ಸೌಲಭ್ಯ ಬಳಸಿ ಸ್ವಾವಲಂಬಿಗಳಾಗಲು ಶಾಸಕ ಜಿ.ಎಚ್. ಶ್ರೀನಿವಾಸ್ ಕರೆ

KannadaprabhaNewsNetwork |  
Published : Apr 22, 2025, 01:46 AM IST
ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ | Kannada Prabha

ಸಾರಾಂಶ

ತರೀಕೆರೆ; ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.

ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ

ತರೀಕೆರೆ; ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಸ್ವಾವಲಂಬಿಗಳಾಗಬೇಕೆಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.ಸೋಮವಾರ ತಾಲೂಕು ಪಂಚಾಯಿತಿ ಆವರಣದಲ್ಲಿ ನಡೆದ ವಿಶೇಷ ಚೇತನರಿಗೆ ತ್ರಿಚಕ್ರ ವಾಹನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿರು. ತಾಲೂಕಿನಾದ್ಯಂತ ವಿಶೇಷ ಚೇತನರನ್ನು ಗುರುತಿಸಿ, ಶಾಸಕರ ಗಮನಕ್ಕೆ ತಂದು, ಅವರ ಅರ್ಜಿಗಳನ್ನು ಸ್ವೀಕರಿಸಿ ಅವರಿಗೂ ಸರ್ಕಾರದ ಸೌಲಭ್ಯ ಪಡೆಯುವಂತೆ ಕ್ರಮ ವಹಿಸಬೇಕೆಂದು ಪಿಡಿಒಗಳಿಗೆ ಸೂಚಿಸಿದ ಅವರು ತಾಲೂಕಿನಾದ್ಯಂತ ಎಲ್ಲಾ ಪಂಚಾಯಿತಿಗಳಲ್ಲಿ ಇರುವ ವಾಚನಾಲಯಗಳಿಗೆ ಪೀಠೋಪಕರಣ, ಕಂಪ್ಯೂಟರ್ ಮತ್ತು ಪುಸ್ತಕ ಒದಗಿಸುವ ವ್ಯವಸ್ಥೆ ಕೈಗೊಳ್ಳಲಾಗಿದ್ದು, ವಾಚನಾಲಯಗಳಲ್ಲಿ ಮಕ್ಕಳಿಗೂ ಓದಲು ಪುಸ್ತಕ ಒದಗಿಸಲಾಗುವುದು. ಹೆಚ್ಚುವರಿಯಾಗಿ ವಾಚನಾಲಯಗಳನ್ನು ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು.

ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ, ತಾಪಂ ಕಾರ್ಯ ನಿರ್ವಹಣಾಧಿ ಕಾರಿ ಡಾ.ಆರ್.ದೇವೇಂದ್ರಪ್ಪ ಮತ್ತಿತರರು ಭಾಗವಹಿಸಿದ್ದರು.

21ಕೆಟಿಆರ್.ಕೆ.8ಃ

ತರೀಕೆರೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ವಿಶೇಷ ಚೇತನರಿಗೆ ತ್ರಿಚಕ್ರ ವಾಹನಗಳನ್ನು ವಿತರಿಸಿದರು. ತಾಲೂಕು ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಅಧ್ಯಕ್ಷ ರಮೇಶ್ ಗೋವಿಂದೇಗೌಡ, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಧಿಕಾರಿ ಡಾ.ಆರ್.ದೇವೇಂದ್ರಪ್ಪ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''