ಸಿಸಿ ರಸ್ತೆ, ಚರಂಡಿ ಸೇರಿ ಅಭಿವೃದ್ಧಿ ಕಾಮಗಾರಿಗೆ ಚಾಲನೆ
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
1.9 ಕೋಟಿ ರು. ವೆಚ್ಚದಲ್ಲಿ 5 ಗ್ರಾಮಗಳಲ್ಲಿ ೭ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಸರಣಿ ಭೂಮಿ ಪೂಜೆ ನೆರವೇರಿಸಿದರು.ತಾಲೂಕಿನ ಹುಣಸಿನಪುರ ಗ್ರಾಮದ ಸಾಮಾನ್ಯ ವರ್ಗದ ಬೀದಿಯಲ್ಲಿ 30 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಬಳಿಕ ಮಾತನಾಡಿದರು.
ಶ್ಯಾನಡ್ರಹಳ್ಳಿ ಗ್ರಾಮದಲ್ಲಿ ಸಾಮಾನ್ಯ ವರ್ಗದ ಬೀದಿಯಲ್ಲಿ 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ, ತೆರಕಣಾಂಬಿ ಗ್ರಾಮದ ಪರಿಶಿಷ್ಟ ಪಂಗಡದ ಬೀದಿಯಲ್ಲಿ 50 ಲಕ್ಷ ರು. ವೆಚ್ಚದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಚಾಲನೆ ಸಿಗಲಿದೆ ಎಂದರು.
ಶಾಸಕರೊಂದಿಗೆ ಕಾಡ ಮಾಜಿ ಅಧ್ಯಕ್ಷ ಎಚ್.ಎಸ್. ನಂಜಪ್ಪ, ಎಪಿಎಂಸಿ ಅಧ್ಯಕ್ಷ ಆರ್.ಎಸ್. ನಾಗರಾಜು, ಜಿಪಂ ಮಾಜಿ ಉಪಾಧ್ಯಕ್ಷ ಪಿ. ಮಹದೇವಪ್ಪ, ಎಪಿಎಂಸಿ ಮಾಜಿ ಅಧ್ಯಕ್ಷ ಎಸ್. ಶಿವನಾಗಪ್ಪ, ಮೃತ್ಯುಂಜಯ, ತಾಪಂ ಮಾಜಿ ಅಧ್ಯಕ್ಷ ಎಸ್.ಎಸ್. ಮಧುಶಂಕರ್, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ಸದಾಶಿವಪ್ಪ, ಕೋಟೆಕೆರೆ ಫ್ಯಾಕ್ಸ್ ಅಧ್ಯಕ್ಷ ಕೆ.ಎಂ. ಮಹದೇವಸ್ವಾಮಿ, ಮುಖಂಡ ದೇಪಾಪುರ ಸಿದ್ದಪ್ಪ, ಸೋಮಹಳ್ಳಿ ಸದಾನಂದ, ಮೂಗೂರು ಪುಟ್ಟಣ್ಣ, ಕುಮಾರಸ್ವಾಮಿ, ವಿಷಕಂಠ ಮೂರ್ತಿ, ಅಶೋಕ ಮರಳಾಪುರ, ವಡ್ಡಗೆರೆ ನಾಗಪ್ಪ, ಕೆ.ಎಂ. ಬಸವಣ್ಣ, ರಮೇಶ್ ನಾಯಕ ಸೇರಿದಂತೆ ಆಯಾಯ ಗ್ರಾಮದ ಕಾಂಗ್ರೆಸ್ ಕಾರ್ಯಕರ್ತರಿದ್ದರು.