ಅಂಬರಹಳ್ಳಿಯಲ್ಲಿ ಶಾಸಕರಿಂದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಚಾಲನೆ

KannadaprabhaNewsNetwork |  
Published : Apr 22, 2025, 01:51 AM IST
23ಕೆಎಂಎನ್ ಡಿ28 | Kannada Prabha

ಸಾರಾಂಶ

ಸರ್ಕಾರದಿಂದ ಬರುವ ಅನೇಕ ಯೋಜನೆ ಪಡೆದುಕೊಂಡು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಯುವಜನತೆ ಸ್ವಯಂ ಉದ್ಯೋಗದ ಕಡೆ ಹೆಚ್ಚು ಒತ್ತು ನೀಡಿ.

ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿ

ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲಾ ಆವರಣದಲ್ಲಿ ಶಾಸಕ ಕೆ.ಎಂ.ಉದಯ್ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಾಣ ಮಾಡಿರುವ ಶುದ್ಧ ಕುಡಿಯುವ ನೀರು ಘಟಕಕ್ಕೆ ಚಾಲನೆ ನೀಡಿದರು.

ನಂತರ ಮಾತನಾಡಿದ ಶಾಸಕರು, ಶುದ್ಧ ಕುಡಿಯುವ ನೀರು ನಮ್ಮೆಲ್ಲರ ಹಕ್ಕು. ನೀರನ್ನು ಅನಗತ್ಯವಾಗಿ ಪೋಲು ಮಾಡುವುದು ಕೂಡ ಅಕ್ಷಮ್ಯ. ನೀರು ಅತ್ಯಮೂಲ್ಯ ಮಿತವಾಗಿ ಬಳಸಬೇಕು. ಮುಂದಿನ ಪೀಳಿಗೆಗೂ ಕೂಡ ನೈಸರ್ಗಿಕ ಸಂಪತ್ತನ್ನು ಉಳಿಸುವ ಕೆಲಸವಾಗಬೇಕು ಎಂದರು.

ಈ ಹಿಂದೆ ಕದಲೂರು ಉದಯ್ ಚಾರಿಟಬಲ್ ಟ್ರಸ್ಟ್‌ನಿಂದ 25ಕ್ಕೂ ಹೆಚ್ಚು ದರ ರಹಿತ ನೀರಿನ ಘಟಕಗಳನ್ನು ಸಾರ್ವಜನಿಕರ ಆರೋಗ್ಯ ದೃಷ್ಟಿಯಿಂದ ಸ್ಥಾಪಿಸಲಾಗಿತ್ತು. ಟ್ರಸ್ಟ್‌ನಿಂದ ಸಮಾಜಮುಖಿ ಸೇವೆ ನಿರಂತರವಾಗಿರುತ್ತದೆ ಎಂದರು.

ಸರ್ಕಾರದಿಂದ ಬರುವ ಅನೇಕ ಯೋಜನೆ ಪಡೆದುಕೊಂಡು ಯುವಕರು ಸ್ವಯಂ ಉದ್ಯೋಗದಲ್ಲಿ ತೊಡಗಿಸಿಕೊಂಡರೆ ನಿರುದ್ಯೋಗ ಸಮಸ್ಯೆ ಕಡಿಮೆಯಾಗುತ್ತದೆ. ಈ ನಿಟ್ಟಿನಲ್ಲಿ ಯುವಜನತೆ ಸ್ವಯಂ ಉದ್ಯೋಗದ ಕಡೆ ಹೆಚ್ಚು ಒತ್ತು ನೀಡಿ ಎಂದರು.

ಈ ವೇಳೆ ಗ್ರಾಮಸ್ಥರು ಗ್ರಾಮದಲ್ಲಿ ಕೃಷಿ ಚಟುವಟಿಕೆಗಳಿಗೆ ವಿದ್ಯುತ್ ತೊಂದರೆ ಆಗುತ್ತಿದೆ. ದಯಮಾಡಿ ಸರಿಪಡಿಸಿಕೊಡಿರೆಂದು ಶಾಸಕರಲ್ಲಿ ಮನವಿ ಮಾಡಿದರು. ಶಾಸಕರು ಕೂಡಲೇ ಸೆಸ್ಕ್ ಇಇಗೆ ಕರೆ ಮಾಡಿ ವಿದ್ಯುತ್ ಸಮಸ್ಯೆ ಸರಿಪಡಿಸಲು ಸೂಚಿಸಿದರು.

ಈವೇಳೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಜಿಪಂ ಮಾಜಿ ಸದಸ್ಯ ಎ.ಎಸ್. ರಾಜೀವ, ಗ್ರಾಪಂ ಸದಸ್ಯರಾದ ಮಹೇಶ, ಗೀತಾ ಸತೀಶ, ಲಕ್ಷ್ಮಿ ರಾಮಚಂದ್ರ, ಮುಖಂಡ ಅಂಬರಹಳ್ಳಿ ಕೃಷ್ಣ ಸೇರಿದಂತೆ ಮತ್ತಿತರಿದ್ದರು.

ಏ.27 ರಂದು ವಸತಿ ಶಾಲೆಗಳ ಪ್ರವೇಶ ಪರೀಕ್ಷೆ

ಮಂಡ್ಯ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ ನಿರ್ವಹಿಸುತಿರುವ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನ 6ನೇ ತರಗತಿ ಪ್ರವೇಶಕ್ಕಾಗಿ ಅಲ್ಪಸಂಖ್ಯಾತರ ಸಮುದಾಯದವರಾದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬುದ್ದಿಸ್ಟ್, ಸಿಖ್ ಮತ್ತು ಪಾರ್ಸಿ ಮತ್ತು ಪ.ಜಾತಿ, ಪಂಗಡ ಹಾಗೂ ಇತರೆ ಹಿಂದುಳಿದ ವರ್ಗಗಳ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಏಪ್ರಿಲ್ 27ರಂದು ರಾಜ್ಯಾದಾದ್ಯಂತ ಏಕಕಾಲಕ್ಕೆ ಪ್ರವೇಶ ಪರೀಕ್ಷೆ ನಡೆಯಲಿದೆ. ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಸೇವಾಸಿಂಧು ಪೂರ್ಟಲ್(ಆನ್‌ಲೈನ್) ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವೆಬ್‌ಸೈಟ್ https://dom.karnataka.gov.in ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ದೂ-08232-297240, ಜಿಲ್ಲಾ ಕಚೇರಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಸಕ್ಕೆ ಬೆಂಕಿ: ಹೊಗೆಯಿಂದ ಮನೆಯಲ್ಲಿ ಉಸಿರಾಡಲು ಆಗುತ್ತಿಲ್ಲ:ನಟಿ ಐಂದ್ರಿತಾ
ಕಟ್ಟುನಿಟ್ಟು ಮಾಡಿದರೂ ನಿಲ್ಲದ ಪರಪ್ಪನ ಅಗ್ರಹಾರ ಪವಾಡ