ಹೊಸಪೇಟೆ: ತುಂಗಭದ್ರಾ ಜಲಾಶಯಕ್ಕೆ ಸಿಂಧನೂರು ಶಾಸಕ ಹಂಪನಗೌಡ ಬಾದರ್ಲಿ ಭಾನುವಾರ ಭೇಟಿ ನೀಡಿ, ಜಲಾಶಯಕ್ಕೆ ಹೊಸ ಗೇಟ್ ಅಳವಡಿಕೆ ಕಾರ್ಯ ಪರಿಶೀಲಿಸಿದರು. ಈ ವೇಳೆ ತುಂಗಭದ್ರಾ ಮಂಡಳಿಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಈ ವೇಳೆ ಮುಖ್ಯ ಅಭಿಯಂತರ ಲಕ್ಷ್ಮಣ ನಾಯ್ಕ, ಕಾರ್ಯಪಾಲಕ ಅಭಿಯಂತರ, ಎನ್. ಚಂದ್ರಶೇಖರ್, ಸಹಾಯಕ ಅಭಿಯಂತರ ಪಂಪಾಪತಿ ಸೇರಿದಂತೆ ಇತರರು ಇದ್ದರು.
ಜಲಾಶಯದ 33 ಕ್ರೆಸ್ಟ್ ಗೇಟಗಳ ಪೈಕಿ, ನಂ.18 ಗೇಟ್ ಅಳವಡಿಕೆ ಕಾರ್ಯ ಪೂರ್ಣವಾಗಿದೆ. ಇನ್ನು ಎಂಟು ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪ್ರಗತಿಯಲ್ಲಿದ್ದು, ಶೇ.80ರಿಂದ 90 ರಷ್ಟು ಕಾರ್ಯ ಪೂರ್ಣಗೊಂಡಿದೆ. ಫೆಬ್ರವರಿ ಅಂತ್ಯದಲ್ಲಿ 12 ಗೇಟ್ ಅಳವಡಿಸುವ ಕಾರ್ಯ ಸಹ ಮುಗಿಯಲಿದೆ. ಮೇ ಅಂತ್ಯದೊಳಗೆ ಜಲಾಶಯದ ಎಲ್ಲ ಗೇಟ್ ಗಳ ಕಾರ್ಯವನ್ನು ಪೂರ್ಣಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್ ಅಳವಡಿಕೆ ಕಾರ್ಯ ಪ್ರಗತಿ ಪರಿಶೀಲಿಸಿದ ಶಾಸಕ ಹಂಪನಗೌಡ ಬಾದರ್ಲಿ ಅವರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜೊತೆಗೆ ತಾಂತ್ರಿಕ ಕಾರಣಗಳಿಂದ ಸರ್ಕಾರಕ್ಕೆ ಮರಳಿರುವ ₹10 ಕೋಟಿ ಹಣದ ಜೊತೆಗೆ ಉಳಿದ ಮೊತ್ತವನ್ನು ಸಹ ಮಂಜೂರು ಮಾಡಿಸುವುದಾಗಿ ಶಾಸಕರು ಭರವಸೆ ನೀಡಿದ್ದಾರೆ ಎನ್ನುತ್ತಾರೆ ತುಂಗಭದ್ರಾ ಮಂಡಳಿಯ ಕಾರ್ಯಪಾಲಕ ಅಭಿಯಂತರ ಎನ್.ಚಂದ್ರಶೇಖರ್.