ಮನೆಮನೆಗೆ ತೆರಳಿ ಶಾಸಕ ಚವ್ಹಾಣ ಎಸ್ಸೈಆರ್‌ ಜಾಗೃತಿ

KannadaprabhaNewsNetwork |  
Published : Jul 27, 2026, 01:45 AM IST
ಚಿತ್ರ 26ಬಿಡಿಆರ್54 | Kannada Prabha

ಸಾರಾಂಶ

ಎಸ್‌ಐಆರ್ ಮಹಾ ಸಂಪರ್ಕ ಅಭಿಯಾನದ ನಿಮಿತ್ತ ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು ಭಾನುವಾರ ಕಮಲನಗರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಕನ್ನಡಪ್ರಭ ವಾರ್ತೆ ಕಮಲನಗರ

ಎಸ್‌ಐಆರ್ ಮಹಾ ಸಂಪರ್ಕ ಅಭಿಯಾನದ ನಿಮಿತ್ತ ಔರಾದ (ಬಿ) ಶಾಸಕ ಪ್ರಭು ಬಿ.ಚವ್ಹಾಣ ಅವರು ಭಾನುವಾರ ಕಮಲನಗರ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಎಸ್‌ಐಆರ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು.

ಮನೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಕುಟುಂಬದ ಸದಸ್ಯರೊಂದಿಗೆ ಸಂವಾದ ನಡೆಸಿದ ಅವರು, ನಿಮ್ಮ ಮನೆಯಲ್ಲಿ ಎಷ್ಟು ಜನರಿದ್ದಾರೆ? ಎಷ್ಟು ಎನ್ಯುಮರೇಷನ್ ಅರ್ಜಿಗಳನ್ನು ಭರ್ತಿ ಮಾಡಿದ್ದೀರಿ? ಆನ್‌ಲೈನ್‌ನಲ್ಲಿ ಎಂಟ್ರಿ ಆಗಿದೆಯೇ? ಫಾರ್ಮ್ ಭರ್ತಿ ಅಥವಾ ಸಲ್ಲಿಕೆಗೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಇದೆಯೇ? ಎಂದು ವಿಚಾರಿಸಿ ಮಾಹಿತಿ ಪಡೆದರು. ಜನರ ಸಮಸ್ಯೆಗಳನ್ನು ಆಲಿಸಿ, ಸ್ಥಳದಲ್ಲೇ ಅಗತ್ಯ ಮಾರ್ಗದರ್ಶನ ನೀಡಿದರು.

ಈ ಸಂದರ್ಭದಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯ ಮಹತ್ವವನ್ನು ವಿವರಿಸಿದ ಅವರು, ಅರ್ಹ ಪ್ರತಿಯೊಬ್ಬ ಮತದಾರರು ಎನ್ಯುಮರೇಷನ್ ಫಾರ್ಮ್ ಅನ್ನು ತಪ್ಪದೇ ಭರ್ತಿ ಮಾಡಿ ನಿಗದಿತ ಅವಧಿಯೊಳಗೆ ಸಲ್ಲಿಸುವಂತೆ ಮನವಿ ಮಾಡಿದರು.

ಸಂಚಾರದ ವೇಳೆ ಅನೇಕ ಮನೆಗಳಲ್ಲಿ ಎಸ್‌ಐಆರ್ ಎನ್ಯುಮರೇಷನ್ ಫಾರ್ಮಗಳನ್ನು ಪಡೆದು ಅವುಗಳನ್ನು ಭರ್ತಿ ಮಾಡದೇ ಹಾಗೆಯೇ ಇಟ್ಟುಕೊಂಡಿರುವುದು ಗಮನಕ್ಕೆ ಬಂದಿದೆ. ಇಂತಹ ಮತದಾರರು ವಿಳಂಬ ಮಾಡದೇ ಫಾರ್ಮ್ಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿ, ನಿಗದಿತ ಅವಧಿಯೊಳಗೆ ತಮ್ಮ ವ್ಯಾಪ್ತಿಯ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಓ) ಸಲ್ಲಿಸಬೇಕು ಎಂದು ತಿಳಿಸಿದರು.

ಫಾರ್ಮ್ ಭರ್ತಿ ಮಾಡುವಲ್ಲಿ ಯಾವುದೇ ಗೊಂದಲ ಅಥವಾ ಸಮಸ್ಯೆ ಎದುರಾದರೆ ಬಿಎಲ್ಓಗಳು, ಸಂಬಂಧಿತ ಅಧಿಕಾರಿಗಳು ಹಾಗೂ ಪಕ್ಷದ ಕಾರ್ಯಕರ್ತರ ಸಹಾಯ ಪಡೆಯುವಂತೆ ಸಲಹೆ ನೀಡಿದ ಅವರು, ಬಿಎಲ್ಎ ಹಾಗೂ ಬಿಎಲ್ಎ-2ಗಳು ಮನೆ ಮನೆಗೆ ಭೇಟಿ ನೀಡಿ ಪ್ರತಿಯೊಂದು ಅರ್ಜಿಯೂ ಸಲ್ಲಿಕೆಯಾಗಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.

ಔರಾದ (ಬಿ) ಹಾಗೂ ಕಮಲನಗರ ತಾಲೂಕಿನ ಪ್ರತಿಯೊಬ್ಬ ಅರ್ಹ ಮತದಾರರು ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಿ, ತಮ್ಮ ಎನ್ಯುಮರೇಷನ್ ಫಾರ್ಮ್‌ಗಳನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.

ಮಂಡಲ ಅಧ್ಯಕ್ಷ ರಾಮಶೆಟ್ಟಿ ಪನ್ನಾಳೆ, ಮುಖಂಡರಾದ ಶಿವಾಜಿರಾವ ಪಾಟೀಲ ಮುಂಗನಾಳ, ಬಸವರಾಜ ಪಾಟೀಲ್, ರಂಗಾರಾವ ಜಾಧವ, ಶಿವಕುಮಾರ ವಡ್ಡೆ, ಶಿವು ಝುಲ್ಪೆ, ಪ್ರವೀಣ ಕಾರಬಾರಿ, ಭರತ ಕದಂ, ವಿಜಯಲಕ್ಷ್ಮಿ ಕೌಟಗೆ, ಬಂಟಿ ರಾಂಪೂರೆ ಸೇರಿದಂತೆ ಮುಖಂಡರು, ಕಾರ್ಯಕರ್ತರು, ಸ್ಥಳೀಯ ನಿವಾಸಿಗಳು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಆ.3ರಂದು ಸಂಕಲ್ಪ-2 ಸ್ಪರ್ಧಾತ್ಮಕ ತರಬೇತಿಗೆ ಪ್ರವೇಶ ಪರೀಕ್ಷೆ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹೋರಾಟದಲ್ಲಿ ಕೈ ಪ್ರಮುಖ ಪಾತ್ರ - ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಹೇಳಿಕೆ