10 ಸೆಂಟ್ಸ್ ಭೂಮಿ ಪರಿವರ್ತನೆಗೆ ಶಾಸಕ ಗುರ್ಮೆ ಸೂಚನೆ

KannadaprabhaNewsNetwork |  
Published : Jul 11, 2024, 01:35 AM IST
ನಗರ10 | Kannada Prabha

ಸಾರಾಂಶ

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರ ಸಾಮಾನ್ಯ ಸಭೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆಯಿತು. ಶಾಸಕರಾದ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ಯಶಪಾಲ್‌ ಸುವರ್ಣ ಭಾಗವಹಿಸಿದರು.

ಕನ್ನಡಪ್ರಭ ವಾರ್ತೆ ಉಡುಪಿ

ಬುಧವಾರ ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸಾಮಾನ್ಯ ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಯಶಪಾಲ್ ಸುವರ್ಣ ಅವರು ಭಾಗವಹಿಸಿದರು.

ಸಭೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಮಾತನಾಡಿ, ನಗರಾಭಿವೃದ್ಧಿ ಪ್ರಾಧಿಕಾರ ವ್ಯಾಪ್ತಿಯ ಕೈಗಾರಿಕಾ ವಲಯದಲ್ಲಿ ವಾಸ್ತವ್ಯದ ಉದ್ದೇಶಾಕ್ಕಾಗಿ 10 ಸೆಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ ವಿನ್ಯಾಸ ಮಾಡಲು ಹಿಂದೆ ಅವಕಾಶವಿತ್ತು. ಈಗ ಒಂದು ವರ್ಷಗಳಿಂದ 10 ಸೆಂಟ್ಸ್ ಜಾಗವನ್ನು ಕನ್ವರ್ಷನ್ ಹಾಗೂ ಏಕ ವಿನ್ಯಾಸ ಮಾಡಲು ಅವಕಾಶ ನೀಡುತ್ತಿಲ್ಲ. ಇದರಿಂದ ಅನೇಕ ಕಡತಗಳು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಬಾಕಿಯಾಗಿದ್ದು ಇದರಿಂದ ಜನರು ಪರದಾಡುವಂತಾಗಿದೆ. ಈ ಬಗ್ಗೆ ಇಲಾಖಾಧಿಕಾರಿಗಳು ಗಮನಹರಿಸಬೇಕು ಎಂದು ಸೂಚನೆ ನೀಡಿದರು.

ಅಲ್ಲದೇ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಕೆರೆಗಳ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸಿದ್ದು ಕಾಮಗಾರಿಗಳನ್ನು ಕೂಡಲೇ ಅನುಷ್ಠಾನಗೊಳಿಸಲು ತಿಳಿಸಿದರು.

ಈ ಸಂದರ್ಭ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಮಹೇಶ್ ಚಂದ್ರ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಲೈಬ್ರರಿ ಮೇಲ್ವಿಚಾರಕರಿಗೆ ವರ್ಷದಿಂದ ಅರ್ಧ ವೇತನ!
ಕುರಿಗಾಹಿ ಸಿಎಂ ಆಗಿದ್ದಕ್ಕೆ ಹೊಟ್ಟೆಕಿಚ್ಚು : ಸಿದ್ದು ಕಿಡಿ