ಕನ್ನಡಪ್ರಭ ವಾರ್ತೆ ಕುರುಗೋಡು
ಪಟ್ಟಣದಲ್ಲಿ ಬಸ್ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟಿನ್ ಉದ್ಘಾಟಿಸಿ ಅವರು ಮಾತನಾಡಿದರು.
ಕಂಪ್ಲಿ ವಿಧಾನಸಭಾ ಕ್ಷೇತ್ರದಲ್ಲಿ ಎರಡು ವರ್ಷದಲ್ಲಿ ೩೬೪ ಕಾಮಗಾರಿಗಳಿಗೆ ಭೂಮಿ ಪೂಜೆ ಮಾಡಿದರೂ ರಾಜ್ಯ ಸರ್ಕಾರ ನೀಡಿದ ಅನುದಾನ ಉಳಿಯುತ್ತಿದೆ ಎಂದು ಹೇಳಿದರು.ರಾಜ್ಯ ಸರ್ಕಾರದ ಅಭಿವೃದ್ಧಿಪರ ಚಿಂತನೆಗಳನ್ನು ಸಹಿಸದ ವಿರೋಧ ಪಕ್ಷದವರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ವಿರೋಧ ಪಕ್ಷದ ನಾಯಕರು ಕಂಪ್ಲಿ ವಿಧಾನಸಭಾ ಕ್ಷೇತ್ರಕ್ಕೆ ಬಂದು ಅಭಿವೃದ್ಧಿ ಕಾರ್ಯ ನೋಡಿ ನಂತರ ಆರೋಪಮಾಡಲಿ ಎಂದು ಸವಾಲು ಹಾಕಿದರು.
ಸ್ವಾತಂತ್ರ್ಯ ನಂತರ ದಿನಗಳಲ್ಲಿ ದೇಶ ಅನೇಕ ಸಮಸ್ಯೆ ಎದುರಿಸುತ್ತಿತ್ತು. ಅಂದು ನೆಹರೂ ನೇತೃತ್ವದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿ ಕಾಮಗಾರಿ ಮಾಡಿತ್ತು. ಅವರ ದೂರದೃಷ್ಟಿಯ ಫಲವಾಗಿ ರಸ್ತೆ, ಸಾರಿಗೆ, ಶಾಲಾ-ಕಾಲೇಜು, ಬೃಹತ್ ಜಲಾಶಯಗಳು ನಿರ್ಮಾಣವಾಗಿವೆ ಎಂದರು.
ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಮುಖ್ಯಾಧಿಕಾರಿ ಎಂ. ಹರ್ಷವರ್ಧನ ಮತ್ತು ಪುರಸಭೆ ಸದಸ್ಯರು ಇದ್ದರು.