ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ಶಾಸಕ ಎಚ್‌.ವಿ.ವೆಂಕಟೇಶ್‌ ನಾಮಪತ್ರ ಸಲ್ಲಿಕೆ

KannadaprabhaNewsNetwork |  
Published : Aug 11, 2025, 12:30 AM IST
ಫೋಟೋ 10ಪಿವಿಡಿ1,10ಪಿವಿಜಿ1ಪಾವಗಡ,ಸಹಕಾರ ಬ್ಯಾಂಕ್‌ ಸಚಿವ ಕೆ.ಎನ್‌.ರಾಜಣ್ಣ,ಮಾಜಿ ಸಚಿವ ವೆಂಕಟರಮಣಪ್ಪ ಸಮ್ಮುಖದಲ್ಲಿ ಪಾವಗಡ ತಾಲೂಕಿನಿಂದ ಶಾಸಕ ಎಚ್‌.ವಿ.ವೆಂಕಟೇಶ್‌ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದರು. | Kannada Prabha

ಸಾರಾಂಶ

ಪಾವಗಡ: ಶಾಸಕ ಹಾಗೂ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ (ತುಮುಲ್‌) ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭಾನುವಾರ ತುಮಕೂರಿನಲ್ಲಿ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನಿರ್ದೇಶಕ ಸ್ಥಾನಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಪಾವಗಡ: ಶಾಸಕ ಹಾಗೂ ತುಮಕೂರು ಜಿಲ್ಲಾ ಸಹಕಾರ ಹಾಲು ಉತ್ಪಾದಕ ಸಂಘಗಳ ಒಕ್ಕೂಟದ (ತುಮುಲ್‌) ಅಧ್ಯಕ್ಷ ಎಚ್.ವಿ. ವೆಂಕಟೇಶ್ ಭಾನುವಾರ ತುಮಕೂರಿನಲ್ಲಿ ಜಿಲ್ಲಾ ಕೇಂದ್ರದ ಸಹಕಾರ ಬ್ಯಾಂಕ್ (ಡಿಸಿಸಿ ಬ್ಯಾಂಕ್) ನಿರ್ದೇಶಕ ಸ್ಥಾನಕ್ಕೆ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು.

ಅವಧಿ ಮುಕ್ತಾಯ ಅನ್ವಯ ಜಿಲ್ಲಾ ಡಿಸಿಸಿ ಬ್ಯಾಂಕ್‌ ನಿರ್ದೇಶಕರ ಆಯ್ಕೆಗೆ ಚುನಾವಣೆ ಘೋಷಣೆ ಅಗಿದ್ದು 10 ನಿರ್ದೇಶಕರ ಸ್ಥಾನದ ಆಯ್ಕೆಗೆ ಆ.10ರಿಂದ 16ವರೆವಿಗೆ ನಾಮಪತ್ರ ಸಲ್ಲಿಕೆ ಕಾರ್ಯ ಆರಂಭಗೊಂಡಿದೆ. ಇದೇ ಆ.24ಚುನಾವಣೆ ನಡೆಯಲಿದ್ದು, ಇದಾದ ಬಳಿಕ ಮತ ಎಣಿಕೆ ಕಾರ್ಯ ನಡೆಯಲಿದೆ. ಒಂದು ಸ್ಥಾನಕ್ಕೆ ಇಬ್ಬರು ಅಥವಾ ಮೂರು ಮಂದಿ ನಾಮಪತ್ರ ಸಲ್ಲಿಸಿದ್ದ ಪಕ್ಷದಲ್ಲಿ ಸ್ಥಳೀಯ ವಿಎಸ್‌ಎಸ್‌ಎಸ್ ಎನ್‌ ಸಂಘದಿಂದ ಆಯ್ಕೆಗೊಳಿಸಿದ ಡೆಲಿಗೇಟ್ಸ್ ಮಾತ್ರ ಮತದಾನ ಮಾಡಲು ಅವಕಾಶವಿರುತ್ತದೆ. ಸಿಂಗಲ್‌ ನಾಮಪತ್ರವಾಗಿದ್ದರೆ ಅವಿರೋಧ ಆಯ್ಕೆಗೆ ಅವಕಾಶ ಕಲ್ಪಿಸಲಾಗಿದೆ. ಜಿಲ್ಲಾದ್ಯಂತ ತಾಲೂಕಿಗೆ ಒಬ್ಬರಂತೆ 10ಮಂದಿ ನಿರ್ದೇಶಕರಾಗಿ ಆಯ್ಕೆಗೊಳಿಸುವ ಹಿನ್ನಲೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಪ್ರತಿ ತಾಲೂಕಿನಿಂದ ನಾಮಪತ್ರ ಸಲ್ಲಿಕೆಯ ಕಾರ್ಯ ಆರಂಭಗೊಂಡಿದೆ.ಪಾವಗಡ ತಾಲೂಕಿನಲ್ಲಿ 21 ವ್ಯವಸಾಯ ಸೇವಾ ಸಹಕಾರ ಸಂಘಗಳಿದ್ದು,ಸ್ಥಳೀಯ ವಿಎಸ್‌ಎಸ್ಎಸ್‌ ಸಂಘಗಳಿಂದ ಆಯ್ಕೆಯಾದ ಡೆಲಿಗೆಟ್ಸ್‌ಗಳು ಚುನಾವಣೆಯಲ್ಲಿ ಮತದಾನ ಮಾಡುವ ಅರ್ಹತೆ ಹೊಂದಿರುತ್ತಾರೆ.

ಬೆಂಗಲಿಗ ಮುಖಂಡರ ಜತೆ ಪಾವಗಡದಿಂದ ವೆಂಕಟೇಶ್‌ ನಾಮಪತ್ರ ಸಲ್ಲಿಸಿದ್ದು, ತಾಲೂಕಿನಿಂದ ಹೆಚ್ಚಿನ ಸಂಖ್ಯೆಯ ಕಾರ್ಯಕರ್ತರು ತೆರಳಿ ಸಾಥ್‌ ನೀಡಿದರು. ಇದೇ ವೇಳೆ ಸಚಿವ ರಾಜಣ್ಣ, ಮಾಜಿ ಸಚಿವ ವೆಂಕಟರಮಣಪ್ಪ, ಜಿಲ್ಲಾ ಡಿಸಿಸಿ ಬ್ಯಾಂಕ್‌ ನಿರ್ದೇಶಕರಾದ ಟಿ.ಎನ್.ನರಸಿಂಹಯ್ಯ,ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ,ಮಾಜಿ ಗ್ರಾಪಂ ಅಧ್ಯಕ್ಷ ತಿಪ್ಪೇಸ್ವಾಮಿ,ಯುವ ಮುಖಂಡ ಕನಿಕಲಬಂಡೆ ಅನಿಲ್‌ಕುಮಾರ್‌ ಹಾಗೂ ಇತರೆ ಅನೇಕ ಮಂದಿ ಕಾಂಗ್ರೆಸ್ ಮುಖಂಡರು ಇದ್ದರು.

PREV

Recommended Stories

ರೇಣುಕಾಂಬೆ ದರ್ಶನಕ್ಕೆ ಬಂದಿದ್ದಾಗ ಮಗುವಿಗೆ ಜನ್ಮ ನೀಡಿದ ಅವಿವಾಹಿತೆ
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ