ಕನ್ನಡಪ್ರಭ ವಾರ್ತೆ ಮಧುಗಿರಿ
ಪಟ್ಟಣದ ಸರ್ಕಾರಿ ಪ್ರೌಢಶಾಲಾ ಆವರಣದಲ್ಲಿ ಮಧುಗಿರಿ ಸ್ಪೋರ್ಟ್ಸ್ ಕ್ಲಬ್ ಮತ್ತು ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕ ಸಹಯೋಗದೊಂದಿಗೆ ರಾಜ್ಯಮಟ್ಟದ 14 ವರ್ಷದೊಳಗಿನ ಸಬ್ ಜೂನಿಯರ್ ಬಾಲಕರ ಮತ್ತು ಬಾಲಕಿಯರ ಬ್ಯಾಡ್ಮಿಂಟನ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದ ಅವರು, ಉಪ ಮುಖ್ಯಮಂತ್ರಿ ಡಾ. ಜಿ .ಪರಮೇಶ್ವರ್ ಅವರು ಸ್ವತ: ಬಾಲ್ ಬ್ಯಾಡ್ಮಿಂಟನ್ ಆಟಗಾರರಾಗಿದ್ದು ಅವರೊಡನೆ ಚರ್ಚಿಸಿ ಮುಂದಿನ ದಿನಗಳಲ್ಲಿ ಮೀಸಲು ದೊರೆಯುವಂತೆ ಮಾಡುವುದಾಗಿ ತಿಳಿಸಿದರು.
ಕ್ರೀಡಾಪಟುಗಳು ಕ್ರೀಡೆಯಲ್ಲಿ ಸೋಲು- ಗೆಲುವನ್ನು ಸಮಾನವಾಗಿ ಸ್ವೀಕರಿಸಿ, ಕ್ರೀಡಾ ಸ್ಫೂರ್ತಿಯಿಂದ ಆಡಬೇಕು ಎಂದು ತಿಳಿಸಿ, ಮಧುಗಿರಿಯಲ್ಲಿ ಸತತವಾಗಿ ಎರಡನೇ ಬಾರಿ ರಾಜ್ಯಮಟ್ಟದ ಕ್ರೀಡಾಕೂಟವನ್ನು ಯಶಸ್ವಿಯಾಗಿ ನಡೆಸುತ್ತಿರುವ ಮಧುಗಿರಿ ಸ್ಪೋರ್ಟ್ಸ್ ಕ್ಲಬ್ ನ ಎಲ್ಲಾ ಪದಾಧಿಕಾರಿಗಳನ್ನು ಪ್ರಶಂಸಿದರು.ಪುರಸಭೆ ಮಾಜಿ ಅಧ್ಯಕ್ಷರಾದ ಎಂ. ಕೆ. ನಂಜುಂಡಯ್ಯ, ಎನ್. ಗಂಗಣ್ಣ ,ಯುವ ಮುಖಂಡ ಹರ್ಷ ಕುರುಬರಹಳ್ಳಿ, ಬಾಲ್ ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಕರ್ನಾಟಕದ ರಾಜ್ಯ ಕಾರ್ಯದರ್ಶಿ ಪ್ರವೀಣ್ ಕುಮಾರ್ ಸೇರಿ ಕ್ರೀಡಾಪಟುಗಳು ಪಾಲ್ಗೊಂಡಿದ್ದರು.
ಈ ಕ್ರೀಡಾಕೂಟಕ್ಕೆ ರಾಜ್ಯದಿಂದ 28 ಬಾಲಕರ ತಂಡ 16 ಬಾಲಕಿಯರ ತಂಡ ಪಾಲ್ಗೊಂಡಿದ್ದು, ರಾಯಚೂರು, ಗುಲ್ಬರ್ಗ, ದಾವಣಗೆರೆ, ಚಿತ್ರದುರ್ಗ, ಪುತ್ತೂರು ,ಶಿರಸಿ, ಮೈಸೂರು , ಚಾಮರಾಜನಗರ , ತುಮಕೂರು , ಬೆಂಗಳೂರು ,ಮುಳಬಾಗಿಲು, ಚಿಂತಾಮಣಿ ,ಚಿಕ್ಕಬಳ್ಳಾಪುರ, ಧರ್ಮಪುರ ಸೇರಿದಂತೆ ಸ್ಥಳೀಯ ಮಧುಗಿರಿಯ ಆಟಗಾರರು ಪಾಲ್ಗೊಂಡಿದ್ದರು.
ರಾಷ್ಟ್ರೀಯ ಕ್ರೀಡಾಪಟುಗಳಾದ ಬಾಬುರೆಡ್ಡಿ, ದಿವಾಕರ್ ,ತನುಶ್ರೀ ಇದ್ದರು.