ಕನ್ನಡಪ್ರಭ ವಾರ್ತೆ ಸಿಂಧನೂರು
ನಗರದ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 55ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಗುರುವಾರ ವಿಷ ಮಿಶ್ರಿತ ಆಹಾರ ಸೇವಿಸಿ ಅಸ್ವಸ್ಥರಾದ ಘಟನೆಯ ಹಿನ್ನೆಲೆಯಲ್ಲಿ ಶುಕ್ರವಾರ ಶಾಸಕ ಹಂಪನಗೌಡ ಬಾದರ್ಲಿ ಸೇರಿದಂತೆ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಭೇಟಿ ನೀಡಿ ವಿದ್ಯಾರ್ಥಿನಿಯರೊಂದಿಗೆ ಚರ್ಚಿಸಿ ಹಾಸ್ಟೆಲ್ ವ್ಯವಸ್ಥೆ ಕುರಿತು ಮಾಹಿತಿ ಪಡೆದರು.
ಹಾಸ್ಟೆಲ್ ಸ್ವಚ್ಛತೆ, ಊಟದ ವ್ಯವಸ್ಥೆ, ಅಭ್ಯಾಸ ಕುರಿತಾಗಿ ಹಲವು ಬಗೆಯ ಪ್ರಶ್ನೆಗಳನ್ನು ಕೇಳಿ ವಿದ್ಯಾರ್ಥಿನಿಯೊಂದಿಗೆ ಮಾಹಿತಿ ಪಡೆದರು. ಪ್ರಾಚಾರ್ಯರು ಮತ್ತು ಮೇಲ್ವಿಚಾರಕರಿಂದ ತಮಗೆ ಯಾವುದೇ ತೊಂದರೆ ಇಲ್ಲ. ಅಡುಗೆ ಮಾಡುವ ಮಹಿಳೆಯರು ಮಾತ್ರ ತಮಗೆ ತೊಂದರೆ ಕೊಡುತ್ತಿದ್ದಾರೆ, ಹಲವಾರು ಬಾರಿ ನಿಂದಿಸಿದ್ದಾರೆ, ಮಂಡಾಳ ಮತ್ತು ಅವಲಕ್ಕಿ ಒಗ್ಗರಣೆಗಳನ್ನು ರುಚಿಯಾಗಿ ಮಾಡುವುದಿಲ್ಲ ಎಂದು ವಿದ್ಯಾರ್ಥಿನಿಯರು ತಮ್ಮ ಅಳಲನ್ನು ತೋಡಿಕೊಂಡರು.ಆರೋಗ್ಯ ಸೇವೆಗಳ ಗುಣಮಟ್ಟ ಕಾಪಾಡಲು ಸೂಚನೆ
ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ಚಂದ್ರಶೇಖರಯ್ಯ, ಕ್ಷಯ ರೋಗ ನಿಯಂತ್ರಣಾಧಿಕಾರಿ ಡಾ.ಯಶೋದಾ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶಿವುಕುಮಾರ ನಾರ, ಸಿಂಧನೂರು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಅಯ್ಯನಗೌಡ,ಇಲಾಖೆ, ಆಸ್ಪತ್ರೆಯ ಅಧಿಕಾರಿ, ಸಿಬ್ಬಂದಿ, ತಜ್ಞ ವೈದ್ಯರು ಹಾಜರಿದ್ದರು.
ಮಸ್ಕಿ: ಪಟ್ಟಣದ ಮೊರಾರ್ಜಿ ದೇಸಾಯಿ ವಸತಿ ಶಾಲೆ ಸೇರಿದಂತೆ ವಿವಿಧ ವಸತಿ ಶಾಲೆಗಳಿಗೆ ಖಾದಿ ಗ್ರಾಮೋದ್ಯೋಗ ನಿಗಮದ ಅಧ್ಯಕ್ಷ ಶಾಸಕ ಆರ್ ಬಸನಗೌಡ ತುರುವಿಹಾಳ ಶುಕ್ರವಾರ ಭೇಟಿ ನೀಡಿ ಆಹಾರ ಧಾನ್ಯಗಳನ್ನು ಪರಿಶೀಲನೆ ನಡೆಸಿದರು.