ಕೋಡಿಮೋಳೆ ಕೆರೆ ಅಭಿವೃದ್ಧಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಶಂಕುಸ್ಥಾಪನೆ

KannadaprabhaNewsNetwork |  
Published : Jun 09, 2026, 01:45 AM IST
8ಸಿಎಚ್‌ಎನ್‌53ಚಾಮರಾಜನಗರದ ಹೊರವಲಯದಲ್ಲಿರುವ ಕೋಡಿಮೋಳೆ ಕೆರೆ ಆವರಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು, 4 ಕೋಟಿ 25 ಲಕ್ಷ ರು. ವೆಚ್ಚದ ಕೋಡಿಮೋಳೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು. | Kannada Prabha

ಸಾರಾಂಶ

ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 3 ಕೋಟಿ 50 ಲಕ್ಷ ರು. ವೆಚ್ಚದಲ್ಲಿ ಕೋಡಿಮೋಳೆ ಕೆರೆ ಹಾಗೂ 60 ಲಕ್ಷ ರು. ವೆಚ್ಚದಲ್ಲಿ ಸೋಮವಾರಪೇಟೆಯ ಬಳಿ ಕಟ್ಟೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ.

4 ಕೋಟಿ 25 ಲಕ್ಷ ರು. ವೆಚ್ಚದ ಕಾಮಗಾರಿಗೆ ಶಾಸಕ ಸಿ. ಪುಟ್ಟರಂಗಶೆಟ್ಟಿ ಗುದ್ದಲಿ ಪೂಜೆ । ಸೋಮವಾರಪೇಟೆಯ ಬಳಿ ಕಟ್ಟೆ ಅಭಿವೃದ್ಧಿ

ಕನ್ನಡಪ್ರಭ ವಾರ್ತೆ ಚಾಮರಾಜನಗರ

ಎಂಎಸ್‌ಐಎಲ್‌ ಅಧ್ಯಕ್ಷ ಹಾಗೂ ಶಾಸಕ ಸಿ. ಪುಟ್ಟರಂಗಶೆಟ್ಟಿ ಅವರು ಚಾಮರಾಜನಗರ-ರಾಮಸಮುದ್ರ ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಹಮ್ಮಿಕೊಳ್ಳಲಾಗುತ್ತಿರುವ ಕೋಡಿಮೋಳೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ ನೆರೆವೇರಿಸಿದರು.ನಗರದ ಹೊರವಲಯದಲ್ಲಿರುವ ಕೋಡಿಮೋಳೆ ಕೆರೆ ಆವರಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು, 4 ಕೋಟಿ 25 ಲಕ್ಷ ರು. ವೆಚ್ಚದ ಕೋಡಿಮೋಳೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.ಇದೇ ವೇಳೆ ಮಾತನಾಡಿದ ಅವರು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ 3 ಕೋಟಿ 50 ಲಕ್ಷ ರು. ವೆಚ್ಚದಲ್ಲಿ ಕೋಡಿಮೋಳೆ ಕೆರೆ ಹಾಗೂ 60 ಲಕ್ಷ ರು. ವೆಚ್ಚದಲ್ಲಿ ಸೋಮವಾರಪೇಟೆಯ ಬಳಿ ಕಟ್ಟೆ ಅಭಿವೃದ್ಧಿ ಕಾಮಗಾರಿ ಮಾಡಲಾಗುತ್ತಿದೆ. ಕೋಡಿಮೋಳೆ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ಸಾರ್ವಜನಿಕರಿಗೆ ಅನುಕೂಲವಾಗುವಂತೆ ವಾಕಿಂಗ್ ಪಾತ್ (ಪುಟ್ಪಾತ್), ವಿದ್ಯುತ್ ದೀಪ, ಪಾರ್ಕಿಂಗ್ ಜನರು ಕುಳಿತುಕೊಳ್ಳಲು ಕಲ್ಲುಬೆಂಚುಗಳ ವ್ಯವಸ್ಥೆ, ರಸ್ತೆ ಅಭಿವೃದ್ಧಿಯೂ ಸೇರಿವೆ ಎಂದರು.

ಸೋಮವಾರಪೇಟೆಯಿಂದ ಭುವನೇಶ್ವರಿ ವೃತ್ತ ಹಾಗೂ ಭುವನೇಶ್ವರಿ ವೃತ್ತದಿಂದ ಜಾಲಹಳ್ಳಿ ಹುಂಡಿವರೆಗೆ ವಿದ್ಯುತ್ ಬೀದಿ ದೀಪಗಳನ್ನು 80 ಲಕ್ಷ ರು. ವೆಚ್ಚದಲ್ಲಿ ಅಳವಡಿಸಲಾಗುತ್ತಿದೆ. ಪಟ್ಟಣದ ಅಭಿವೃದ್ಧಿಗಾಗಿ ನೂರಾರು ಕೋಟಿ ವೆಚ್ಚದ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ತಿಳಿಸಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮದ್ ಅಸ್ಗರ್ ಮುನ್ನಾ ಅವರು ಮಾತನಾಡಿ, 1998-99ರಲ್ಲಿ ನಗರಾಭಿವೃದ್ಧಿ ಪ್ರಾಧಿಕಾರವನ್ನು ಚಾಮರಾಜನಗರದಲ್ಲಿ ಅಪ್‌ಗ್ರೇಡ್‌ಗೊಳಿಸಲಾಯಿತು. 2011-12ನೇ ಸಾಲಿನಲ್ಲಿ ಕೆರೆ ಅಭಿವೃದ್ಧಿ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿತ್ತು. ಅಂದಿನಿಂದ ಈವರೆಗೆ ಬಿಡುಗಡೆಯಾದ ಅನುದಾನವನ್ನು ಕ್ರೋಢಿಕರಿಸಿ ಶಾಸಕರ ಮಾರ್ಗದರ್ಶನದಲ್ಲಿ ಕೋಡಿಮೋಳೆ ಕೆರೆ ಹಾಗೂ ಸೋಮವಾರಪೇಟೆಯ ಬಳಿ ಇರುವ ಕಟ್ಟೆ ಅಭಿವೃದ್ಧಿ ಕಾಮಗಾರಿ ಹಮ್ಮಿಕೊಳ್ಳಲಾಗಿದೆ. ಕಾಮಗಾರಿಗೆ ಸರ್ಕಾರದ ಅನುಮೋದನೆಯು ದೊರೆತಿದೆ ಎಂದರು.ಮುಂಬರುವ ದಿನಗಳಲ್ಲಿ ಪಟ್ಟಣದಲ್ಲಿ 50:50ರ ಅನುಪಾತದಲ್ಲಿ ಲೇಔಟ್ ನಿರ್ಮಿಸಲಾಗುತ್ತಿದ್ದು, ಇದಕ್ಕಾಗಿ 14 ಕೋಟಿ 34 ಲಕ್ಷ ರು. ವೆಚ್ಚದಲ್ಲಿ ಟೆಂಡರ್ ಕರೆಯಲಾಗುತ್ತಿದೆ. ಕೋಡಿಮೋಳೆ ಕೆರೆ ಕಾಮಗಾರಿಯಲ್ಲಿ ಜನರಿಗೆ ವಾಯುವಿಹಾರಕ್ಕೆ ಅನುಕೂಲವಾಗುವಂತೆ ವಾಕಿಂಗ್ ಪಾತ್, ಕೆರೆಯ ಸುತ್ತಲು ಗಿಡಗಳನ್ನು ಬೆಳೆಸಲಾಗುತ್ತದೆ. ವಿದ್ಯುತ್ ದೀಪ ಅಳವಡಿಸಲಾಗುತ್ತದೆ. ಪ್ರವಾಸೋದ್ಯಮ ಇಲಾಖೆಯಿಂದ ದೋಣಿವಿಹಾರಕ್ಕೂ ಅನುಕೂಲ ಕಲ್ಪಿಸಲಾಗುತ್ತದೆ. ಕೋಡಿಮೋಳೆ ಕೆರೆ ಅಭಿವೃದ್ಧಿಪಡಿಸಿ ನಿರ್ವಹಣೆಗಾಗಿ ಸಂಬಂಧಪಟ್ಟ ಪಂಚಾಯಿತಿಗೆ ಹಸ್ತಾಂತರಿಸಲಾಗುವುದು ಎಂದು ತಿಳಿಸಿದರು.ಜಿಲ್ಲಾ ಪಂಚಾಯಿತಿ ಕೆ.ಡಿ.ಪಿ. ಅಧಿಕಾರೇತರ ಸದಸ್ಯ ಸಯ್ಯದ್ ಮುಸಾಯಿಲ್, ತಾಲೂಕು ಪಂಚಾಯಿತಿ ಕೆ.ಡಿ.ಪಿ ಸದಸ್ಯರಾದ ಶ್ರೀನಿವಾಸ್, ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಮರಿಸ್ವಾಮಿ, ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾದ ಪುಟ್ಟಸ್ವಾಮಿ ದ್ವಾರಕಿ, ರಾಜು, ಕನಿಷ್ಠ ವೇತನ ಸಲಹಾ ಮಂಡಳಿ ಮಾಜಿ ಅಧ್ಯಕ್ಷ ಉಮೇಶ್, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ಸೀಮಾ, ಸಣ್ಣ ನೀರಾವರಿ ಇಲಾಖೆಯ ಇಂಜಿನಿಯರ್ ಮಂಜುಳ, ಮುಖಂಡರಾದ ಕೋಡಿಮೋಳೆ ಗೋವಿಂದಶೆಟ್ಟಿ, ಪ್ರಕಾಶ್, ರಮೇಶ್, ನಟರಾಜು, ಸ್ವಾಮಿ, ಇತರರು ಇದ್ದರು.

--------8ಸಿಎಚ್‌ಎನ್‌53

ಚಾಮರಾಜನಗರದ ಹೊರವಲಯದಲ್ಲಿರುವ ಕೋಡಿಮೋಳೆ ಕೆರೆ ಆವರಣದಲ್ಲಿ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು, 4 ಕೋಟಿ 25 ಲಕ್ಷ ರು. ವೆಚ್ಚದ ಕೋಡಿಮೋಳೆ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗಂಭೀರ ಕಾಲಘಟ್ಟದಲ್ಲಿ ಇಂದು ಬ್ರಾಹ್ಮಣ ಸಮಾಜ: ನಟರಾಜ ಭಾಗವತ್
‘ಕಾಯಕ ಸೇತು’ ಉದ್ಯೋಗ ಸಂದರ್ಶನಕ್ಕೆ ಡಾ.ಧನಂಜಯ ಸರ್ಜಿ ಚಾಲನೆ