ವೀರಯೋಧ ಲೋಕೇಶ್ ಅಂತಿಮ ದರ್ಶನ ಪಡೆದ ಶಾಸಕ ಎಚ್.ಟಿ.ಮಂಜು

KannadaprabhaNewsNetwork |  
Published : Oct 28, 2025, 12:18 AM IST
27ಕೆಎಂಎನ್ ಡಿ26,27 | Kannada Prabha

ಸಾರಾಂಶ

ಕೆ.ಆರ್.ಪೇಟೆ ನಿವಾಸಿ ವೀರಯೋಧ ಲೋಕೇಶ್ ಅವರ ಪಾರ್ಥಿ ಶರೀರವನ್ನು ಪಟ್ಟಣದ ಹೇಮಾವತಿ ಬಡಾವಣೆಯ ಮೃತರ ನಿವಾಸಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಹುಟ್ಟೂರು ಮೈಲಾರಪಟ್ಟಣಕ್ಕೆ ತೆಗೆದುಕೊಂಡು ಹೋಗಲಾಯಿತು.

ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ

ಪಂಜಾಬಿನ ಪಠಾಣ್ ಕೋಟ್ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಹೃದಯಾಘಾತ ಮತ್ತು ಬ್ರೈನ್ ಸ್ಟ್ರೋಕ್‌ಗೆ ಒಳಗಾಗಿ ಸಾವನ್ನಪ್ಪಿದ್ದ ಕೆ.ಆರ್.ಪೇಟೆ ನಿವಾಸಿ ವೀರಯೋಧ ಲೋಕೇಶ್ ಅವರ ಪಾರ್ಥಿ ಶರೀರವನ್ನು ಪಟ್ಟಣದ ಹೇಮಾವತಿ ಬಡಾವಣೆಯ ಮೃತರ ನಿವಾಸಕ್ಕೆ ತಂದು ಸಾರ್ವಜನಿಕರ ಅಂತಿಮ ದರ್ಶನದ ನಂತರ ಹುಟ್ಟೂರು ಮೈಲಾರಪಟ್ಟಣಕ್ಕೆ ತೆಗೆದುಕೊಂಡು ಹೋಗಲಾಯಿತು.

ಬೆಂಗಳೂರಿನಿಂದ ಸಕಲ ಸರ್ಕಾರಿ ಗೌರವಗಳೊಂದಿಗೆ ಗಡಿ ಭದ್ರತಾ ಪಡೆ ವಾಹನದಲ್ಲಿ ಪಟ್ಟಣದ ಹೇಮಾವತಿ ಬಡಾವಣೆಯಲ್ಲಿ ಮೃತ ಯೋಧ ವಾಸವಾಗಿದ್ದ ಮನೆ ಬಳಿ ಆಗಮಿಸಿದಾಗ ತಾಲೂಕಿನ ಮಾಕವಳ್ಳಿಯಲ್ಲಿ ಜನ ಸಂಪರ್ಕ ಸಭೆಯಲ್ಲಿ ಭಾಗವಹಿಸಿದ್ದ ಶಾಸಕ ಎಚ್.ಟಿ.ಮಂಜು ಅವರು ಸಭೆಯನ್ನು ಅರ್ಧಕ್ಕೆ ಮೊಟುಕುಗೊಳಿಸಿ ಪಟ್ಟಣಕ್ಕೆ ಆಗಮಿಸಿ ವೀರಯೋಧ ಲೋಕೇಶ್ ಅವರ ಪಾರ್ಥಿವ ಶರೀರಕ್ಕೆ ಪುಷ್ಪಮಾಲೆ ಹಾಕಿ ಅಂತಿಮ ನಮನ ಸಲ್ಲಿಸಿದರು.

ನಂತರ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್, ರಾಜ್ಯ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ನಾಗೇಂದ್ರ ಕುಮಾರ್, ಮಾಜಿ ಶಾಸಕರಾದ ಕೆ.ಬಿ.ಚಂದ್ರಶೇಖರ್, ಬಿ.ಪ್ರಕಾಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ ಬಿ.ಎಲ್.ದೇವರಾಜು, ಪುರಸಭೆ ಅಧ್ಯಕ್ಷೆ ಪಂಕಜ ಪ್ರಕಾಶ್, ಸದಸ್ಯರಾದ ಡಿ ಪ್ರೇಮಕುಮಾರ್, ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಆನಂದ್ ಕುಮಾರ್, ಪುರಸಭೆ ಮಾಜಿ ಸದಸ್ಯ ಕೆ.ಆರ್.ನೀಲಕಂಠ, ಪಟ್ಟಣ ಪೊಲೀಸ್ ಠಾಣೆ ಆರಕ್ಷಕ ನಿರೀಕ್ಷಕಿ ಬಿ.ಸುಮಾರಾಣಿ, ಸಮಾಜ ಸೇವಕ ಆಲಂಬಾಡಿ ಕಾವಲು ಮಲ್ಲಿಕಾರ್ಜುನ ಸೇರಿದಂತೆ ನೂರಾರು ಜನ ಲೋಕೇಶ್ ಅವರ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಸಿದರು.

ಕಳೆದ 25 ವರ್ಷಗಳಿಂದ ಭಾರತೀಯ ಸೇನೆ ಗಡಿ ಭದ್ರತಾ ಪಡೆಯಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಲೋಕೇಶ್ ಅವರು ಕೆ.ಆರ್. ಪೇಟೆ ನಿವಾಸಿಗಳಾದ ಜಯಮ್ಮ - ರಾಮೇಗೌಡರ ಪುತ್ರಿ ಆಶಾರನ್ನು ವಿವಾಹವಾಗಿ ಪಟ್ಟಣದಲ್ಲಿಯೇ ನೆಲೆಸಿದ್ದರು.

PREV

Recommended Stories

2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ