ಫೆ. 21ರಂದು ಲೋಕಾಯುಕ್ತ ದಾಳಿ ವೇಳೆ ಬಂಧನಕ್ಕೆ ಒಳಗಾಗಿದ್ದ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.
ಲಕ್ಷ್ಮೇಶ್ವರ: ಲಂಚ ಪ್ರಕರಣದ ಆರೋಪದಡಿ ಲೋಕಾಯುಕ್ತ ಅಧಿಕಾರಿಗಳಿಂದ ಬಂಧನಕ್ಕೊಳಗಾಗಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಇತರ ಇಬ್ಬರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಬುಧವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿ ಬಿಡುಗಡೆಗೊಳಿಸಿದೆ.
ಫೆ. 21ರಂದು ಲೋಕಾಯುಕ್ತ ದಾಳಿ ವೇಳೆ ಬಂಧನಕ್ಕೆ ಒಳಗಾಗಿದ್ದ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರಿಗೆ ಷರತ್ತುಬದ್ಧ ಜಾಮೀನು ದೊರೆತಿದೆ.
ಪ್ರಕರಣದ ಹಿನ್ನೆಲೆ: ಕಳೆದ ಫೆ. 21ರಂದು ಲಕ್ಷ್ಮೇಶ್ವರದ ಶಾಸಕರ ಒಡೆತನದ ಆಸ್ಪತ್ರೆಯಲ್ಲಿ ಶಾಸಕ ಡಾ. ಚಂದ್ರು ಲಮಾಣಿ ಹಾಗೂ ಅವರ ಆಪ್ತ ಸಹಾಯಕ ಮಂಜುನಾಥ ವಾಲ್ಮೀಕಿ, ಗುರು ಲಮಾಣಿ ಅವರು ಕಾಮಗಾರಿಯೊಂದಕ್ಕೆ ಸಂಬಂಧಿಸಿದಂತೆ ₹5 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಬಂಧಿಸಿದ್ದರು. ಬಳಿಕ ಅವರನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇಂದು ಸಿಲಿಂಡರ್ ದರ ಏರಿಕೆ ವಿರೋಧಿಸಿ ಪ್ರತಿಭಟನೆ
ಗದಗ: ಸಿಲಿಂಡರ್ ದರ ಏರಿಕೆ ವಿರೋಧಿಸಿ ಕೇಂದ್ರ ಸರ್ಕಾರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾ. 12ರಂದು ಸಂಜೆ 4ಕ್ಕೆ ನಗರದ ಮಹಾತ್ಮ ಗಾಂಧಿ ವೃತ್ತದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ, ಶಾಸಕ ಜಿ.ಎಸ್. ಪಾಟೀಲ ಪ್ರತಿಭಟನೆ ನೇತೃತ್ವ ವಹಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ, ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ, ಮಾಜಿ ಶಾಸಕರಾದ ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಪಕ್ಷದ ಮುಖಂಡರಾದ ಆನಂದಸ್ವಾಮಿ ಗಡ್ಡದೇವರಮಠ, ಸುಜಾತಾ ದೊಡ್ಡಮನಿ ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.