ಶಂಕರನಾರಾಯಣ ಹೋಬಳಿ ರಚನೆಗೆ ಶಾಸಕ ಗಂಟಿಹೊಳೆ ಆಗ್ರಹ

KannadaprabhaNewsNetwork |  
Published : Aug 14, 2025, 12:00 AM IST
12ಹೋಬಳಿ | Kannada Prabha

ಸಾರಾಂಶ

ಶಂಕರನಾರಾಯಣ ಗ್ರಾಮ ಕೇಂದ್ರಿತವಾಗಿ ಶಂಕರನಾರಾಯಣ ಭಾಗದ ಗ್ರಾಮಗಳನ್ನು ಸೇರಿಸಿ ಕೊಂಡು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕವಾದ ಶಂಕರ ನಾರಾಯಣ ಹೋಬಳಿ ರಚನೆ ಮಾಡಬೇಕು ಎಂದು ಬೈಂದೂರು ಶಾಸಕ ಗುರುರಾಜ ಗಂಟಿಹೊಳಿ ಸದನದಲ್ಲಿ ಆಗ್ರಹಿಸಿದ್ದಾರೆ.

ಬೈಂದೂರು: ಬೈಂದೂರು ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಹೊಸದಾಗಿ ಶಂಕರನಾರಾಯಣ ಹೋಬಳಿ ಕೇಂದ್ರ ರಚನೆ ಮಾಡುವಂತೆ ಮುಂಗಾರು ಅಧಿವೇಶನದಲ್ಲಿ ಶಾಸಕ ಗುರುರಾಜ್‌ ಗಂಟಿಹೊಳೆ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗ್ರಾಮೀಣ ಭಾಗವಾದ ಶಂಕರನಾರಾಯಣ ಕೇಂದ್ರೀಕೃತವಾಗಿ ಸುತ್ತ ಮುತ್ತಲಿನ ಗ್ರಾಮಗಳ ಜನರು ಪ್ರಸ್ತುತ ಸುಮಾರು 40 ಕಿ. ಮೀ ದೂರದ ಹೋಬಳಿ ಕೇಂದ್ರಕ್ಕೆ ತೆರಳಬೇಕಾಗಿರುವುದರಿಂದ ಪ್ರಸ್ತುತ ಇರುವ ಬೈಂದೂರು ಹಾಗೂ ವಂಡ್ಸೆ ಹೋಬಳಿಗಳ ಜೊತೆಗೆ ಶಂಕರನಾರಾಯಣ ಗ್ರಾಮ ಕೇಂದ್ರಿತವಾಗಿ ಶಂಕರನಾರಾಯಣ ಭಾಗದ ಗ್ರಾಮಗಳನ್ನು ಸೇರಿಸಿ ಕೊಂಡು ಆಡಳಿತಾತ್ಮಕ ಹಿತದೃಷ್ಟಿಯಿಂದ ಪ್ರತ್ಯೇಕವಾದ ಶಂಕರ ನಾರಾಯಣ ಹೋಬಳಿ ರಚನೆ ಮಾಡಬೇಕು ಎಂದವರು ಆಗ್ರಹಿಸಲಾಗಿದೆ.ಶಾಸಕರ ಪ್ರಸ್ತಾವನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಹೊಸದಾಗಿ ಹೋಬಳಿಗಳನ್ನು ರಚಿಸುವ ವಿಷಯವು ಸರ್ಕಾರದ ಸಾಮಾನ್ಯ ನೀತಿಗೆ ಸಂಬಂಧಿಸಿದ್ದಾಗಿದೆ. ನೂತನ ಹೋಬಳಿಗಳು ರಚಿಸಬೇಕಾದರೆ ಭೌಗೋಳಿಕ ಮತ್ತು ಆಡಳಿತಾತ್ಮಕ ಅಗತ್ಯತೆಗಳ ಜೊತೆಗೆ ರಾಜ್ಯದ ಆರ್ಥಿಕ ಪರಿಸ್ಥಿತಿಯನ್ನು ಸಹ ಅವಲಂಬಿಸಿರುತ್ತದೆ. ಅಲ್ಲದೆ ಆರ್ಥಿಕ ಇಲಾಖೆಯೂ ಸಹ ಇಂತಹ ಪ್ರಸ್ತಾವನೆಗೆ ಸಹಮತಿ ನೀಡಬೇಕಾ ಗಿರುತ್ತದೆ. ತುರ್ತಾಗಿ ರಾಜ್ಯದಲ್ಲಿ ಹೊಸದಾಗಿ ಹೋಬಳಿಗಳನ್ನು ರಚಿಸಲು ಸರ್ಕಾರವು ಯಾವುದೇ ತಾತ್ವಿಕ ನಿರ್ಣಯ ಕೈಗೊಂಡಿರುವುದಿಲ್ಲ. ಮುಂದಿನ ದಿನಗಳಲ್ಲಿ ಈ ಬಗ್ಗೆ ಅಗತ್ಯ ಕ್ರಮ ವಹಿಸಲಾಗುವುದು ಎಂದರು.

ಶಂಕರನಾರಾಯಣ ಹೋಬಳಿ ರಚನೆಯಾದರೆ ಗ್ರಾಮೀಣ ಭಾಗದ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಾದರೂ ಸರಕಾರ ಇದನ್ನು ಆದ್ಯತೆ ಮೇರೆಗೆ ಮಾಡುವಂತೆ ಆಗಲಿ ಎಂದು ಗಂಟಿಹೊಳೆ ಅಭಿಪ್ರಾಯಪಟ್ಟರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು
ಗ್ರಾಮೀಣ ಭಾಗದಲ್ಲೂ ವಸತಿ ಕಟ್ಟಡಗಳಿಗೆ ಒಸಿ-ಸಿಸಿ ಬೇಕಿಲ್ಲ