಉದ್ಯಾನವನ, ವಾಹನ ನಿಲುಗಡೆ ವ್ಯವಸ್ಥೆ ಹಾಗೂ ಪ್ರಸಾದ ವಿತರಣಾ ಕೇಂದ್ರ ನಿರ್ಮಿಸಿಕೊಡುವಂತೆ ಶಾಸಕರಿಗೆ ಮನವಿ ಮಾಡಿದರು.ನಿವೃತ್ತ ಇಂಜಿನಿಯರ್ ಸದಾಶಿವಪ್ಪ, ನಾಗಭೂಷಣ್, ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎನ್. ಬಸವರಾಜು, ಇಟ್ಟಿಗೆ ಕುಮಾರ್, ನಾಗರಾಜ್, ನಾರಾಯಣ, ಪಟೇಲ್ ಮಂಜುನಾಥ್, ಬೈಫ್ ಗಿರೀಶ್, ಸಿದ್ದೇಶ್ ಶಾಸ್ತ್ರಿ, ರವಿ, ದಿನೇಶ್, ನವೀನ್ ಕುಮಾರ್ ಸೇರಿದಂತೆ ಇತರರು ಇದ್ದರು.