ಬಿರುಬಿಸಿಲಿನಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ಮತಯಾಚನೆ

KannadaprabhaNewsNetwork | Published : Apr 7, 2024 1:47 AM
Follow Us

ಸಾರಾಂಶ

ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರ

ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ ಶಾಸಕ ಸಿ.ಪುಟ್ಟರಂಗಶೆಟ್ಟಿ ತಮ್ಮ ಬೆಂಬಲಿಗರೊಂದಿಗೆ ಕಾಂಗ್ರೆಸ್ ಅಭ್ಯರ್ಥಿ ಸುನಿಲ್ ಬೋಸ್ ಪರ ಮತಯಾಚನೆ ಮಾಡಿದರು.ತಾಲೂಕಿನ ಕೂಡ್ಲೂರು, ಮಾದಾಪುರ ಸೇರಿದಂತೆ ಹಲವು ಗ್ರಾಮಗಳಿಗೆ ಭೇಟಿ ನೀಡಿ, ಗ್ರಾಮದೇವತೆಗೆ ಪೂಜೆ ಸಲ್ಲಿಸಿ ನಂತರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸುನಿಲ್‌ಬೋಸ್ ಪರ ಮತಯಾಚನೆ ಮಾಡಿದರು.

ನಂತರ ಮಾತನಾಡಿದ ಅವರು, ನುಡಿದಂತೆ ನಡೆದ ಪಕ್ಷ ನಮ್ಮ ಕಾಂಗ್ರೆಸ್ ಪಕ್ಷ. 5 ಗ್ಯಾರಂಟಿಗಳನ್ನು ಸಮರ್ಪಕವಾಗಿ ಜಾರಿಮಾಡಿರುವಂತಹ ಏಕೈಕ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರವೇ. ಯಾವಾಗಲೂ ಕೂಡಾ ಜನಪರವಾಗಿ, ಬಡವರ ಪರವಾಗಿರುವ ಪಕ್ಷವಾಗಿದೆ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವಂತೆ ಮನವಿ ಮಾಡಿದರು.

ದೇಶದಲ್ಲಿ ಈ ಹಿಂದೆ ಕಾಂಗ್ರೆಸ್ ಪಕ್ಷ ಅಧಿಕಾರಲ್ಲಿದ್ದ ಸಂದರ್ಭದಲ್ಲಿ ಜನಪರವಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತರಲಾಗಿತ್ತು. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರ ಸರ್ಕಾರದಲ್ಲಿ ಉಸ್ತುವಾರಿ ಸಚಿವ ದಿವಂಗತ ಎಚ್.ಎಸ್.ಮಹದೇವ ಪ್ರಸಾದ್, ಸಂಸದರಾಗಿ ಧ್ರುವನಾರಾಯಣ ಅವರು ಇದ್ದಂತಹ ಸಂದರ್ಭದಲ್ಲಿ ನಾನೂ ಕೂಡಾ ಸಾಕಷ್ಟು ಅನುದಾನಗಳನ್ನು ತರುವ ಮೂಲಕ ಚಾಮರಾಜನಗರ ಜಿಲ್ಲೆಯನ್ನು ಸಾಕಷ್ಟು ಅಭಿವೃದ್ಧಿ ಮಾಡಿದ್ದು, ಜಿಲ್ಲೆಯ ಜನತೆಗೆ ಅನುಕೂಲ ಮಾಡಲಾಗಿದೆ ಎಂದರು.

ದೀನ ದಲಿತರ, ಬಡವರ, ಸಾಮಾನ್ಯ ಜನರ ಜನಪರವಾಗಿ ಕೆಲಸ ಮಾಡಿದಂತಹ ಪಕ್ಷ ಎಂದರೆ ಅದು ಕಾಂಗ್ರೆಸ್ ಮಾತ್ರ. ಎಲ್ಲರೂ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡುವ ಮೂಲಕ ಸುನಿಲ್ ಬೋಸ್ ಅವರಿಗೆ ಅತ್ಯಧಿಕ ಮತಗಳನ್ನು ನೀಡಬೇಕೆಂದು ಮನವಿ ಮಾಡಿದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕಾಡಾ ಅಧ್ಯಕ್ಷ ಪಿ.ಮರಿಸ್ವಾಮಿ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಆರ್.ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್.ಗುರುಸ್ವಾಮಿ, ಮಹಮದ್‌ಅಸ್ಗರ್. ಹಿಂದುಳಿದ ವರ್ಗಗಳ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಎ. ಮಹದೇವಶೆಟ್ಟಿ, ಮಾದಾಪುರ ಗ್ರಾಪಂ ಅಧ್ಯಕ್ಷ ರೂಪೇಶ್, ಆಲೂರು ಎಪಿಎಂಸಿ ಸದಸ್ಯ ಆಲೂರು ಪ್ರತಾಪ್, ಕಾಗಲವಾಡಿ ಚಂದ್ರು, ಮಾಜಿ ಅಧ್ಯಕ್ಷ ನಾಗೇಂದ್ರ, ಶಿವಕುಮಾರ್, ಕಾಗಲವಾಡಿ ಚಂದ್ರು, ಕೋಡಿಮೋಳೆ ಪ್ರಕಾಶ್, ತಾಪಂ ಮಾಜಿ ಸದಸ್ಯ ಮಹದೇವಶೆಟ್ಟಿ, ಕಾರ್ಮಿಕ ವಿಭಾಗದ ಜಿಲ್ಲಾ ಕಾರ್ಯಾಧ್ಯಕ್ಷ ಮೂರ್ತಿ, ದೊಡ್ಡರಾಯಪೇಟೆ ರವಿಗೌಡ, ಬೂದಿತಿಟ್ಟು ಲಿಂಗರಾಜು, ಸಿದ್ದರಾಜು, ಶಿವಣ್ಣ, ನಂಜುಂಡಪ್ಪ, ಮಹದೇವಶೆಟ್ಟಿ, ಜಿಲ್ಲಾ ಯುವ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್, ದೊರೆಸ್ವಾಮಿ, ಮಹೇಶ್, ಸಿದ್ದರಾಜು ಮತ್ತು ಗ್ರಾ.ಪಂ. ಸದಸ್ಯರು, ಪಕ್ಷದ ಮುಖಂಡರು ಮತ್ತಿತರರಿದ್ದರು.