ದೊಡ್ಡಬಳ್ಳಾಪುರ: ಗ್ರಾಮಗಳಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಬೇಕಾದರೆ ಪರಸ್ಪರ ಅರಿವು, ಸೌಹಾರ್ದತೆ ಮತ್ತು ಸಮನ್ವಯತೆ ಅಗತ್ಯ ಎಂದು ಶಾಸಕ ಧೀರಜ್ ಮುನಿರಾಜ್ ಹೇಳಿದರು.
ದೇವನಹಳ್ಳಿ ಬಿಜೆಪಿ ಮಂಡಲ ಅಧ್ಯಕ್ಷ ಅಂಬರೀಶ್ ಗೌಡ ಮಾತನಾಡಿ, ಯುವಕರು ದುಶ್ಚಟಗಳಿಂದ ದೂರವಿರಲು ಕ್ರೀಡಾಕೂಟಗಳು ಅಗತ್ಯ. ಇಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಭಾಗವಹಿಸುವ ಮನೋಭಾವವೇ ಮಹತ್ವದ್ದು. ಕ್ರೀಡೆಯಲ್ಲಿ ಶಿಸ್ತು, ಪರಿಶ್ರಮ ಮತ್ತು ತಪಸ್ಸು ಅಡಗಿದೆ. ಯುವಜನತೆ ಇವುಗಳನ್ನು ರೂಢಿಸಿಕೊಂಡರೆ ಯಶಸ್ಸು ಸಾಧ್ಯ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಬಿಜೆಪಿ ಹಿರಿಯ ಮುಖಂಡ ಕೆ.ಎಂ.ಹನುಮಂತರಾಯಪ್ಪ, ಕೆಪಿಸಿಸಿ ಸದಸ್ಯ ಮುನಿರಾಜು, ಘಾಟಿ ಪ್ರಾಧಿಕಾರ ಸದಸ್ಯ ರಂಗಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವಿಸಿದ್ದಪ್ಪ, ವಕೀಲ ಪ್ರತಾಪ್, ಓಬದೇನಹಳ್ಳಿ ಮುನಿಯಪ್ಪ, ನಿವೃತ್ತ ಯೋಧ ಅನಂತರಾಜ ಗೋಪಾಲ್, ಮುಖಂಡ ಬಿ.ಕೆ. ನಾರಾಯಣಸ್ವಾಮಿ, ಬಿಜೆಪಿ ಹೋಬಳಿ ಅಧ್ಯಕ್ಷ ಕೃಷ್ಣಪ್ಪ, ರೈತ ಮುಖಂಡ ವಾಸು, ಮುಖಂಡರಾದ ಕನಕದಾಸ, ಧನುಂಜಯ, ಮುನಿಕೃಷ್ಣಪ್ಪ, ಉದಯ ಆರಾಧ್ಯ, ಮಧು, ನಿಖಿಲ್, ವಿನಯ್ ಉಪಸ್ಥಿತರಿದ್ದರು.4ಕೆಡಿಬಿಪಿ2-
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ವಾಲಿಬಾಲ್ ಪಂದ್ಯಾವಳಿಗೆ ಶಾಸಕ ಧೀರಜ್ ಮುನಿರಾಜ್ ಚಾಲನೆ ನೀಡಿದರು.