ಶಾಸಕ ದರ್ಶನ್ ಪುಟ್ಟಣ್ಣಯ್ಯರಿಂದ ರಸ್ತೆ, ಚರಂಡಿ ಕಾಮಗಾರಿಗೆ ಚಾಲನೆ

KannadaprabhaNewsNetwork |  
Published : Jan 21, 2025, 12:31 AM IST
20ಕೆಎಂಎನ್ ಡಿ29 | Kannada Prabha

ಸಾರಾಂಶ

ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು.

ಕನ್ನಡಪ್ರಭ ವಾರ್ತೆ ಪಾಂಡವಪುರ

ತಾಲೂಕಿನ ಮಂಡಿ ಬೆಟ್ಟಹಳ್ಳಿಯಲ್ಲಿ ಕೆಆರ್‌ಐಡಿಎಲ್ ಇಲಾಖೆ ಅನುದಾನದಡಿ 400 ಮೀಟರ್ ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಭೂಮಿ ಪೂಜೆ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ರಾಜ್ಯ ಸರ್ಕಾರ ಎಂ.ಬೆಟ್ಟಹಳ್ಳಿ ಹಾಗೂ ವಡ್ಡರಹಳ್ಳಿಯಲ್ಲಿ ಪರಿಶಿಷ್ಟ ಜಾತಿ ಕಾಲನಿಯಲ್ಲಿ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ಕಾಮಗಾರಿ ನಿರ್ವಹಿಸಲು 50 ಲಕ್ಷ ರು. ಮತ್ತು 10.50 ಲಕ್ಷ ರು. ಬಿಡುಗಡೆ ಮಾಡಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಗುತ್ತಿಗೆದಾರರು ಆದಷ್ಟು ಗುಣಮಟ್ಟ ಕಾಯ್ದುಕೊಂಡು ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು ಎಂದರು.

ಈ ವೇಳೆ ಕೆ. ಬೆಟ್ಟಹಳ್ಳಿ ಗ್ರಾಪಂ ಉಪಾಧ್ಯಕ್ಷೆ ಮಹದೇವಮ್ಮ, ಮಾಜಿ ಅಧ್ಯಕ್ಷ ಮಾಕೇಗೌಡ, ಮಾಜಿ ಉಪಾಧ್ಯಕ್ಷೆ ಮಂಜುಳಾ ಜಗದೀಶ್, ಸದಸ್ಯರಾದ ಆನಂದ್, ಅಶೋಕ್, ಜಯಣ್ಣಚಾರ್, ಕೆಂಪರಾಜು, ರೈತಸಂಘದ ಮುಖಂಡರಾದ ಕೆ.ಬೆಟ್ಟಹಳ್ಳಿ ಕೃಷ್ಣೇಗೌಡ, ಮರಂಕಯ್ಯ, ಶ್ರೀಕಂಠ, ಡಾಮಡಹಳ್ಳಿ ಜಯರಾಂ, ಚಾಗಶೆಟ್ಟಹಳ್ಳಿ ವಿಜಯಕುಮಾರ್, ಶಿವಣ್ಣ, ಕ್ಯಾತನಹಳ್ಳಿ ಪಂಚಾಕ್ಷರಿ, ಗ್ರಾಮಸ್ಥರು ಸೇರಿದಂತೆ ಇತರರಿದ್ದರು.

ಇಂದು ಅಂಬಿಗರ ಚೌಡಯ್ಯ ಜಯಂತಿ

ಮಂಡ್ಯ: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ನಗರಸಭೆ ಆಶ್ರಯದಲ್ಲಿ ಜ.21 ರಂದು 2024-25 ನೇ ಸಾಲಿನ ಅಂಬಿಗರ ಚೌಡಯ್ಯ ಜಯಂತಿಯನ್ನು ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಹಾಗೂ ಸಂಸದ ಹೆಚ್.ಡಿ.ಕುಮಾರಸ್ವಾಮಿ ಘನ ಉಪಸ್ಥಿತಿ ವಹಿಸಲಿದ್ದಾರೆ. ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು , ನಗರಸಭೆ ಅಧ್ಯಕ್ಷ ಎಂ.ವಿ. ಪ್ರಕಾಶ್, ಮೈಷುಗರ್ ಅಧ್ಯಕ್ಷ ಸಿ.ಡಿ.ಗಂಗಾಧರ, ಮುಡಾ ಅಧ್ಯಕ್ಷ ನಯೀಂ, ನಗರಸಭೆ ಸರ್ವ ಸದಸ್ಯರು ಹಾಗೂ ಎಲ್ಲಾ ಸಂಘ ಸಂಸ್ಥೆ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಸಾಹಿತಿ ಡಾ.ಪ್ರದೀಪ್‌ಕುಮಾರ್ ಉಪನ್ಯಾಸ ನೀಡಲಿದ್ದಾರೆ.

PREV

Recommended Stories

ಏಕಾಏಕಿ ಟೊಮೆಟೋ ಕೇಜಿಗೆ ₹10ಕ್ಕೆ ಕುಸಿತ: ರೈತರು ಕಂಗಾಲು
ವಿಠಲಗೌಡ ತಲೆಬುರುಡೆ ತಂದ ಬಂಗ್ಲೆಗುಡ್ಡೆಯಲ್ಲಿ ಇಂದು ಮಹಜರು?