ಅಭಿಮಾನಿಗಳು, ಕಾರ್ಯಕರ್ತರು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಶಾಸಕ ಕೆ. ಹರೀಶ್‌ಗೌಡ ಅವರಿಗೆ ದೇವರು ಹೆಚ್ಚಿನ ಆರೋಗ್ಯ ಹಾಗೂ ಅಧಿಕಾರ ನೀಡಿ ರಾಜಕೀಯ ಕ್ಷೇತ್ರದಲ್ಲಿ ಉತ್ತಮವಾಗಿ ಬೆಳೆದು ದೀನ ದಲಿತರ ಬಡಜನತೆಯ ಬಾಳಿಗೆ ಬೆಳಕಾಗಲಿ ಎಂದು ಹಾರೈಸಿದರು.
ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಚಾಮರಾಜ ಕ್ಷೇತ್ರ ಶಾಸಕ ಕೆ. ಹರೀಶ್ ಗೌಡ ಅವರ ಹುಟ್ಟುಹಬ್ಬವನ್ನು ಕ್ಷೇತ್ರದ ಕಾರ್ಯಕರ್ತರು, ಅಭಿಮಾನಿಗಳು ವಿವಿಧ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಅದ್ಧೂರಿಯಾಗಿ, ಸಂಭ್ರಮದಿಂದ ಆಚರಿಸಿದರು.
ಯಾವುದೇ ರಾಜಕೀಯ ಆಡಂಬರವಿಲ್ಲದೆ ಕ್ಷೇತ್ರದ ಹಲವು ಬಡಾವಣೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ, ರಕ್ತದಾನ ಶಿಬಿರ, ಶಾಲಾ ಮಕ್ಕಳಿಗೆ ಟೀ ಶರ್ಟ್, ಕಿಟ್‌ಗಳನ್ನು ವಿತರಿಸಿ, ಅನ್ನದಾನ, ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿ ಶಾಸಕರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಬೆಳಗ್ಗಿನಿಂದ ರಾತ್ರಿವರೆಗೆ ಅಭಿಮಾನಿಗಳು, ಕಾರ್ಯಕರ್ತರು ಹಾಗೂ ಕ್ಷೇತ್ರದ ಜನತೆ ಆಯೋಜಿಸಿದ್ದ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ, ತಮ್ಮ ಹುಟ್ಟುಹಬ್ಬಕ್ಕೆ ಅರ್ಥ ಕಲ್ಪಿಸಿಕೊಟ್ಟರು.
ಅಭಿಮಾನಿಗಳು, ಕಾರ್ಯಕರ್ತರು ದೇವಾಲಯಗಳಲ್ಲಿ ಪೂಜೆ ಸಲ್ಲಿಸಿ, ಶಾಸಕ ಕೆ. ಹರೀಶ್‌ಗೌಡ ಅವರಿಗೆ ದೇವರು ಹೆಚ್ಚಿನ ಆರೋಗ್ಯ ಹಾಗೂ ಅಧಿಕಾರ ನೀಡಿ ರಾಜಕೀಯ ಕ್ಷೇತ್ರದಲ್ಲಿ ಉತ್ತಮವಾಗಿ ಬೆಳೆದು ದೀನ ದಲಿತರ ಬಡಜನತೆಯ ಬಾಳಿಗೆ ಬೆಳಕಾಗಲಿ ಎಂದು ಹಾರೈಸಿದರು.
ಬೆಳಗ್ಗೆ ನಂಜನಗೂಡು ನಂಜುಂಡೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀಕಂಠೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ ಹುಟ್ಟುಹಬ್ಬ ದಿನದ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ನಂತರ ಮೈಸೂರಿನ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ನಗರದ ಕೆ.ಟಿ.ಸ್ಟ್ರೀಟ್ ನಲ್ಲಿರುವ ಕಾಲಭೈರವೇಶ್ವರ ದೇವಸ್ಥಾನ, ಕುವೆಂಪುನಗರದಲ್ಲಿರುವ ಬಂದಂತಮ್ಮ ಕಾಳಮ್ಮ ದೇವಸ್ಥಾನ, ಕೆ.ಜಿ. ಕೊಪ್ಪಲಿನಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನದಲ್ಲಿಯೂ ವಿಶೇಷ ಪೂಜೆ ಸಲ್ಲಿಸಿ ಜನರ ಆಶೀರ್ವಾದ ಪಡೆದರು. ಪಡುವಾರಹಳ್ಳಿ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನೋಟ್ ಬುಕ್ ಮತ್ತು ಪೆನ್ ವಿತರಿಸಿದರು.
ತಿಲಕ್ ನಗರದ ಅಂಧ ಮತ್ತು ಮೂಕ ಮಕ್ಕಳ ಶಾಲೆಗೆ ಭೇಟಿ ನೀಡಿ ಮಕ್ಕಳೊಂದಿಗೆ ಊಟ ಮಾಡಿದರು,
ನಗರಪಾಲಿಕೆ ಮಾಜಿ ಸದಸ್ಯರಾದ ಪೈ. ಶ್ರೀನಿವಾಸ್ ಅವರು ಆಯೋಜಿಸಿದ್ದ ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ್ದರು. ಮಂಜುನಾಥಪುರದಲ್ಲಿ ಟೀ ಶರ್ಟ್ ವಿತರಿಸಿದರು.
ಜನರ ಪ್ರೀತಿಯೇ ನನಗೆ ದೊಡ್ಡ ಗಿಫ್ಟ್:
ಚಾಮರಾಜ ಕ್ಷೇತ್ರದಲ್ಲಿ ನನ್ನ ಹುಟ್ಟುಹಬ್ಬದ ಅಂಗವಾಗಿ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವ ಸಾರ್ವಜನಿಕರು, ಅಭಿಮಾನಿಗಳು ಹಾಗೂ ಕಾರ್ಯಕರ್ತರಿಗೆ ಅಭಿನಂದಿಸಿ ಮಾತನಾಡಿ, ಪ್ರತಿ ಕ್ಷಣವೂ ಜನರಿಗಾಗಿ ಇರಬೇಕು, ದೇವರ ಆಶೀರ್ವಾದ ಮತ್ತು ಜನರ ಪ್ರೀತಿಯೇ ನನಗೆ ದೊಡ್ಡ ಗಿಫ್ಟ್ ಎಂದು ತಿಳಿಸಿದರು.
ಹುಟ್ಟುಹಬ್ಬದ ಅಂಗವಾಗಿ ನಡೆದ ಆರೋಗ್ಯ ಶಿಬಿರದಲ್ಲಿ ಸಾರ್ವಜನಿಕರು ಭಾಗವಹಿಸಿ ಸದುಪಯೋಗ ಪಡೆದುಕೊಂಡರು. ಸ್ಥಳೀಯ ಮುಖಂಡರು, ಕಾರ್ಯಕರ್ತರು ಮತ್ತು ಸಾವಿರಾರು ಸಾರ್ವಜನಿಕರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.