ರಕ್ತದಾನ ಮಾಡಿ ಪ್ರಾಣ ಉಳಿಸಿ ಎಂದ ಶಾಸಕ ಸಿಮೆಂಟ್ ಮಂಜು

KannadaprabhaNewsNetwork |  
Published : Oct 09, 2025, 02:00 AM IST
8ಎಚ್ಎಸ್ಎನ್16 : ಆಲೂರು ಶಾಸಕರ ಕಚೇರಿ ಎದುರು ಪ್ರಧಾನ ಮಂತ್ರಿ ನರೇಂದ್ರಮೋದಿಜಿ ಯವರ ೭೫ನೆ ಜನ್ಮದಿನದ ಅಂಗವಾಗಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರವನ್ನು ಶಾಸಕ ಸಿಮೆಂಟ್ ಮಂಜು ಉದ್ಘಾಟಿಸಿದರು.  | Kannada Prabha

ಸಾರಾಂಶ

ಸಮಯಕ್ಕೆ ಸರಿಯಾಗಿ ರಕ್ತ ಸಿಗದ ಕಾರಣ ಪ್ರತಿವರ್ಷ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಷ್ಟೆ ಮುಂದುವರಿದರೂ, ರಕ್ತಕ್ಕೆ ಪರ್ಯಾಯವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲು ಅಸಾಧ್ಯ. ಮನುಷ್ಯ ಮಾತ್ರ ಮತ್ತೊಬ್ಬ ಮನುಷ್ಯನಿಗೆ ರಕ್ತದಾನವನ್ನು ಮಾಡಿ ಜೀವ ಉಳಿಸಬಹುದು. ರಕ್ತದಾನ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ನಿಯಮಿತ ರಕ್ತದಾನವು ದೇಹದಲ್ಲಿ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಹರಿವನ್ನು ಹೆಚ್ಚಿಸುತ್ತದೆ ಎಂದರು.

ಕನ್ನಡಪ್ರಭ ವಾರ್ತೆ ಆಲೂರುವಿಶ್ವದಲ್ಲೇ ಅತಿ ಹೆಚು ರಕ್ತದ ಕೊರತೆಯಿಂದ ಬಳಲುತ್ತಿರುವವರು ಭಾರತ ದೇಶದಲ್ಲಿದ್ದಾರೆ ಎಂದು ಶಾಸಕ ಸಿಮೆಂಟ್ ಮಂಜು ತಿಳಿಸಿದರು.

ಪಟ್ಟಣದಲ್ಲಿರುವ ಶಾಸಕರ ಕಚೇರಿ ಎದುರು ಪ್ರಧಾನಮಂತ್ರಿ ನರೇಂದ್ರ ಮೋದಿಯವರ 75ನೇ ಜನ್ಮದಿನದ ಅಂಗವಾಗಿ ಏರ್ಪಡಿಸಲಾಗಿದ್ದ ರಕ್ತದಾನ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು. ಸಮಯಕ್ಕೆ ಸರಿಯಾಗಿ ರಕ್ತ ಸಿಗದ ಕಾರಣ ಪ್ರತಿವರ್ಷ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು ಸಾವನ್ನಪ್ಪುತ್ತಿದ್ದಾರೆ. ಆ ಜೀವಗಳನ್ನು ಉಳಿಸಲು ರಕ್ತದಾನವನ್ನು ಪ್ರೋತ್ಸಾಹಿಸಬೇಕಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ಎಷ್ಟೆ ಮುಂದುವರಿದರೂ, ರಕ್ತಕ್ಕೆ ಪರ್ಯಾಯವಿಲ್ಲ. ರಕ್ತವನ್ನು ಕೃತಕವಾಗಿ ತಯಾರಿಸಲು ಅಸಾಧ್ಯ. ಮನುಷ್ಯ ಮಾತ್ರ ಮತ್ತೊಬ್ಬ ಮನುಷ್ಯನಿಗೆ ರಕ್ತದಾನವನ್ನು ಮಾಡಿ ಜೀವ ಉಳಿಸಬಹುದು. ರಕ್ತದಾನ ಮಾಡುವುದರಿಂದ ಹೃದಯದ ಆರೋಗ್ಯ ಸುಧಾರಿಸುತ್ತದೆ. ನಿಯಮಿತ ರಕ್ತದಾನವು ದೇಹದಲ್ಲಿ ಕೊಬ್ಬಿನ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರಕ್ತದ ಹರಿವನ್ನು ಹೆಚ್ಚಿಸುತ್ತದೆ ಎಂದರು.

ಬಿಜೆಪಿ ಜಿಲ್ಲಾಧ್ಯಕ್ಷ ಸಿದ್ದೇಶ್ ನಾಗೇಂದ್ರ ಮಾತನಾಡಿ, ಗಾಯಗೊಂಡವರಿಗೆ, ಶಸ್ತ್ರಚಿಕಿತ್ಸೆಗೆ ಒಳಗಾದವರಿಗೆ ಮತ್ತು ಮಾರಣಾಂತಿಕ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಯಾವುದೇ ಪರಿಸ್ಥಿತಿಯಲ್ಲಿ ರಕ್ತದ ಅವಶ್ಯಕತೆ ಇರುತ್ತದೆ. ಆದರೆ ಅನೇಕ ಜನರು ರಕ್ತದಾನ ಮಾಡುವುದರಿಂದ ದುರ್ಬಲರಾಗುತ್ತೇವೆ ಎಂದು ಭಾವಿಸುತ್ತಾರೆ. ಆದರೆ ಅದು ತಾತ್ಕಾಲಿಕ ಮಾತ್ರ. ವಾಸ್ತವವಾಗಿ ರಕ್ತದಾನ ಮಾಡುವುದರಿಂದ ದೇಹಕ್ಕೆ ವಿವಿಧ ರೀತಿಯ ಆರೋಗ್ಯ ಪ್ರಯೋಜನಗಳಿವೆ. ಹಣಕ್ಕಾಗಿ ರಕ್ತದಾನ ಮಾಡುವುದು ಶಿಕ್ಷಾರ್ಹ ಅಪರಾಧ. ೧೮ರಿಂದ ೬೦ ವರ್ಷದೊಳಗಿನ ಯಾರೆ ಆದರೂ ಲಿಂಗಬೇಧವಿಲ್ಲದೆ ರಕ್ತದಾನ ಮಾಡಬಹುದು. ರಕ್ತದ ಉತ್ಪನ್ನಗಳನ್ನು ಪರವಾನಗಿ ಹೊಂದಿರುವ ರಕ್ತನಿಧಿ ಕೇಂದ್ರಗಳಿಂದ ಮಾತ್ರ ಪಡೆಯಬೇಕು ಎಂದರು.

ಸಮಾರಂಭದಲ್ಲಿ ರಕ್ತದಾನ ಮಾಡಿದವರಿಗೆ ಸಸಿಗಳು ಮತ್ತು ಪ್ರಮಾಣ ಪತ್ರ ವಿತರಿಸಲಾಯಿತು. ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಉಪಸ್ಥಿತರಿದ್ದರು.

PREV

Recommended Stories

ದಲಿತರಿಗೆ ದಿಲ್ಲಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರ : ಜಾರಕಿಹೊಳಿ
ತೀವ್ರ ಚಳಿ, ಜ್ವರ : ದೇವೇಗೌಡ ಆಸ್ಪತ್ರೆಗೆ, ಐಸಿಯುನಲ್ಲಿ ಚಿಕಿತ್ಸೆ