ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಶಾಸಕರ ಸಹೋದರ ಎಚ್.ಟಿ.ಲೋಕೇಶ್ ನೇತೃತ್ವದಲ್ಲಿ ಪಟ್ಟಣದ ದುಂಡುಶೆಟ್ಟಿ ಲಕ್ಷ್ಮಮ್ಮ ಸ್ಮಾರಕ ಸಾರ್ವಜನಿಕ ಆಸ್ಪತ್ರೆ ಹೊರ-ಒಳ ರೋಗಿಗಳಿಗೆ ಹಣ್ಣು ಅಂಪಲು ವಿತರಿಸಿದರು. ಶಾಸಕರ ಅಭಿಮಾನಿಗಳು ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತರಿಗೆ ತೆಂಗಿನ ಸಸಿ ನೀಡಿ ಹಾಗೂ ಕೇಕ್ ಕತ್ತರಿಸುವ ಮೂಲಕ ಶಾಸಕ ಎಚ್.ಟಿ.ಮಂಜು ಅವರ ಹುಟ್ಟುಹಬ್ಬವನ್ನು ಆಚರಿಸಿ ಶುಭಕೋರಿದರು.
ಈ ವೇಳೆ ಹಲವು ಜೆಡಿಎಸ್ ಮುಖಂಡರು ಮಾತನಾಡಿ, ಎಚ್.ಟಿ.ಮಂಜು ಕ್ಷೇತ್ರದ ಶಾಸಕರಾಗಿದ್ದರೂ ಸಾಮಾನ್ಯ ಕಾರ್ಯಕರ್ತರಂತೆ ಎಲ್ಲರೊಂದಿಗೆ ಬೆರೆತು ಕಾರ್ಯಕರ್ತರ ಮತ್ತು ಶ್ರೀಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದಾರೆ ಎಂದರು.ಹೃದಯವಂತ ನಾಯಕನಾಗಿರುವ ಎಚ್.ಟಿ.ಮಂಜು ಅವರು ಜಿಲ್ಲೆಯ ಏಕೈಕ ಜೆಡಿಎಸ್ ಶಾಸಕರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಅವರಿಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಉನ್ನತ ಸ್ಥಾನಮಾನಗಳು ಸಿಗಲಿ ಎಂದು ಹಾರೈಸಿದರು.
ನಾಳೆ ಸಚಿವರಿಂದ ಜನಸ್ಪಂದನಾ ಸಭೆ: ಡಾ.ಎಸ್.ಯು.ಅಶೋಕ್
ಕೆ.ಆರ್.ಪೇಟೆ:ಪಟ್ಟಣದ ಟಿಎಪಿಸಿಎಂಎಸ್ ಆವರಣದಲ್ಲಿ ಜೂನ್ 24 ರಂದು ಮಧ್ಯಾಹ್ನ ನಡೆಯುವ ಜಿಲ್ಲಾ ಮಟ್ಟದ ಜನಸ್ಪಂದನಾ ಸಭೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಕುರಿತು ಲಿಖಿತ ಅರ್ಜಿ ನೀಡುವಂತೆ ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಮನವಿ ಮಾಡಿದ್ದಾರೆ.
ಈ ಕುರಿತು ಲಿಖಿತ ಪತ್ರಿಕಾ ಮಾಹಿತಿ ಬಿಡುಗಡೆ ಮಾಡಲಿರುವ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಜನಸ್ಪಂದನಾ ಸಭೆ ನಡೆಯಲಿದೆ. ಕ್ಷೇತ್ರದ ಶಾಸಕರಾದ ಹೆಚ್.ಟಿ.ಮಂಜು, ಜಿಲ್ಲಾಧಿಕಾರಿ ಡಾ.ಕುಮಾರ, ಜಿಪಂ ಸಿಇಒ ಕೆ.ಆರ್.ನಂದಿನಿ ಸೇರಿದಂತೆ ಹಲವು ಜಿಲ್ಲಾ ಮಟ್ಟದ ಅಧಿಕಾರಿಗಳು ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದು ಕೊರತೆಅಹವಾಲು ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಇದರ ಸದುಪಯೋಗ ಪಡೆದುಕೊಂಡು ತಮ್ಮ ಸಮಸ್ಯೆಗಳನ್ನು ಪರಿಹರಿಸಕೊಳ್ಳಬೇಕೆಂದು ಕೋರಿದ್ದಾರೆ. ಸಭೆಗೆ ಮುನ್ನ ಕ್ಷೇತ್ರಕ್ಕೆ ಆಗಮಿಸಲಿರುವ ಸಚಿವ ಎನ್.ಚಲುವರಾಯಸ್ವಾಮಿ ಅವರು ವಿವಿಧ ಸರ್ಕಾರಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಿಲಾನ್ಯಾಸ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.