ರಿಯಾಜಅಹ್ಮದ ಎಂ. ದೊಡ್ಡಮನಿ
ಈಗಾಗಲೇ ಗದಗ ಕ್ಷೇತ್ರದ ಶಾಸಕ ಎಚ್. ಕೆ. ಪಾಟೀಲರು ಸಚಿವರಾಗಿದ್ದಾರೆ. ಈಗ ಹೆಚ್ಚುವರಿಯಾಗಿ ಮತ್ತೊಂದು ಸಚಿವ ಸ್ಥಾನ ಜಿಲ್ಲೆಗೆ ನೀಡುತ್ತಾರೆಯೇ ಎನ್ನುವುದು ಚರ್ಚೆಯಾಗುತ್ತಿರುವ ವಿಷಯ.
ರೋಣ ಮತಕ್ಷೇತ್ರದ ಶಾಸಕ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡುವುದರ ಮೂಲಕ ಮತ್ತೊಂದು ಸಚಿವ ಸ್ಥಾನ ಈ ಬಾರಿ ಸಿಕ್ಕೇ ಸಿಗುತ್ತದೆ ಎನ್ನುವ ಮಾತು ಬಲವಾಗಿ ಕೇಳಿ ಬರುತ್ತಿದೆ.ಈ ಹಿಂದೆ ರೋಣ ನಗರದಲ್ಲಿ ಜರುಗಿದ ಅಭಿವೃದ್ಧಿ ಕಾಮಗಾರಿ ಚಾಲನೆ ಸಂದರ್ಭದಲ್ಲಿ ಜಿ.ಎಸ್. ಪಾಟೀಲರಿಗೆ ಸಚಿವ ಸ್ಥಾನ ನೀಡಬೇಕೆಂದು ಅಭಿಮಾನಿ ಬಳಗ ಒತ್ತಾಯಿಸಿದಾಗ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಪಾಟೀಲರಿಗೆ ಸಚಿವ ಸ್ಥಾನ ನೀಡುತ್ತೇವೆ ಎಂದು ಬಹಿರಂಗ ವೇದಿಕೆಯಲ್ಲಿಯೆ ಭರವಸೆ ನೀಡಿದ್ದರು.
ರಾಜಕಾರಣ ಮೀರಿಸುತ್ತಿರುವ ಶಿಕ್ಷಕರ ಸಂಘದ ಚುನಾವಣೆ!
ಶಿಕ್ಷಕರಲ್ಲಿ ಒಡಕು ತರುವ ಇಂತಹ ಚುನಾವಣೆಗಳು ವಿದ್ಯಾರ್ಥಿಗಳ ಮೇಲೆ ಪರಿಣಾಮ ಬೀರಬಹುದು ಎಂದು ಸಾರ್ವಜನಿಕರು ಹೇಳುತ್ತಿದ್ದಾರೆ.ಶಿಕ್ಷಕರು ತಮ್ಮಲ್ಲಿ ಹೊಂದಾಣಿಕೆ ಮಾಡಿಕೊಂಡು ಅವಿರೋಧ ಆಯ್ಕೆ ಮಾಡಿದಲ್ಲಿ ಇತರರಿಗೆ ಮಾದರಿಯಾಗಬಲ್ಲರು. ಆದರೆ ಶಿಕ್ಷಕರು ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ನಾವೂ ಯಾವುದೇ ರಾಜಕೀಯ ಪಕ್ಷಕ್ಕೆ ಕಡಿಮೆ ಇಲ್ಲವೆಂದು ತೋರಿಸುತ್ತಿರುವುದು ಶಾಲಾ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತದೆ.ಸಮಾಜಕ್ಕೆ ಮಾದರಿಯಾಗಿ ಇರಬೇಕಾದ ಶಿಕ್ಷಕರು ಚುನಾವಣೆ ಸಜ್ಜಾಗುತ್ತಿರುವುದು ಬೇಸರದ ಸಂಗತಿ. ಚುನಾವಣೆ ಪ್ರಣಾಳಿಕೆ ಬಿಡುಗಡೆ ಮಾಡುವ ಮೂಲಕ ನಾವೂ ಯಾವುದೇ ರಾಜಕೀಯ ಪಕ್ಷಕ್ಕೆ ಕಡಿಮೆ ಇಲ್ಲವೆಂದು ತೋರಿಸುತ್ತಿರುವುದು ಶಾಲಾ ವಾತಾವರಣದ ಮೇಲೆ ದುಷ್ಪರಿಣಾಮ ಬೀರುತ್ತದೆ.