ಕೊಪ್ಪಳ: ನಗರದಲ್ಲಿ ಸುರಿದ ಮಳೆಯಿಂದ ವಿವಿಧ ಪ್ರದೇಶಗಳಲ್ಲಿ ರಸ್ತೆ ಹಾಗೂ ಚರಂಡಿ ವ್ಯವಸ್ಥೆಗೆ ಹಾನಿಯಾಗಿದ್ದು, ಮಳೆ ನೀರು ಸರಾಗವಾಗಿ ಹರಿದು ಹೋಗದೆ ಸಾರ್ವಜನಿಕರಿಗೆ ತೊಂದರೆಯಾಗಿರುವ ಹಿನ್ನೆಲೆ ಶಾಸಕ ಕೆ.ರಾಘವೇಂದ್ರ ಹಿಟ್ನಾಳ ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ,ಅಗತ್ಯವಿರುವ ಕಡೆಗಳಲ್ಲಿ ತುರ್ತು ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು. ನಗರದಲ್ಲಿ ಮೂಲಸೌಕರ್ಯಗಳ ಅಭಿವೃದ್ಧಿ ಹಾಗೂ ಸಾರ್ವಜನಿಕರ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಸನ್ನ ಗಡಾದ್, ಜಿಪಂ ಮಾಜಿ ಸದಸ್ಯ ಗವಿಸಿದ್ದಪ್ಪ ಕರಡಿ, ನಗರಸಭೆ ಮಾಜಿ ಅಧ್ಯಕ್ಷ ಅಮ್ಜದ್ ಪಟೇಲ್, ಮಹೇಂದ್ರ ಚೋಪ್ರಾ, ಕತೀಬ್ ಬಾಷು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಕಾಟನ್ ಪಾಷಾ, ಶಿವಕುಮಾರ್ ಶೆಟ್ಟರ್, ಅರುಣ್ ಅಪ್ಪುಶೆಟ್ಟಿ, ಅಜೀಮ್ ಅತ್ತರ್, ಅಜ್ಜಪ್ಪ ಕೊಪ್ಪಳ, ವೀರಣ್ಣ ಸಂಡೂರ್, ಮಹೆಬೂಬ್ ಅರಗಂಜಿ, ಹಾಜಿ ಹುಸೈನ್, ಮಲ್ಲು ಪೂಜಾರ್,ಯೋಜನಾ ನಿರ್ದೇಶಕ ಮಂಜುನಾಥ್ ಗುಂಡೂರು, ಜೆಯಿ ಸೋಮಲಿಂಗಪ್ಪ, ಅಕ್ಬರ್ ಪಲ್ಟಾನ್ ಇತರರಿದ್ದರು.