ಚಾಮರಾಜನಗರದಲ್ಲಿ ಶಾಸಕ ಗಣೇಶ್‌ ಭವಿಷ್ಯ ನಿಜವಾಯ್ತು!

KannadaprabhaNewsNetwork |  
Published : Jun 05, 2024, 12:30 AM ISTUpdated : Jun 05, 2024, 12:31 AM IST
4ಜಿಪಿಟಿ3ಮೇ 27 ರ ಕನ್ನಡಪ್ರಭ ಪತ್ರಿಕೆಯಲ್ಲಿ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ ಸುನೀಲ್‌ ಬೋಸ್‌ ಲಕ್ಷ ಮತಗಳಿಂದ ಗೆಲುವು ಸಾಧಿಸಲಿದ್ದಾರೆ ಎಂದು ಹೇಳಿದ್ದರು. | Kannada Prabha

ಸಾರಾಂಶ

ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ 1ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು.

ಗುಂಡ್ಲುಪೇಟೆ: ಚಾಮರಾಜನಗರ ಲೋಕಸಭೆ ಮೀಸಲು ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಲಕ್ಷ ಮತಗಳಿಂದ ಗೆಲ್ಲುತ್ತಾರೆ ಎಂದು ಹೇಳಿದ್ದ ಗುಂಡ್ಲುಪೇಟೆ ಶಾಸಕ ಎಚ್.ಎಂ.ಗಣೇಶ್‌ ಪ್ರಸಾದ್‌ರ ಭವಿಷ್ಯ ನಿಜವಾಗಿದೆ. ಕಳೆದ ಮೇ 26 ರಂದು ಹಾಲಹಳ್ಳಿಯಲ್ಲಿ ಮತದಾನದ ಬಳಿಕ ಕನ್ನಡಪ್ರಭದೊಂದಿಗೆ ಮಾತನಾಡಿದ್ದ ಶಾಸಕ ಗಣೇಶ್‌, ಚಾಮರಾಜನಗರ ಕ್ಷೇತ್ರದಲ್ಲಿ ಕಾಂಗ್ರೆಸ್‌ ಬಲಿಷ್ಠವಾಗಿದ್ದು, ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ 1ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಚಾ.ನಗರ ಲೋಕಸಭಾ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ, ಸಚಿವ ಡಾ.ಎಚ್.ಸಿ.ಮಹದೇವಪ್ಪ, 7 ಮಂದಿ ಶಾಸಕರು ಮತ್ತು ನಿಗಮ ಮಂಡಳಿ ಅಧ್ಯಕ್ಷರು ಇರುವಾಗ ಗೆಲುವಾಗಲಿದೆ ಎಂದು ಭವಿಷ್ಯ ನುಡಿದ್ದರು. ಮಂಗಳವಾರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಸುನೀಲ್‌ ಬೋಸ್‌ ಲಕ್ಷಕ್ಕೂ ಹೆಚ್ಚು ಅಂತರದಿಂದ ಗೆಲುವು ಸಾಧಿಸಿ ಗೆಲುವಿನ ನಗೆ ಬೀರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೆಣ್ಮಗು ಹುಟ್ಟಿದರೆ ಹೊನ್ನಕ್ಕೆ ಸಮಾನ
ಪ್ರಪಂಚಕ್ಕೆ ಕೊಟ್ಟಿರುವ ಶ್ರೇಷ್ಠ ಕೊಡುಗೆ ರಾಮಾಯಣ: ಗಂಗಾಧರ ಗೌಡ