ಲೋಕೋಪಯೋಗಿ ಇಲಾಖೆ ವತಿಯಿಂದ ೧ ಕೋಟಿ ರು. ವೆಚ್ಚದಲ್ಲಿ ಬಾಣಾವರ ಹೋಬಳಿ ವ್ಯಾಪ್ತಿಯ ಚಿಕ್ಕೂರು ಗ್ರಾಮದಿಂದ ಹಿರಿಯೂರು ಗ್ರಾಮದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಶಾಸಕರೂ ಆದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಇಂದು ಭೂಮಿಪೂಜೆ ನೆರವೇರಿಸಿದರು. ಕೆಲ ವರ್ಷಗಳವರೆಗಾದರೂ ಉಳಿಯುವಂತೆ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಎಂದು ಸ್ಥಳದಲ್ಲಿದ್ದ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ಈ ಬಾರಿ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿರುವುದರಿಂದ, ಅತಿಯಾದರೆ ಗ್ರಾಮೀಣ ಭಾಗಗಳ ರಸ್ತೆಗಳು ಹಾಳಾಗುವ ಸಾಧ್ಯತೆ ಇದೆ. ತುರ್ತು ಸ್ಪಂದನೆಗಾಗಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ಲೋಕೋಪಯೋಗಿ ಇಲಾಖೆ ವತಿಯಿಂದ ೧ ಕೋಟಿ ರು. ವೆಚ್ಚದಲ್ಲಿ ಬಾಣಾವರ ಹೋಬಳಿ ವ್ಯಾಪ್ತಿಯ ಚಿಕ್ಕೂರು ಗ್ರಾಮದಿಂದ ಹಿರಿಯೂರು ಗ್ರಾಮದವರೆಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗೆ ಸ್ಥಳೀಯ ಶಾಸಕರೂ ಆದ ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಕೆ.ಎಂ. ಶಿವಲಿಂಗೇಗೌಡ ಇಂದು ಭೂಮಿಪೂಜೆ ನೆರವೇರಿಸಿದರು.ತಾಲೂಕಿನ ಚಿಕ್ಕೂರು ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಈ ರಸ್ತೆಯನ್ನು ಅನೇಕ ಬಾರಿ ಅಭಿವೃದ್ಧಿ ಪಡಿಸಿದ್ದರೂ ಕೂಡ ಕೆರೆ ಪಕ್ಕದಲ್ಲಿರುವುದರಿಂದ ಪದೇ ಪದೆ ಹಾಳಾಗುತ್ತಿದೆ. ಆದ್ದರಿಂದ ಈ ಬಾರಿ ಸಿ.ಸಿ.ರಸ್ತೆ ನಿರ್ಮಾಣ ಮಾಡಲು ತೀರ್ಮಾನಿಸಿ ರಾಜ್ಯ ಸರ್ಕಾರದಿಂದ ಅನುದಾನ ತರಲಾಗಿದೆ. ಇದರಿಂದ ಸಾರ್ವಜನಿಕರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದರು. ಇದೇ ವೇಳೆ ಮಾಡಿದ ಕಾಮಗಾರಿ ಕೆಲ ವರ್ಷಗಳವರೆಗಾದರೂ ಉಳಿಯುವಂತೆ ಗುಣಮಟ್ಟದ ಕಾಮಗಾರಿ ನಿರ್ವಹಿಸುವಂತೆ ಗುತ್ತಿಗೆದಾರರಿಗೆ ತಾಕೀತು ಮಾಡಿ ಎಂದು ಸ್ಥಳದಲ್ಲಿದ್ದ ಎಂಜಿನಿಯರ್‌ಗಳಿಗೆ ಸೂಚನೆ ನೀಡಿದರು. ಈ ಬಾರಿ ತಾಲೂಕಿನಲ್ಲೂ ಉತ್ತಮ ಮಳೆಯಾಗುತ್ತಿರುವುದರಿಂದ, ಅತಿಯಾದರೆ ಗ್ರಾಮೀಣ ಭಾಗಗಳ ರಸ್ತೆಗಳು ಹಾಳಾಗುವ ಸಾಧ್ಯತೆ ಇದೆ. ತುರ್ತು ಸ್ಪಂದನೆಗಾಗಿ ಅಧಿಕಾರಿಗಳು ಮುತುವರ್ಜಿ ವಹಿಸಬೇಕು ಎಂದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಮೊದಲಾದವರು ತಾಲೂಕಿಗೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಅವರ ಮೂಲಕ ಇನ್ನೂ ಹೆಚ್ಚಿನ ಅನುದಾನ ತಂದು ಇಡೀ ತಾಲೂಕನ್ನು ಶೈಕ್ಷಣಿಕವಾಗಿ, ಆರ್ಥಿಕವಾಗಿ ಎಲ್ಲ ರೀತಿಯಲ್ಲೂ ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ತಾ.ಪಂ. ಮಾಜಿ ಅಧ್ಯಕ್ಷೆ ಮಂಜುಳಾಬಾಯಿ, ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಗೀಜಿಹಳ್ಳಿ ಧರ್ಮಶೇಖರ, ಬೆಂಡೆಕೆರೆ ಗ್ರಾಪಂ ಅಧ್ಯಕ್ಷೆ ಗೀತಾಕುಮಾರಿ, ಗ್ರಾ.ಪಂ ಮಾಜಿ ಅಧ್ಯಕ್ಷ ಕುಬೇರ, ಸದಸ್ಯೆ ಭಾವನ, ಮುಖಂಡರಾದ ಪ್ರಭುದೇವ, ಶೇಖರ್, ಮಂಜಣ್ಣ, ಪರಮೇಶ್, ಗಂಗಾಧರ, ಗುರುಮೂರ್ತಿ, ರೇಣುಕಣ್ಣ, ಚಂದ್ರೇಗೌಡ, ಮಧು, ಎ.ಇ.ಇ ಬಾಲಾಜಿ, ಎಂಜಿನಿಯರ್ ಅಶ್ವಿನಿ ಹಾಗೂ ಗ್ರಾಮಸ್ಥರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.