ಭಾರತದ ಅಭಿವೃದ್ಧಿಗೆ ಮೋದಿ ಪಾತ್ರ ದೊಡ್ಡದು

KannadaprabhaNewsNetwork |  
Published : Dec 02, 2023, 12:45 AM IST
1ಸಿಕೆಡಿ3  | Kannada Prabha

ಸಾರಾಂಶ

ಭಾರತದ ಅಭಿವೃದ್ಧಿಗೆ ಮೋದಿ ಪಾತ್ರ ದೊಡ್ಡದು

ಕನ್ನಡಪ್ರಭ ವಾರ್ತೆ ಚಿಕ್ಕೋಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಯಶಸ್ವಿಯಾಗಿ 9 ವರ್ಷ ಪೂರ್ಣಗೊಳಿಸಿದೆ. ವಿಶ್ವಮಟ್ಟದಲ್ಲಿ ಭಾರತವನ್ನು ಅಭಿವೃದ್ಧಿಯತ್ತ ಸಾಗಿಸುವಲ್ಲಿ ಮೋದಿ ಪಾತ್ರ ದೊಡ್ಡದಿದೆ ಎಂದು ರಾಯಬಾಗ ಶಾಸಕ ದುರ್ಯೋಧನ ಐಹೊಳೆ ಹೇಳಿದರು.

ಅವರು ಶುಕ್ರವಾರ ಪಟ್ಟಣದ ಕೇಶವ ಕಲಾಭವನದಲ್ಲಿ ನಡೆದ ಬಿಜೆಪಿ ಬೆಂಬಲಿತ ಪುರಸಭೆ ಮತ್ತು ಪ.ಪಂ ಸದಸ್ಯರಿಗೆ ನಡೆದ ಪ್ರಶಿಕ್ಷಣ ವರ್ಗ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿ ಸಿದ್ಧವಾಗಬೇಕಿದೆ. ಕಾರ್ಯಕರ್ತರು ಕೇಂದ್ರ ಸರ್ಕಾರದ ಸಾಧನೆಗಳನ್ನು ಮನೆ ಮನೆಗೆ ಮುಟ್ಟಿಸುವ ಕೆಲಸ ಮಾಡಬೇಕೆಂದು ಸೂಚಿಸಿದರು. ದೇಶ ಆರ್ಥಿಕ ಸಬಲತೆ ಸಾಧಿಸುತ್ತಿದೆ. ಪ್ರಧಾನಮಂತ್ರಿ ಕಿಸಾನ ಸಮ್ಮಾನ ನಿಧಿ ಯೋಜನೆಯಡಿ 16.5 ಕೋಟಿ ರೈತರ ಬ್ಯಾಂಕ್‌ ಖಾತೆಗಳಿಗೆ ಸಹಾಯಧನ ರವಾನೆಯಾಗಿದೆ. ಪ್ರಧಾನಮಂತ್ರಿ ಬೆಳೆ ವಿಮೆ, ಮಣ್ಣಿನ ಆರೋಗ್ಯ ಕಾರ್ಡ ವಿತರಣೆ ಹೀಗೆ ಹತ್ತು ಹಲವು ಯೋಜನೆ ಕೇಂದ್ರ ಸರ್ಕಾರ ಜಾರಿ ಮಾಡಿ ರೈತರಿಗೆ ಅನುಕೂಲ ಕಲ್ಪಿಸಲಾಗಿದೆ ಎಂದರು. ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ.ರಾಜೇಶ ನೇರ್ಲಿ ಮಾತನಾಡಿ, ಜನಸಂಘದಿಂದ ಉದಯವಾದ ಬಿಜೆಪಿಯು ನವ ಭಾರತ ನಿರ್ಮಾಣಕ್ಕೆ ಸಾಕಷ್ಟು ಹೋರಾಡಿದೆ. ಅಂದು ಓರ್ವ ಸಂಸದರಿಂದ ಕಟ್ಟಿದ ಬಿಜೆಪಿ ಇಂದು 300 ಅಧಿಕ ಸಂಸದರನ್ನು ಆಯ್ಕೆ ಮಾಡುವಲ್ಲಿ ಸಫಲವಾಗಿದೆ ಎಂದರು. ಮಾಜಿ ಶಾಸಕ ಪಿ.ರಾಜೀವ, ವಿಭಾಗೀಯ ಸಹ ಪ್ರಭಾರಿ ಬಸವರಾಜ ಯಕ್ಕಂಚ್ಚಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಸತೀಶ ಅಪ್ಪಾಜಿಗೋಳ, ಸಂಜಯ ಪಾಟೀಲ, ಅಪ್ಪಾಸಾಹೇಬ ಚೌಗಲೆ, ಅಭಯ ಮಾನ್ವಿ, ದೀಪಕ ಪಾಟೀಲ, ಶಕುಂತಲಾ ಡೊಣವಾಡೆ ಮುಂತಾದವರು ಇದ್ದರು. ಮಹಿಳಾ ಮೋರ್ಚಾ ಜಿಲ್ಲಾ ಅಧ್ಯಕ್ಷೆ ಶಾಂಭವಿ ಅಶ್ವಥಪುರ ನಿರೂಪಿಸಿದರು. ಶಿವಾನಂದ ನವಲಿಹಾಳ ವಂದಿಸಿದರು.

PREV

Recommended Stories

ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಖರ್ಗೆ ಕುಟುಂಬದ ವಿರುದ್ಧ ಕೋರ್ಟ್‌ಗೆ ಖಾಸಗಿ ದೂರು