ಹೊಸನಗರ: ಕೋಡೂರಿನ ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು, ನವೀಕರಿಸಿದ ಪುಷ್ಕರಣಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದರು.
ಮಲೆನಾಡಿನ ಹೆಬ್ಬಾಗಿಲು ಹೊಸನಗರ ತಾಲೂಕಿನಲ್ಲಿ ಮಳೆಯಿಲ್ಲದೆ ಬೆಳೆಗಳು ಒಣಗುತ್ತಿರುವ ಹಿನ್ನೆಲೆಯಲ್ಲಿ ಮಳೆಗಾಗಿ ತಾಯಿ ಜೇನುಕಲ್ಲಮ್ಮನಲ್ಲಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದ ಶಾಸಕರು, ದೇವಿ ಪ್ರಾರ್ಥನೆಗೆ ಒಲಿದಿದ್ದು, ನಾಡಿನ ಹಾಗೂ ಕುಟುಂಬದ ಒಳಿತಿಗಾಗಿ ಭಕ್ತರು ದೇವಿಯಲ್ಲಿ ಬೇಡಿಕೊಳ್ಳುವಂತೆ ಅವರು ಮನವಿ ಮಾಡಿದರು.
ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕಲಗೋಡು ರತ್ನಾಕರ್ ಮಾತನಾಡಿ, ಶಾಸಕರ ವಿಶೇಷ ಮುತುವರ್ಜಿಯಿಂದ ದೇವಾಲಯದ ಅಭಿವೃದ್ಧಿ ಕಾರ್ಯಗಳು ಚುರುಕುಗೊಂಡಿವೆ ಎಂದು ಬೇಳೂರು ಗೋಪಾಲಕೃಷ್ಣರವರನ್ನು ಅಭಿನಂದಿಸಿದರು. ಸ್ಥಳೀಯರ ಸಾಂಸ್ಕೃತಿಕ ಹಾಗೂ ಧಾರ್ಮಿಕ ನಂಬಿಕೆಯ ಪ್ರತೀಕವಾಗಿರುವ ಈ ಜಾತ್ರೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 25 ಸಾವಿರಕ್ಕೂ ಅಧಿಕ ಭಕ್ತರು ಸರತಿ ಸಾಲಿನಲ್ಲಿ ನಿಂತು ದೇವಿಗೆ ಹಣ್ಣು-ಕಾಯಿ ಸಮರ್ಪಿಸಿ ದರ್ಶನ ಪಡೆದರು.ಕಾರ್ಯಕ್ರಮದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳು, ಜಾತ್ರಾ ಸಮಿತಿ ಹಾಗೂ ವ್ಯವಸ್ಥಾಪನಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕೋಡೂರಿನ ಸಮೀಪದ ಇತಿಹಾಸ ಪ್ರಸಿದ್ಧ ಅಮ್ಮನಘಟ್ಟ ಜೇನುಕಲ್ಲಮ್ಮ ದೇವಾಲಯದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡಿದ್ದ ಶಾಸಕ ಗೋಪಾಲಕೃಷ್ಣ ಬೇಳೂರು, ನವೀಕರಿಸಿದ ಪುಷ್ಕರಣಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಲೋಕಾರ್ಪಣೆ ಮಾಡಿದರು.