ಮಡಿಕೇರಿಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಡಾ.ಮಂತರ್ ಗೌಡ ಚಾಲನೆ

KannadaprabhaNewsNetwork |  
Published : Mar 04, 2026, 02:45 AM IST
 | Kannada Prabha

ಸಾರಾಂಶ

ಮಡಿಕೇರಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಮಡಿಕೇರಿ ನಗರದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಭೂಮಿ ಪೂಜೆ ನೆರವೇರಿಸಿದರು.

ನಗರದ ಹಳೆ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಆಟೋ ರಿಕ್ಷಾ ನಿಲ್ದಾಣ ಹಾಗೂ ಕಾವೇರಿ ಕಾರು ಚಾಲಕ ಮಾಲೀಕರ ಸಂಘದ ಕಾರು ನಿಲ್ದಾಣಗಳಿಗೆ 11 ಲಕ್ಷ ರು. ವೆಚ್ಚದ ಸುಸಜ್ಜಿತ ಮೇಲ್ಚಾವಣಿ ಹಾಗೂ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ 16 ಲಕ್ಷ ರು. ವೆಚ್ಚದ ಸುಸಜ್ಜಿತ ಶೌಚಾಲಯದೊಂದಿಗೆ ಹೈಟೆಕ್ ಬಸ್ ನಿಲ್ದಾಣ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.

ಕ್ಷೇತ್ರದ ಜನರ ಕೋರಿಕೆಯನ್ನು ಈಡೇರಿಸುವ ಜೊತೆಗೆ ಕ್ಷೇತ್ರದ ಜನರ ಒಳಿತಿಗಾಗಿ ಅಭಿವೃದ್ಧಿ ಕಾರ್ಯ ಮಾಡುವುದು ಜನಪ್ರತಿನಿಧಿಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಅತ್ಯಂತ ಹೆಚ್ಚು ಮಳೆ ಬೀಳುವ ಪ್ರದೇಶವಾದ ಮಡಿಕೇರಿ ನಗರದ ಜನರ ಬವಣೆಯನ್ನು ಗಮನಿಸಿ ಈ ಎರಡು ಕಾಮಗಾರಿಗಳಿಗೆ ತಮ್ಮ ಶಾಸಕರ ಪ್ರದೇಶಾಭಿವೃದ್ಧಿ ನಿಧಿಯಿಂದ ಅನುದಾನ ಒದಗಿಸಲಾಗಿದೆ ಎಂದು ಡಾ. ಮಂತರ್ ಗೌಡ ಅವರು ಮಾಹಿತಿ ನೀಡಿದರು.

ಕೊರವಂಡ ಕುಟುಂಬಸ್ಥರು ಮಡಿಕೇರಿ ನಗರದ ವಿವಿಧ ಭಾಗದಲ್ಲಿ ಅನೇಕ ಸ್ಥಳಗಳನ್ನು ದಾನವಾಗಿ ನೀಡಿದ್ದು ಆ ಕುಟುಂಬದ ಸದಸ್ಯರ ಅನುಮತಿ ಪಡೆದು ಅವರ ಹೆಸರನ್ನು ಬಸ್ ನಿಲ್ದಾಣಕ್ಕೆ ನಾಮಕರಣ ಮಾಡಲಾಗುವುದು ಎಂದು ಶಾಸಕರು ತಿಳಿಸಿದರು.

ಕೊಡಗು ಜಿಲ್ಲಾ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಡಿ.ಹೆಚ್.ಮೇದಪ್ಪ ಅವರು ಮಾತನಾಡಿ, ನಮ್ಮ ಸಮಸ್ಯೆಯನ್ನು ಗಮನಿಸಿ ಪರಿಹಾರ ಒದಗಿಸುವ ಕೆಲಸವನ್ನು ಡಾ.ಮಂತರ್ ಗೌಡ ಅವರು ಮಾಡಿದ್ದು, ಇಂತಹ ಶಾಸಕರನ್ನು ಪಡೆದಿರುವ ಕ್ಷೇತ್ರದ ಜನರ ಪುಣ್ಯವಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾವೇರಿ ವಾಹನ ಚಾಲಕರು ಮತ್ತು ಮಾಲಿಕರ ಸಂಘದ ಸ್ಥಾಪಕ ಅಧ್ಯಕ್ಷರಾದ ಬದ್ದಂಜೆಟ್ಟಿರ ಜೈ ಜಗದೀಶ್ ಮಾತನಾಡಿ, ತಾವು ಕಳೆದ ಒಂದೂವರೆ ದಶಕದಿಂದ ಮೇಲ್ಚಾವಣಿ ಹಾಕಿಸಲು ಪ್ರಯತ್ನಪಟ್ಟಿದ್ದು ಈಗ ಶಾಸಕರ ಕಾಳಜಿಯಿಂದ ಕನಸು ನನಸಾಗುತ್ತಿರುವುದಕ್ಕೆ ಹರ್ಷ ವ್ಯಕ್ತಪಡಿಸಿದರು.

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ಅವರು ಮಾತನಾಡಿ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ಸಕಾಲದಲ್ಲಿ ಆಗಲಿ ಮತ್ತು ಅನುದಾನ ಒದಗಿಸಿದ ಶಾಸಕರಿಗೆ ಮತ್ತಷ್ಟು ಅಭಿವೃದ್ಧಿ ಕೆಲಸ ಮಾಡಲು ಚೈತನ್ಯ ಸಿಗಲಿ ಎಂದು ಪ್ರಾರ್ಥಿಸಿದರು.

ಮಡಿಕೇರಿ ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಸಮದ್ ಹಾಗೂ ಕಾವೇರಿ ಕಾರು ಚಾಲಕರು ಮತ್ತು ಮಾಲೀಕರ ಸಂಘದ ಅಧ್ಯಕ್ಷರಾದ ಸತೀಶ್ ಬಿ.ಜೆ. ಅವರು ನಾಗರಿಕರ ಪರವಾಗಿ ಶಾಸಕರನ್ನು ಸನ್ಮಾನಿಸಿದರು.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ.ವೈ.ರಾಜೇಶ್, ಮೆಡಿಕಲ್ ಕಾಲೇಜ್ ಪ್ರಾಂಶುಪಾಲರಾದ ಡಾ. ವಿಶಾಲ್ ಕುಮಾರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಆಟೋ ಚಾಲಕರ ಸಂಘದ ಪದಾಧಿಕಾರಿಗಳಾದ ಬಾರನ ದಿನೇಶ್, ಮುದ್ದಿಯನ ಪ್ರವೀಣ್, ಸುನೀಲ್, ಹನ್ಸಾರ್, ಸುಕುಮಾರ್, ನಾಗರಾಜ್, ಗಣೇಶ್, ಕಾರು ಮಾಲಿಕರ ಸಂಘದ ಪದಾಧಿಕಾರಿಗಳಾದ ಜಪ್ಪು, ಉನೈದ್, ಸಂತೋಷ್‌, ರಮೇಶ್ ವಿ.ಬಿ., ಪ್ರಮುಖರಾದ ಪ್ರಕಾಶ್ ಆಚಾರ್ಯ, ಮಂಡಿರ ಸದಾ ಮುದ್ದಪ್ಪ, ಹೆಚ್.ಎ.ಹಂಸ, ಜಿ.ಸಿ.ಜಗದೀಶ್, ವಿ.ಜಿ.ಮೋಹನ್, ಶರಣ್, ಕವನ್ ಕೊತ್ತೋಳಿ, ಶಶಿ, ಮೀನಾಜ್, ಫ್ಯಾನ್ಸಿ ಪಾರ್ವತಿ, ಮುದ್ದು ರಾಜ್, ಜುಲೇಕಾಬಿ, ಸೇರಿದಂತೆ ಸಂಘದ ಸದಸ್ಯರು, ಮೆಡಿಕಲ್ ಕಾಲೇಜ್ ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಘದ ಸದಸ್ಯರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ದುಬೈ ಸಹಜ, ಆತಂಕ ಪಡುವ ಅಗತ್ಯ ಇಲ್ಲ!
ನಿವೇಶನ ರಹಿತ 74 ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ